Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉ.ಕ. ಕರಾವಳಿಯ ಜನವಸತಿ ಪ್ರದೇಶದಲ್ಲಿ...

ಉ.ಕ. ಕರಾವಳಿಯ ಜನವಸತಿ ಪ್ರದೇಶದಲ್ಲಿ ಉಪ್ಪು ನೀರಿನ ಸಮಸ್ಯೆ

ಕುಡಿಯುವ ನೀರಿಗೆ ತೊಂದರೆ ಅನುಭವಿಸುತ್ತಿರುವ ಜನರು

ವಾರ್ತಾಭಾರತಿವಾರ್ತಾಭಾರತಿ12 Nov 2023 11:02 AM IST
share
ಉ.ಕ. ಕರಾವಳಿಯ ಜನವಸತಿ ಪ್ರದೇಶದಲ್ಲಿ ಉಪ್ಪು ನೀರಿನ ಸಮಸ್ಯೆ

ಕಾರವಾರ, ನ.11: ಜಿಲ್ಲೆಯ ಕರಾವಳಿಯ ವಿವಿಧ ತಾಲೂಕಿನಲ್ಲಿ ಉಪ್ಪುನೀರಿನಿಂದ ಜನರಿಗೆ ಸಮಸ್ಯೆಯಾಗುತ್ತಿದ್ದು ಜನವಸತಿ ಪ್ರದೇಶಕ್ಕೆ ಉಪ್ಪುನೀರು ನುಗ್ಗುವುದರಿಂದ ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಕಾಳಿ ನದಿ ಹಿನ್ನೀರಿನ ಪ್ರದೇಶದ ಹಣಕೋಣ ಗ್ರಾಪಂ ವ್ಯಾಪ್ತಿಯ ಬಾವಿಗಳ ನೀರು ಈಗಾಗಲೇ ಉಪ್ಪಾಗಿದೆ.

ಕಾರವಾರದಲ್ಲಿ ಕಾಳಿ ಸಂಗಮ ಪ್ರದೇಶದಿಂದ ನದಿಯಲ್ಲಿ ಸುಮಾರು 25 ಕಿಮೀವರೆಗೂ ಸಮುದ್ರದ ಉಬ್ಬರದ ಸಮಯದಲ್ಲಿ ಉಪ್ಪು ನೀರು ನುಗ್ಗುತ್ತದೆ. ನದಿ ಹರಿವಿನ ವ್ಯಾಪ್ತಿ ಮಾತ್ರವಲ್ಲದೆ, ಹಿನ್ನೀರಿನ ಘಜನಿ ಪ್ರದೇಶಗಳು, ಸಣ್ಣ ತೊರೆಗಳ ಜಲವೂ ಉಪ್ಪಾಗಿದೆ. ಕಾರವಾರ ತಾಲೂಕಿನ ಚಿತ್ತಾಕುಲಾ, ಅಸ್ನೋಟಿ, ಹಣಕೋಣ, ಘಾಡಸಾಯಿ, ಕಡವಾಡ, ಕಿನ್ನರ, ವೈಲವಾಡ ಮುಂತಾದ ಗ್ರಾಪಂ ವ್ಯಾಪ್ತಿಯ ಕೆಲವು ಜಮೀನು ಕೃಷಿ ಮಾಡಲು ಆಗದಿರುವುದು, ಬಾವಿಗಳ ನೀರು ಕುಡಿಯಲು ಆಗದ ಸಮಸ್ಯೆ ಅನೇಕ ವರ್ಷಗಳಿಂದ ಇದ್ದು, ಬಗೆಹರಿಯದ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಕಾಳಿ ಎಡದಂಡೆಯ ಗ್ರಾಮಗಳಿಗೆ ನದಿಯಿಂದ ನೀರೆತ್ತಿ ಕುಡಿಯಲು ಪೂರೈಸುವ ಕೆರವಡಿ ಬಹು ಗ್ರಾಮ ಯೋಜನೆಯಲ್ಲಿ ಕಳೆದ ವರ್ಷ ಬೇಸಿಗೆಯಲ್ಲಿ ಉಪ್ಪು ನೀರು ಕಾಣಿಸಿಕೊಂಡಿತ್ತು. ಕಾಳಿ ಬಲದಂಡೆಯ ಗ್ರಾಮಗಳಿಗೆ ನೀರು ಪೂರೈಸುವ ಗೋಟೆಗಾಳಿ ಬಹುಗ್ರಾಮ ಯೋಜನೆಗೂ ಎರಡು ವರ್ಷದ ಹಿಂದೆ ಇದೇ ಸಮಸ್ಯೆಯಾಗಿತ್ತು. ಈ ಬಾರಿ ಅವಧಿಗೂ ಮುಂಚೆ ಉಪ್ಪು ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ ಎನ್ನುತ್ತಾರೆ ಅಧಿಕಾರಿಗಳು.

