Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ಪದವಿ...

ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ಪದವಿ ದಿನಾಚರಣೆ | AI ಅಳವಡಿಸಿಕೊಳ್ಳಿ, ಮಾನವೀಯ ಮೌಲ್ಯ ಮರೆಯದಿರಿ: ಪದವೀಧರರಿಗೆ ಕರೆ

ಉದ್ಯೋಗ ಸೃಷ್ಟಿಸುವವರಾಗಿ ಬೆಳೆಯಲು ಸೈಯದ್ ಮೊಹಮ್ಮದ್ ಬ್ಯಾರಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ17 Oct 2026 6:08 PM IST
share
ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ಪದವಿ ದಿನಾಚರಣೆ | AI ಅಳವಡಿಸಿಕೊಳ್ಳಿ, ಮಾನವೀಯ ಮೌಲ್ಯ ಮರೆಯದಿರಿ: ಪದವೀಧರರಿಗೆ ಕರೆ

ಮಂಗಳೂರು: ಕೃತಕ ಬುದ್ಧಿಮತ್ತೆ (AI) ಆಧಾರಿತ ಕೈಗಾರಿಕಾ ಕ್ರಾಂತಿಯು ಜಗತ್ತಿನಲ್ಲಿ ಹಿಂದೆಂದಿಗಿಂತಲೂ ದೊಡ್ಡ ಬದಲಾವಣೆಗಳನ್ನು ತರಲಿದೆ. ಪದವೀಧರರು ಹೊಸ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ಜತೆಗೆ ಸಹಾನುಭೂತಿ, ಪ್ರಾಮಾಣಿಕತೆ ಸೇರಿದಂತೆ ಮಾನವೀಯ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು ಎಂದು ಬ್ಯಾರೀಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪದವಿ ದಿನಾಚರಣೆಯಲ್ಲಿ ಭಾಗವಹಿಸಿದ್ದ ತಜ್ಞರು ಕರೆ ನೀಡಿದ್ದಾರೆ.

ಬ್ಯಾರೀಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ ನ ಪದವಿ ದಿನಾಚರಣೆ ಶನಿವಾರ ಇನ್ನೋಳಿಯ ಲ್ಯಾಂಡ್ಸ್ ಎಂಡ್‌ ನಲ್ಲಿರುವ ಬ್ಯಾರೀಸ್ ನಾಲೆಜ್ ಕ್ಯಾಂಪಸ್‌ ನಲ್ಲಿ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯದ ಸಮೀಪದ ಕ್ಯಾಂಪಸ್‌ ನಲ್ಲಿ ನಡೆದ ಸಮಾರಂಭವು ಬ್ಯಾರೀಸ್ ಎನ್ವಿರೋ-ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್‌ ನ (BEADS) ಏಳನೇ, ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಎಮರ್ಜಿಂಗ್ ಸೈನ್ಸಸ್‌ನ (BIES) ಎರಡನೇ ಹಾಗೂ ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (BIT) 14ನೇ ಪದವಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾಯಿತು.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ (IISc) ಅಂತರಶಿಸ್ತೀಯ ಇಂಧನ ಸಂಶೋಧನಾ ಕೇಂದ್ರದ (ICER) ಪ್ರಾಧ್ಯಾಪಕ ಹಾಗೂ ಅಧ್ಯಕ್ಷ ಡಾ. ಪ್ರಮೋದ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದ (NITK) ನಿರ್ದೇಶಕ ಪ್ರೊ. ಬಿ. ರವಿ ಪದವಿ ಪ್ರದಾನ ಭಾಷಣ ಮಾಡಿದರು. ಚೆನ್ನೈನ ಬಿ.ಎಸ್. ಅಬ್ದುರ್ರಹ್ಮಾನ್‌ ಕ್ರೆಸೆಂಟ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿಯ RICS ನಿರ್ದೇಶಕ ಪ್ರೊ. ಡಾ. ಜಾಫರ್ ಎ.ಎ. ಖಾನ್ ಅವರು BEADSನ ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಬ್ಯಾರೀಸ್ ಅಕಾಡೆಮಿ ಆಫ್ ಲರ್ನಿಂಗ್‌ನ ಅಧ್ಯಕ್ಷ ಸೈಯದ್ ಮೊಹಮ್ಮದ್ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.

AI ಯುಗದಲ್ಲಿ ಮಾನವೀಯತೆ ಮುಖ್ಯ...

