Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್:...

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್: ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ

ವಾರ್ತಾಭಾರತಿವಾರ್ತಾಭಾರತಿ29 Oct 2025 10:35 PM IST
share
ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್: ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ

ಮಂಗಳೂರು: ಬಹುಮುಖ ಪ್ರತಿಭೆಯ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ಬುಧವಾರ ಬೆಳಗ್ಗೆ ನಗರದ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ನಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ.

29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ 5 ಸುತ್ತು ಮತ್ತು 75 ಮೀಟರ್‌ಗಳನ್ನು ಪೂರ್ಣಗೊಳಿಸಿ ದಾಖಲೆ ಬರೆದರು.

‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ (ಜಿಬಿಡಬ್ಲ್ಯುಆರ್) ಸಂಸ್ಥೆಯು ಇವರ ಅಪೂರ್ವ ಸಾಧನೆಯನ್ನು ಗುರುತಿಸಿ, ಅಧಿಕೃತ ಪ್ರಮಾಣಪತ್ರವನ್ನು ಪ್ರದಾನ ಮಾಡಿದೆ.

ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವಾಟರ್ ಸೇಫ್ಟಿ (ಎನ್‌ಐಡಬ್ಲ್ಯುಎಸ್) ತಂಡದ ಅಧೀಕೃತ ಲೈಫ್ ಸೇವರ್‌ ಆಗಿರುವ ರುಬೆನ್ ರುಬೆನ್ ಜೇಸನ್ ಮಚಾದೊ ಅವರು ಹಿಂದೂಸ್ತಾನಿ ಕೊಳಲು (ಫ್ಲೂಟ್) ಮತ್ತು ವೆಸ್ಟರ್ನ್ ಫ್ಲೂಟ್‌ನಲ್ಲಿ ಪರಿಣತರು. ಸ್ಯಾಕ್ಸೋಫೋನ್, ಗಿಟಾರ್ ಮತ್ತು ಇತರ ವಾದ್ಯಗಳನ್ನೂ ನುಡಿಸುವುದರಲ್ಲಿ ಖ್ಯಾತರಾಗಿದ್ದಾರೆ.

ಬಾಲಿವುಡ್‌ಗೆ ಚಿತ್ರಗಳಿಗೆ ಸಂಗೀತ: ರುಬೆನ್ ಜೇಸನ್ ಮಚಾದೊ ಬಾಲಿವುಡ್, ಸ್ಯಾಂಡಲ್‌ವುಡ್ ಮತ್ತು ಕೋಸ್ಟಲ್‌ ಚಲನಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಭಾರತದಾದ್ಯಂತ ಪ್ರಮುಖ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿರುವ ಅವರು 2016ರಲ್ಲಿ ನಡೆದ ವರ್ಲ್ಡ್ ಕಲ್ಚರ್ ಫೆಸ್ಟಿವಲ್‌ನಲ್ಲಿ 150ಕ್ಕೂ ಹೆಚ್ಚು ದೇಶಗಳ ಸಂಗೀತಗಾರರೊಂದಿಗೆ ಗಿನ್ನೆಸ್ ವಿಶ್ವ ದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಂತ ಅಲೋಸಿಯಸ್ ಕಾಲೇಜಿನಲ್ಲಿ ಸುಮಾರು ಎರಡು ವರ್ಷಗಳ ಕಾಲ ಪತ್ರಿಕೋದ್ಯಮ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ರುಬೆನ್ ಕೊಳಲು ವಾದನದಲ್ಲಿ 15 ವರ್ಷಗಳ ಅನುಭವ ಹೊಂದಿದ್ದಾರೆ.

ದಾಖಲೆಗೆ ತಂದೆಯ ಸಲಹೆ: ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆಯ ಮೂಲಕ ಮಾತನಾಡಿದ ರುಬೆನ್ ಅವರು ಈ ರೀತಿಯ ದಾಖಲೆಯನ್ನು ಮಾಡಲು ನನಗೆ ನನ್ನ ತಂದೆ ಸಲಹೆ ನೀಡಿದ್ದರು. ನಾನು 150 ಮಿಟರ್ ಸ್ವಿಮ್ ಮಾಡಲು ಯೋಜಿಸಿದ್ದೆ. ಆದರೆ ನನಗೆ 700 ಮೀಟರ್‌ಗೂ ಅಧಿಕ ದೂರವನ್ನು ಕೊಳಲು ನುಡಿಸುತ್ತಾ ಈಜಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

ಈ ಸಂದರ್ಭ ಸಂತ ಅಲೋಶಿಯೆಸ್ ಪರಿಗಣಿತ ವಿವಿ ಉಪಕುಲಪತಿ ಡಾ. ಪ್ರವೀಣ್ ಮಾರ್ಟಿಸ್, ರುಬೆನ್ ಅವರ ಪತ್ನಿ ಅನುಷಾ ಮತ್ತು ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

‘‘ರುಬೆನ್ ಮಚಾದೊ ಅವರು ಕೊಳಲು ನುಡಿಸುತ್ತಾ 700 ಮೀಟರ್‌ಗೂ ಹೆಚ್ಚು ದೂರ ಈಜಿ ವಿಶಿಷ್ಟವಾದ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅವರ ಸಾಧನೆಯನ್ನು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲಿಸಲಾಗಿದೆ. ಈಜುತ್ತಿರುವಾಗ ಕೊಳಲು ನುಡಿಸುವುದು ಬಹಳ ಬಹಳ ಕಷ್ಟಕರ ಮತ್ತು ಅವರು ಅದನ್ನು ಬಹಳ ಚೆನ್ನಾಗಿ ಪರಿಣಾಮಕಾರಿಯಾಗಿ ಮಾಡಿದ್ದಾರೆ".

-ಡಾ. ಮನೀಷ್ ವಿಷ್ಣಾವಿ, ಮುಖ್ಯಸ್ಥರು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಏಶ್ಯ



share
ವಾರ್ತಾಭಾರತಿ
ವಾರ್ತಾಭಾರತಿ
Next Story
X