ಅತ್ತಾವರ: ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಆಕಸ್ಮಿಕ; ಮಹಿಳೆ ಮೃತ್ಯು

ಮಂಗಳೂರು: ನಗರದ ಅತ್ತಾವರದ ಅಪಾರ್ಟ್ ಮೆಂಟೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತ ಮಹಿಳೆಯನ್ನು ಶಾಹಿನಾ ನುಸ್ಬಾ (58) ಎಂದು ಗುರುತಿಸಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Next Story





