Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಜ್ಪೆ: ಯುವಕನಿಗೆ ಚೂರಿ ಇರಿತ

ಬಜ್ಪೆ: ಯುವಕನಿಗೆ ಚೂರಿ ಇರಿತ

ವಾರ್ತಾಭಾರತಿವಾರ್ತಾಭಾರತಿ3 Sept 2023 8:58 PM IST
share
ಬಜ್ಪೆ: ಯುವಕನಿಗೆ ಚೂರಿ ಇರಿತ

ಸುರತ್ಕಲ್: ಇಲ್ಲಿನ ಕರಂಬಾರು ಎಂಬಲ್ಲಿಂದ ದ್ವಿಚಕ್ರ ವಾಹನದಲ್ಲಿ ಬಜ್ಪೆಗೆ ತೆರಳುತ್ತಿದ್ದ ಇಬ್ಬರು ಯುವಕರ ಮೇಲೆ ಗುಂಪೊಂದು ದಾಳಿ ಮಾಡಿ ಡ್ರಾಗರ್‌ ಮೂಲಕ ಇರಿದಿರುವ ಘಟನೆ ಸುರತ್ಕಲ್‌ ಪೊಲೀಸ್ ಠಾಣೆಯ ಕರಂಬಾರು ಎಂಬಲ್ಲಿ ರವಿವಾರ ರಾತ್ರಿ ವರದಿಯಾಗಿದೆ.

ಘಟನೆಯಿಂದ ಕರಂಬಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್‌ ಸಫ್ವಾನ್‌ (23) ಇರಿತಕ್ಕೆ ಒಳಗಾದ ಯುವಕ ಎಂದು ತಿಳಿದು ಬಂದಿದೆ.

ಘಟನೆಯಿಂದ ಅಬ್ದುಲ್‌ ಸಫ್ವಾನ್‌ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ ಗಾಯಗಳಾಗಿದ್ದು, ದಾರಿಹೋಕರು ಅವರನ್ನು ತಕ್ಷಣ ಬಜ್ಪೆಯ ಖಾಸಗಿ ಆಸ್ಪತ್ರಗೆ ದಾಖಲಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಅಬ್ದುಲ್‌ ಸಫ್ವಾನ್‌ ಮತ್ತು ಸ್ನೇಹಿತ ಮುಹಮ್ಮದ್‌ ಸಫ್ವಾನ್‌ ಎಂಬವರು ಕರಂಬಾರಿನಿಂದ ಬಜ್ಪೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬಸ್ತಿ ಬಳಿ ಅಡ್ಡಗಟ್ಟಿದ ಸ್ಥಳೀಯರಾದ ಪಚ್ಚು, ದಿವಾ ಅವರಿದ್ದ ಸುಮಾರು 20-30 ಮಂದಿಯಿದ್ದ ಗುಂಪು ಏಕಾಏಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಡ್ರಾಗರ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾಗಿರುವ ಅಬ್ದುಲ್‌ ಸಫ್ವಾನ್‌ ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಸುರತ್ಕಲ್‌ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಅಬ್ದುಲ್‌ ಸಫ್ವಾನ್‌ ಅವರಿಂದ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈ ಸಂಬಂಧ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

"ಕೆಲದಿನಗಳ ಹಿಂದೆ ಕಳವಾರು ಭಾಗದಲ್ಲಿ ಮದ್ಯ ವ್ಯಸನಿಯೋರ್ವ ಹಲ್ಲೆ ನಡೆಸಿದ್ದ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿ ಆತನಿಗೆ ನ್ಯಾಂಯಾಂಗ ಬಂಧನವಾಗಿದೆ. ಇದೇ ಹಿನ್ನೆಲೆಯಲ್ಲಿ ಚೂರಿ ಇರಿತ ಸಂಭವಿಸಿರ ಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ನಡೆದ ಬಳಿಕ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ, ಪರಿಸ್ಥಿತಿ ತಿಳಿಯಾಗಿದ್ದ ಹಿನ್ನೆಲೆಯಲ್ಲಿ ರವಿವಾರ ಪೊಲೀಸರನ್ನು ನಿಯೋಜಿಸಿರಲಿಲ್ಲ ಎನ್ನಲಾಗಿದ್ದು, ದುಷ್ಕರ್ಮಿಗಳು ಪೊಲೀಸರು ಇಲ್ಲದಿರುವ ಸಮಯವನ್ನೇ ಗಮನಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಸಾರ್ವಜನಿಕರು ಆತಂಕ ವ್ಯಕ್ತ ಪಡಿಸಿದ್ದಾರೆ.

ಸ್ಥಳದಲ್ಲಿ ಪೊಲೀಸ್‌ ನಿಯೋಜನೆ

ಘಟನೆ ನಡೆದ ಬಳಿಕ ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ದೌಡಾಯಿಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಸ್ಥಳದಲ್ಲಿ ಕೆಎಸ್‌ಆರ್‌ಪಿಯ ಒಂದು ತುಕಡಿ, ಎರಡು ಹೊಯ್ಸಳ ವಾಹನಗಳು ಹಾಗೂ ಘಟನಾ ಸ್ಥಳದ ಸಮೀಪದಲ್ಲಿ ಮತ್ತು ಪೊಲೀಸ್‌ ಠಾಣಾ ವ್ಯಾಪ್ತಿಯ ಆಯಾಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ. ಪೊಲೀಸ್‌ ಗಸ್ತನ್ನು ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X