Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಕ್ರಮ ಮದ್ಯ ಮಾರಾಟ ಆರೋಪ; ಗಂಜಿಮಠ...

ಅಕ್ರಮ ಮದ್ಯ ಮಾರಾಟ ಆರೋಪ; ಗಂಜಿಮಠ ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯನ ಬಂಧನ

ವಾರ್ತಾಭಾರತಿವಾರ್ತಾಭಾರತಿ29 Dec 2023 11:16 AM IST
share
ಅಕ್ರಮ ಮದ್ಯ ಮಾರಾಟ ಆರೋಪ; ಗಂಜಿಮಠ ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯನ ಬಂಧನ

ಗಂಜಿಮಠ: ಅಕ್ರಮವಾಗಿ ಮದ್ಯ ಮಾರಾಟ ಮಾಡಿದ್ದ ಆರೋಪದಲ್ಲಿ ಗಂಜಿಮಠ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರೊಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜಯಾನಂದ ಕುಲಾಲ್ ಎಂದು ಗುರುತಿಸಲಾಗಿದ್ದು, ಇವರು ಸಂಘಪರಿವಾರದ ಸಕ್ರಿಯ ಕಾರ್ಯಕರ್ತ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಯು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರ ಆಪ್ತ ಎಂದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದು, ಶಾಸಕರೊಂದಿಗೆ ಇದ್ದ ಫೊಟೊವನ್ನು ಸಾಮಾಜಿಕ‌‌ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಆರೋಪಿ ಜಯಾನಂದ ಕುಲಾಲ್ ಅವರು ಡಿ.27ರಂದು ಮೊಗರು ಗ್ರಾಮದ ತೆಕ್ಕೆಮಾರ್ ಎಂಬಲ್ಲಿರುವ ತನ್ನ‌‌ ಗೂಡಂಗಡಿಯಲ್ಲಿ ಅಕ್ರಮವಾಗಿ‌ ಮದ್ಯ ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಡಿ.27ರ ಸಂಜೆ 4.45ರ ಸುಮಾರಿಗೆ ಬಜ್ಪೆ ಪೊಲೀಸರು ರೌಂಡ್ಸ್ ನಲ್ಲಿದ್ದವೇಳೆ ಆರೋಪಿಯ ಅಂಗಡಿ‌ ಮುಂಭಾಗದಲ್ಲಿದ್ದ ಗ್ರಾಹಕರು ಪೊಲೀಸ್ ವಾಹನ ಕಂಡು ದಿಕ್ಕಾಪಾಲಾಗಿ ಓಡಿದ್ದಾರೆ. ಇದನ್ನು ಕಂಡು ಅನುಮಾನಗೊಂಡ‌ ಪೊಲೀಸರು ಗೂಡಂಗಡಿಯನ್ನು ತಪಾಸಣೆಗೆ ಒಳಪಡಿಸಿದಾಗ ವಿವಿಧ ಬ್ರ್ಯಾಂಡ್ ಗಳ 90ಎಂಎಲ್ ನ ಒಟ್ಟು 18 ಟೆಟ್ರಾ ಪ್ಯಾಕ್ ಮದ್ಯ ದೊರಕಿದ್ದು, ಮದ್ಯ ಸಹಿತ ಆರೋಪಿ ಜಯಾನಂದ‌ ಕುಲಾಲ್ ನನ್ನು ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಯು ಸಮೀಪ ಮದ್ಯ ಮಾರಾಟದ ಅಂಗಡಿಯಿಂದ ಮದ್ಯ ತಂದು ಅಕ್ರಮವಾಗಿ ತನ್ನ ಅಂಗಡಿಯಲ್ಲಿ ಶೇಖರಿಸಿಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಎಫ್ ಐ ಆರ್ ನಲ್ಲಿ ತಿಳಿಸಿದ್ದಾರೆ.

ಬಜ್ಪೆ ಪೊಲೀಸರಿಂದ ಜಾತಿ ಧರ್ಮದ ತಾರತಮ್ಯ?:

ಮದ್ಯ ಮಾರಾಟ ಹಾಗೂ ಆರೋಪಿಯ ಬಂಧನ ಡಿ.27ರಂದು‌ ನಡೆದಿದೆ. ಆದರೆ, ಈ ವರೆಗೂ ಬಜ್ಪೆ ಪೊಲೀಸರು ಮಾಧ್ಯಮಗಳಿಗೆ ಯಾವುದೇ ವರದಿ ನೀಡಿಲ್ಲ. ಯಾವುದೇ ಪ್ರಕರಣಗಳು ನಡೆದರೂ ಪೊಲೀಸ್ ಇಲಾಖೆಯ ಬ್ಲಾಗ್ ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಬೇಕು‌. ಆದರೆ, ಘಟನೆ ನಡೆದು 24ಗಂಟೆ ಕಳೆದರೂ ಪೊಲೀಸ್ ಬ್ಲಾಗ್ ನಲ್ಲಿ ಮಾಹಿತಿ ಹಂಚಿ ಕೊಂಡಿಲ್ಲ. ಅಲ್ಲದೆ, ಪೊಲೀಸ್ ಠಾಣೆಗೆ ದೂರವಾಣಿ ಮೂಲಕ ಮಾಹಿತಿ ಕೇಳಿದರೆ, 10-15 ನಿಮಿಷ ಬಿಟ್ಟು ಮಾಡಿ, ಪ್ರಕರಣದ ಫೈಲ್ ಇಲ್ಲ, ಎಚ್ ಸಿ ಅವರಲ್ಲಿ ಕೇಳಬೇಕು ಎಂದೆಲ್ಲಾ ಪತ್ರಕರ್ತರನ್ನು ಸಾಗಹಾಕಲು ಯತ್ನಿಸಿದ್ದಾರೆ.

ಇನ್ನೂ ವಿಪರ್ಯಾಸ‌ವೆಂದರೆ, ಮದ್ಯ ಮಾರಾಟ ಪ್ರಕರಣ ದಾಖಲಾದ ಬಳಿಕ ದಾಖಲಾಗಿದ್ದ ದನ ದಾಗಾಟದ ಪ್ರಕರಣವನ್ನು ಅದೇ ದಿನ ಪೊಲೀಸ್ ಬ್ಲಾಗ್ ನಲ್ಲಿ ಪ್ರಕಟಿಸಿದ್ದ ಬಜ್ಪೆ ಪೊಲೀಸರು, ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ತಾರತಮ್ಯ ಎಸಗುತ್ತಿದ್ದಾರೆ ಎಂಬ ಆರೋಪಗಳು ಸಾಮಾಜಿಕ ವಲಯಗಳಲ್ಲಿ ಕೇಳಿ ಬಂದಿವೆ.

ಪೊಲೀಸ್ ಠಾಣೆಯಲ್ಲಿ ಜಾತಿ, ಧರ್ಮದ ತಾರತಮ್ಯ ನಡೆಯುತ್ತಿಲ್ಲ. ಅಬಕಾರಿ ಇಲಾಖೆಗೆ ಸಂಬಂಧಿಸಿರುವ ಪ್ರಕರಣ‌ ಎಂದು ಮಾಹಿತಿ‌ ನೀಡಲು ನಿರಾಕರಿಸಿರಬಹುದು. ಮಾಹಿತಿಗಾಗಿ ಠಾಣೆಯ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿದರೆ ಉತ್ತಮ.

ಸಂದೀಪ್, ಪೊಲೀಸ್‌ ನಿರೀಕ್ಷಕರು, ಬಜ್ಪೆ ಠಾಣೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X