Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ...

ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆ: 2028ರವರೆಗೆ ಮತ್ತೆ ಸಾರಥ್ಯ

ವಾರ್ತಾಭಾರತಿವಾರ್ತಾಭಾರತಿ21 Aug 2023 6:06 PM IST
share
ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆ: 2028ರವರೆಗೆ ಮತ್ತೆ ಸಾರಥ್ಯ

ಮಂಗಳೂರು: ಮಂಗಳೂರು ಕಥೋಲಿಕ್ ಕೋ-ಅಪರೇಟಿವ್ ಬ್ಯಾಂಕ್ ನಿಯಮಿತ ಇದರ 2023-2028ನೆ ಸಾಲಿಗೆ ಹಾಲಿ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ತಂಡವು ಅವಿರೋಧವಾಗಿ ಪುನರಾಯ್ಕೆಗೊಂಡಿದೆ.

ಆ.13ರಂದು ನಾಮಪತ್ರ ಸಲ್ಲಿಕೆಯೊಂದಿಗೆ ಆರಂಭಗೊಂಡ ಚುನಾವಣಾ ಪ್ರಕ್ರಿಯೆಗೆ 14 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಆ.20ರಂದು ನಾಮಪತ್ರ ಪರಿಶೀಲನೆಯಲ್ಲಿ ಎಲ್ಲಾ 14 ಅರ್ಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳು ಕ್ರಮಬದ್ಧವಾಗಿರುವುದರಿಂದ ರಿಟರ್ನಿಂಗ್ ಅಧಿಕಾರಿ ಸುಧೀರ್ ಕುಮಾರ್ ಜೆ ಅವರು ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳನ್ನು ಚುನಾಯಿತರೆಂದು ಘೋಷಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಕಥೋಲಿಕ್ ಕೊ-ಅಪರೇಟಿವ್ ಬ್ಯಾಂಕ್ (ಎಂ.ಸಿ.ಸಿ. ಬ್ಯಾಂಕ್) ಇದರ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ, ಆ.27ರಂದು ನಡೆಯಬೇಕಿದ್ದ ಚುನಾವಣೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ತಿಳಿಸಿದ್ದಾರೆ.

ಈ ಮೂಲಕ 111 ವರ್ಷಗಳ ಇತಿಹಾಸವಿರುವ ಮಂಗಳೂರಿನ ಸಹಕಾರಿ ರಂಗದ ಮುಂಚೂಣಿಯ ಎಂಸಿಸಿ ಬ್ಯಾಂಕಿನ ಚುಕ್ಕಾಣಿ, ಮುಂದಿನ 5 ವರ್ಷಗಳ ಅವಧಿಗೆ ಹಾಲಿ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ತಂಡದ ಪಾಲಾಗಿದೆ. 111 ವರ್ಷಗಳ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ಯಾಂಕಿನ ನಿರ್ದೇಶಕ ಮಂಡಳಿಯ ಆಯ್ಕೆ ಅವಿರೋಧವಾಗಿ ನಡೆದಿದ್ದು, ವೆಲೆನ್ಸಿಯಾ ನಿವಾಸಿ ಅನಿಲ್ ಲೋಬೊ ನೇತೃತ್ವದ ತಂಡದಲ್ಲಿ ಜೆರಾಲ್ಡ್ ಪಿಂಟೋ, ಕಲ್ಯಾಣ್‌ಪುರ, ರೋಶನ್ ಡಿ’ಸೋಜ ಮುಡಿಪು, ಹೆರಾಲ್ಡ್ ಜೋನ್ ಮೊಂತೆರೊ, ಕೆಲರಾಯ್, ಜೋಸೆಫ್ ಎಂ.ಅನಿಲ್ ಪತ್ರಾವೊ, ದೆರೆಬೈಲ್, ಡೇವಿಡ್ ಡಿ’ಸೋಜ ಬಜ್ಪೆ, ಮೆಲ್ವಿನ್ ಅಕ್ವಿನಸ್ ವಾಸ್ ಮಂಗಳೂರು, ಜೆ.ಪಿ.ರೋಡ್ರಿಗಸ್ ಪುತ್ತೂರು, ಆಂಡ್ರು ಡಿ’ಸೋಜ ಮೂಡಬಿದ್ರಿ, ಎಲ್‌ರೊ ಕಿರಣ್ ಕ್ರಾಸ್ಟೊ ಗಂಗೊಳ್ಳಿ, ಜೆರಾಲ್ಡ್ ಜೂಡ್ ಡಿ’ಸಿಲ್ವ ಕಾರ್ಕಳ, ವಿನ್ಸೆಂಟ್ ಅನಿಲ್ ಲಸ್ರಾದೊ ಬಂಟ್ವಾಳ, ಐರಿನ್ ರೆಬೆಲ್ಲೊ ಕುಲಶೇಖರ ಮತ್ತು ಫ್ರೀಡಾ ಫ್ಲಾವಿಯಾ ಡಿ’ಸೋಜ ಬಳ್ಕುಂಜೆ ಇದ್ದಾರೆ.

ಹಾಲಿ ಬ್ಯಾಂಕಿನ ಆಡಳಿತ ಮಂಡಳಿಯ ಅವಧಿಯು ಆ.26ರಂದು ಕೊನೆಗೊಳ್ಳಲಿದ್ದು, ನಂತರ ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರಲಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X