ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು ಪ್ರಕರಣ : ಸಂಘಟಕರು, ಕಟ್ಟಡ ಮಾಲಕರ ವಿರುದ್ಧ ಎಫ್‌ಐಆರ್

ಮಂಗಳೂರು: ನಗರದ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಮಾಝ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕಟ್ಟಡದ ಮಾಲಕ ಪರಿಕ್ಷಿತ್ ರೈ ಹಾಗೂ ಕಾರ್ಯಕ್ರಮದ ಸಂಘಟಕ ದಿನಕರ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬಾಲ್ಕನಿಯ ತಡೆಗೋಡೆ ಕುಸಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಮ್ಮಾಝ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
Next Story