ಪದವೀಧರರನ್ನು ಉದ್ದೇಶಿಸಿ ಮಾತನಾಡಿದ ಡಾ. ಪ್ರಮೋದ್ ಕುಮಾರ್, ಕೈಗಾರಿಕಾ ಕ್ರಾಂತಿಗಳು ತಂದ ಬದಲಾವಣೆಗಳನ್ನು ವಿವರಿಸಿದರು. AI ಆಧಾರಿತ ಕೈಗಾರಿಕಾ ಕ್ರಾಂತಿಯು ಹಿಂದಿನ ಕ್ರಾಂತಿಗಳಿಗಿಂತಲೂ ವ್ಯಾಪಕ ಪರಿಣಾಮ ಬೀರಲಿದೆ. ಹೀಗಾಗಿ, ಮಾನವರು AIಗೆ ಹೊಂದಿಕೊಳ್ಳುವ ಮತ್ತು ಅದರೊಂದಿಗೆ ಸಹಬಾಳ್ವೆ ನಡೆಸುವ ವಿಧಾನವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಪ್ರೊ. ಬಿ. ರವಿ ಅವರು AI, ಇಂಜಿನಿಯರಿಂಗ್ ಮತ್ತು ಮಾಧ್ಯಮ ಕ್ಷೇತ್ರಗಳನ್ನು ಸಮಾಜ ಎದುರಿಸುತ್ತಿರುವ ಮೂರು ಪ್ರಮುಖ ಸವಾಲುಗಳೆಂದು ಉಲ್ಲೇಖಿಸಿದರು. AIಗೆ ಹೊಂದಿಕೊಳ್ಳುವಾಗ ಸಹಾನುಭೂತಿಯಂತಹ ಮಾನವೀಯ ಗುಣಗಳನ್ನು ಕಳೆದುಕೊಳ್ಳಬಾರದು. ಉತ್ತಮ ಇಂಜಿನಿಯರ್‌ ಗಳಾಗಲು ಕುತೂಹಲವನ್ನು ಉಳಿಸಿಕೊಳ್ಳಬೇಕು. ಧ್ರುವೀಕರಣ ಹೆಚ್ಚುತ್ತಿರುವ ಮಾಧ್ಯಮ ಪರಿಸರದಲ್ಲಿ ಸ್ವತಂತ್ರವಾಗಿ ಯೋಚಿಸಿ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಾರ್ವಜನಿಕ ಅಭಿಪ್ರಾಯ ರೂಪಿಸುವಲ್ಲಿ ಮಾಧ್ಯಮದ ಪ್ರಭಾವವನ್ನು ಉಲ್ಲೇಖಿಸಿದ ಅವರು, ಇತರರು ಹೇಳುವ ಮಾತುಗಳ ಆಧಾರದ ಮೇಲೆಯೇ ವ್ಯಕ್ತಿಗಳನ್ನು ನಿರ್ಣಯಿಸುವುದರ ವಿರುದ್ಧ ಎಚ್ಚರಿಕೆ ನೀಡಿದರು. ಪ್ರತಿಯೊಂದು ವಿಚಾರವನ್ನೂ ವಿಮರ್ಶಾತ್ಮಕವಾಗಿ ಪರಿಶೀಲಿಸಿ, ಸ್ವಂತ ಮೌಲ್ಯಮಾಪನದ ಆಧಾರದಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು. ಬ್ಯಾರೀಸ್ ಗ್ರೂಪ್ ಕಟ್ಟುವಲ್ಲಿ ಸೈಯದ್ ಮೊಹಮ್ಮದ್ ಬ್ಯಾರಿ ಅವರ ಕೊಡುಗೆಯನ್ನು ಶ್ಲಾಘಿಸಿದರು.

ವಿಶ್ವವಿದ್ಯಾಲಯವಾಗಿ ಬೆಳೆಯಲಿ:-

ಬ್ಯಾರೀಸ್ ಗ್ರೂಪ್ ಕಳೆದ ಒಂದು ಶತಮಾನದಲ್ಲಿ ಸಾಧಿಸಿರುವ ಬೆಳವಣಿಗೆಯನ್ನು ಪ್ರೊ. ಡಾ. ಜಾಫರ್ ಎ.ಎ. ಖಾನ್ ಶ್ಲಾಘಿಸಿದರು. ಸಂಸ್ಥೆಯ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಮುಂದಿನ ವರ್ಷಗಳಲ್ಲಿ ಬ್ಯಾರೀಸ್ ಗ್ರೂಪ್ ವಿಶ್ವವಿದ್ಯಾಲಯವಾಗಿ ಬೆಳೆಯಲಿ ಎಂದು ಆಶಿಸಿದರು.

