ಅಮ್ಮೆಮ್ಮಾರ್: ವಿದ್ಯಾರ್ಥಿ ನಾಪತ್ತೆ; ಪ್ರಕರಣ ದಾಖಲು

ಫರಂಗಿಪೇಟೆ : ಪುದು ಗ್ರಾಮ ವ್ಯಾಪ್ತಿಯ ಅಮ್ಮೆಮ್ಮಾರ್ ಕಿದೆಬೆಟ್ಟುವಿನಲ್ಲಿ ವಾಸವಾಗಿರುವ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ನಾಪತ್ತೆಯಾದ ವಿದ್ಯಾರ್ಥಿ ಅಮೆಮ್ಮಾರ್ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17). ಈತ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ತಿಳಿಸಿದ್ದು ಮನೆಯಿಂದ ತೆರಳಿದ್ದಾನೆ. ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story