Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅನಂತಾಡಿ ಕಾಲುದಾರಿ ಬಂದ್ ಪ್ರಕರಣ | ಸಿಎಂ...

ಅನಂತಾಡಿ ಕಾಲುದಾರಿ ಬಂದ್ ಪ್ರಕರಣ | ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಧ್ಯ ಪ್ರವೇಶ: ತಾತ್ಕಾಲಿಕ ಸಂಚಾರಕ್ಕೆ ಅವಕಾಶ

ವಾರ್ತಾಭಾರತಿ ವರದಿ ಫಲಶ್ರುತಿ

ವಾರ್ತಾಭಾರತಿವಾರ್ತಾಭಾರತಿ20 Sept 2026 8:36 PM IST
share
ಅನಂತಾಡಿ ಕಾಲುದಾರಿ ಬಂದ್ ಪ್ರಕರಣ | ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಧ್ಯ ಪ್ರವೇಶ: ತಾತ್ಕಾಲಿಕ ಸಂಚಾರಕ್ಕೆ ಅವಕಾಶ

ವಿಟ್ಲ, ಸೆ.20: ಅನಂತಾಡಿ ಗ್ರಾಮದ ಬಾಬನಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕ ಕಾಲುದಾರಿ ಬಂದ್ ಮಾಡಲಾಗಿದ್ದ ಪ್ರಕರಣ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯ ಮಧ್ಯ ಪ್ರವೇಶದ ಮೂಲಕ ತಾತ್ಕಾಲಿಕವಾಗಿ ಬಗೆಹರಿಸಲಾಗಿದೆ.

ಸದ್ಯ ಕಾಲುದಾರಿಯನ್ನು ತಾತ್ಕಾಲಿಕವಾಗಿ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬಾಬನಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕ ಕಾಲುದಾರಿ ಬಂದ್ ಮಾಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ಕುರಿತು ಸೆ.9ರಂದು ‘ವಾರ್ತಾಭಾರತಿ’ಯಲ್ಲಿ ವರದಿ ಪ್ರಕಟವಾಗಿತ್ತು.

ಈ ವರದಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿಯವರು ದ.ಕ. ಜಿಲ್ಲಾಧಿಕಾರಿಗೆ ಪತ್ರ ಮೂಲಕ ಪ್ರಕರಣದ ವಾಸ್ತವಾಂಶ ಪರಿಶೀಲಿಸಿ ತಕ್ಷಣ ಅಗತ್ಯ ಕ್ರಮ ಕೈ ಗೊಂಡು ಅನುಪಾಲನಾ ವರದಿಯನ್ನು ಕಚೇರಿಗೆ ಸಲ್ಲಿಸುವಂತೆ ಆದೇಶಿಸಿದ್ದರು.

ಈ ಆದೇಶ ಹಿನ್ನೆಲೆಯಲ್ಲಿ ವಿಟ್ಲ ಹೋಬಳಿಯ ಕಂದಾಯ ನಿರೀಕ್ಷಕರು ಸ್ಥಳ ಪರಿಶೀಲನೆ ನಡೆಸಿ, ಸೆ.10ರಂದು ವರದಿ ಸಲ್ಲಿಸಿದ್ದಾರೆ ಎಂದು ಬಂಟ್ವಾಳ ತಹಶೀಲ್ದಾರ್ ತಿಳಿಸಿದ್ದಾರೆ.

ಕಂದಾಯ ಇಲಾಖೆಯ ವರದಿ ಪ್ರಕಾರ, ಅನಂತಾಡಿ ಗ್ರಾಮದ ಸರ್ವೇ ನಂ. 137/2ಎ1ರ 0.24 ಎಕರೆ ಪಟ್ಟಾ ಜಮೀನಿನ ಮೂಲಕ ಪೂಂಜಾವು, ನಡುಮನೆ ಹಾಗೂ ಸುಧೆಕಟ್ಟೆಮಾರು ಪ್ರದೇಶಗಳಿಗೆ ಹಿಂದಿನಿಂದಲೂ ಕಾಲು ದಾರಿ ಸಂಪರ್ಕವಿತ್ತು. ಈ ಜಮೀನು ಭಾಗ್ಯಲಕ್ಷ್ಮೀ ಕೆ. ಹೆಗ್ಡೆ ಎಂಬವರ ಹೆಸರಿನಲ್ಲಿದ್ದು, ಕಾಲುದಾರಿಯನ್ನು ಬಂದ್ ಮಾಡಲಾಗಿತ್ತು. ಸ್ಥಳ ಪರಿಶೀಲನೆಯ ವೇಳೆ ಜಮೀನಿನ ಪಟ್ಟಾದಾರರನ್ನು ಸ್ಥಳಕ್ಕೆ ಕರೆಸಿ ಮಾತುಕತೆ ನಡೆಸಲಾ ಗಿದ್ದು, ಬಂದ್ ಮಾಡಲಾಗಿದ್ದ ಕಾಲುದಾರಿಯನ್ನು ತಾತ್ಕಾಲಿಕವಾಗಿ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಅನಂತಾಡಿ ಗ್ರಾಮದ ಸರ್ವೇ ನಂ. 136/2ಎ1ರ ಸರಕಾರಿ ಜಾಗವನ್ನು ಅಳತೆ ಮಾಡಿ, ಈ ಹಿಂದೆ ಪ್ಲಾಟಿಂಗ್‌ನಲ್ಲಿ ತೋರಿಸಲಾಗಿದ್ದ ರಸ್ತೆಗೆ ಸಂಬಂಧಿಸಿದ ಸರಕಾರಿ ಜಾಗವನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಮಾರ್ಗದಲ್ಲಿ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಜಮೀನು ಅಳತೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಹಿಂದಿನಂತೆಯೇ ಕಾಲುದಾರಿಯಲ್ಲಿ ಸಾರ್ವಜನಿಕರು ಸಂಚರಿಸಲು ತಾತ್ಕಾಲಿಕವಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ತಿಳಿಸಿದ್ದಾರೆ.








Tags

AnantadiFootpathClosure CaseCM's Special OfficerIntervenesTemporary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X