ಹಣಕೋಣ ಗ್ರಾಪಂ ವ್ಯಾಪ್ತಿಯ ಅಂಬಿವಾಡ, ಬಾಬುನಾಯ್ಕವಾಡ, ಪಾಟ್ಲೋವಾಡ, ಮುಂತಾದೆಡೆ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಶುರುವಾಗಿದೆ. ಅಂಬಿವಾಡದ 7 ಬಾವಿಗಳು ಈಗಾಗಲೇ ಉಪ್ಪುನೀರಿನಿಂದ ಹಾಳಾಗಿವೆ. ಇಲ್ಲಿನ ಮನೆಗಳಿಗೆ ಜಲಜೀವನ್ ಮಿಷನ್ ಯೋಜನೆ ತಲುಪಿಲ್ಲ. ಬೇರೆ ಕುಡಿಯುವ ನೀರಿನ ಯೋಜನೆಯೂ ಇಲ್ಲ. ಇದರಿಂದ ಗ್ರಾಮಸ್ಥರು ನೀರಿಗಾಗಿ ದೂರದವರೆಗೆ ಕೊಡ ಹೊತ್ತು ಓಡಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಪಕ್ಕದಲ್ಲಿರುವ ಖಾರ್ಲ್ಯಾಂಡ್ ಒಡ್ಡು ಸಹ ಸಮರ್ಪಕವಾಗಿಲ್ಲ. ಗೇಟ್ ಹಾಕಿ ದುರಸ್ತಿ ಮಾಡುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನೀರು ಪೂರೈಕೆಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಆಡಳಿತ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯ ಜಗದೀಶ ಗಂಗೇಪುತ್ರ ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ಬೆಟ್ಟದ ಮೇಲಿನಿಂದ ಬರುವ ಸಿಹಿ ನೀರಿನ ಹರಿವು ಜೋರಾಗಿರುವುದರಿಂದ ಈ ಉಪ್ಪು ನೀರಿನ ಪ್ರಭಾವ ಕಡಿಮೆಯಾಗುತ್ತಿತ್ತು. ಇದರಿಂದ ಜೂನ್‌ನಿಂದ ಸುಮಾರು ಡಿಸೆಂಬರ್ ಅಥವಾ ಕೆಲವರ್ಷ ಜನವರಿವರೆಗೂ ಜನರಿಗೆ ಉಪ್ಪುನೀರಿನ ಸಮಸ್ಯೆ ಕಡಿಮೆಯಾಗುತ್ತಿತ್ತು. ಬಾವಿಗಳಲ್ಲಿ ಸಿಹಿ ನೀರು ಸಿಗುತ್ತಿತ್ತು. ಆದರೆ, ಈ ಬಾರಿ ಮಳೆ ಇಲ್ಲ. ಬೆಟ್ಟದ ಮೇಲಿನಿಂದ ಹರಿಯುವ ತೊರೆಗಳ ಅಬ್ಬರವಿಲ್ಲ. ಇದರಿಂದ ಆಗಸ್ಟ್ ನಿಂದಲೇ ಬಾವಿ ನೀರು ಉಪ್ಪಾಗಿದ್ದು ಕುಡಿಯಲು ಉಪಯೋಗಕ್ಕೆ ಬಾರದಂತಾಗಿದೆ.

ಗಂಗಾವಳಿಯಲ್ಲೂ ನೀರಿನ ಪ್ರಮಾಣ ಇಳಿಕೆಯಾಗಿದ್ದು, ಕಾರವಾರ ಹಾಗೂ ಅಂಕೋಲಾ ಪಟ್ಟಣ ಹಾಗೂ ಹಲವು ಗ್ರಾಮಗಳಿಗೆ ಅವಧಿಗಿಂತ ಪೂರ್ವದಲ್ಲಿ ನೀರಿನ ಸಮಸ್ಯೆ ಎದುರಾಗುವ ಮುನ್ಸೂಚನೆ ದೊರೆತಿದೆ. ಕಾರವಾರ, ಅಂಕೋಲಾ ಪಟ್ಟಣ ಹಾಗೂ 13 ಗ್ರಾಪಂಗಳಿಗೆ ಗಂಗಾವಳಿ ನದಿಯಿಂದ ನೀರು ಪೂರೈಸಲಾಗುತ್ತದೆ. 1975 ರಿಂದ ಅಂಕೋಲಾದ ಹೊನ್ನಳ್ಳಿ ಬಳಿ ನೀರೆತ್ತಿ ಕೊಳವೆ ಮಾರ್ಗದ ಮೂಲಕ ಪೂರೈಕೆ ಮಾಡಲಾಗುತ್ತ ಬರಲಾಗುತ್ತಿದೆ. ಪ್ರತಿ ವರ್ಷ ಈ ಅವಧಿಯಲ್ಲಿ ಹೊನ್ನಳ್ಳಿ ಬಳಿ 3.5 ಮೀಟರ್‌ನಷ್ಟು ನೀರು ಇರುತ್ತಿತ್ತು. ಆದರೆ, ಈ ವರ್ಷ ನೀರಿನ ಪ್ರಮಾಣ 2.6 ಮೀಟರ್‌ಗೆ ಇಳಿದಿದೆ. ಸೀಬರ್ಡ್ ನೌಕಾ ಯೋಜನೆ, ಗ್ರಾಸಿಂ ಇಂಡಸ್ಟ್ರೀ ಸೇರಿ ಹಲವೆಡೆ ಇದೇ ಯೋಜನೆಯಿಂದ ನೀರು ಪೂರೈಕೆ ಮಾಡಲಾಗುತ್ತದೆ. ಪ್ರತಿ ದಿನ 21 ಮಿಲಿಯನ್ ಲೀಟರ್ ನೀರನ್ನು ಎತ್ತಲಾಗುತ್ತದೆ. ಇದೇ ಪರಿಸ್ಥಿತಿ ಮುಂದುವರಿದರೆ ಡಿಸೆಂಬರ್ ಒಳಗೆ ನೀರೆತ್ತುವುದು ಸಮಸ್ಯೆಯಾಗಬಹುದು ಎಂಬುದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳ ಅಭಿಪ್ರಾಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X