ನಿರ್ಮಾಣ ಕ್ಷೇತ್ರದಲ್ಲಿ ವಾಸ್ತುಶಿಲ್ಪಿಗಳು ಮತ್ತು ಇಂಜಿನಿಯರ್‌ ಗಳ ಸಹಯೋಗದ ಅಗತ್ಯವನ್ನು ಒತ್ತಿಹೇಳಿದ ಅವರು, ಪ್ರತ್ಯೇಕವಾಗಿ ಕೆಲಸ ಮಾಡುವ ಬದಲು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.

ಉದ್ಯೋಗ ಸೃಷ್ಟಿಸುವವರಾಗಿ ಬೆಳೆಯಿರಿ

ಅಧ್ಯಕ್ಷೀಯ ಭಾಷಣ ಮಾಡಿದ ಸೈಯದ್ ಮೊಹಮ್ಮದ್ ಬ್ಯಾರಿ ಅವರು ನಂಬಿಕೆ, ಪ್ರಾಮಾಣಿಕತೆ, ಜವಾಬ್ದಾರಿ ಮತ್ತು ವೃತ್ತಿಪರ ಶ್ರೇಷ್ಠತೆಯ ಮಹತ್ವವನ್ನು ವಿವರಿಸಿದರು. ಪ್ರಾರ್ಥನೆಯು ಶಕ್ತಿಯ ಪ್ರಬಲ ಮೂಲ ಎಂದು ಬಣ್ಣಿಸಿದ ಅವರು, ದೇವರನ್ನು ಸ್ನೇಹಿತನಾಗಿ ಮತ್ತು ಜೀವನದ ಪಾಲುದಾರನಾಗಿ ಕಾಣಬೇಕು ಎಂದು ಹೇಳಿದರು.

ಹೊಸ ಅವಕಾಶಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುವ ಜತೆಗೆ ದೇವರನ್ನು ಅರಿಯಲು ಮತ್ತು ಆತನೊಂದಿಗೆ ಸಂಪರ್ಕ ಬೆಳೆಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಮಾತು ಮತ್ತು ಕೃತಿಯಲ್ಲಿ ಸಾಮ್ಯತೆ ಇರಬೇಕು. ಸತ್ಯಸಂಧತೆ ಹಾಗೂ ವಿಶ್ವಾಸಾರ್ಹತೆಯನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಪದವೀಧರರಿಗೆ ಕಿವಿಮಾತು ಹೇಳಿದರು. ತಮ್ಮ ಕೆಲಸದ ಮೂಲಕ ಅರ್ಥಪೂರ್ಣ ಪರಂಪರೆಯನ್ನು ನಿರ್ಮಿಸುವ ಜತೆಗೆ ನಿರಂತರವಾಗಿ ಶ್ರೇಷ್ಠತೆಯತ್ತ ಸಾಗಬೇಕು ಎಂದು ಪ್ರೋತ್ಸಾಹಿಸಿದರು.

ಸಾಮಾಜಿಕ ಜವಾಬ್ದಾರಿಯ ಕುರಿತು ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಯ ಹೊಣೆಯನ್ನು ಕೇವಲ ಸಂಸ್ಥೆಗಳು ಮತ್ತು ಸಂಘಟನೆಗಳ ಮೇಲೆ ಹೊರಿಸಬಾರದು. ಪ್ರತಿಯೊಬ್ಬ ವ್ಯಕ್ತಿಯೂ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡಬೇಕು ಎಂದರು.

ಅಮೆರಿಕದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಮಾದರಿಯನ್ನು ಉಲ್ಲೇಖಿಸಿದ ಅವರು, ವೈಯಕ್ತಿಕ ಸಾಮಾಜಿಕ ಜವಾಬ್ದಾರಿ (ISR) ಪರಿಕಲ್ಪನೆಯನ್ನು ಪ್ರತಿಪಾದಿಸಿದರು. ಗಳಿಸುವುದಕ್ಕೂ ಮೊದಲು ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ದಾನ ಮತ್ತು ಸೇವೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

21ನೇ ಶತಮಾನ ಭಾರತಕ್ಕೆ ಸೇರಿದ್ದು ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಪದವೀಧರರು ಉದ್ಯೋಗ ಹುಡುಕುವವರಾಗುವ ಬದಲು ಉದ್ಯೋಗ ಸೃಷ್ಟಿಸುವವರಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

ಬ್ಯಾರೀಸ್ ನಾಲೆಜ್ ಕ್ಯಾಂಪಸ್‌ನ ನಿರ್ದೇಶಕ ಡಾ. ಮಂಜೂರ್ ಬಾಷಾ ಸ್ವಾಗತಿಸಿದರು. BITಯ ಪ್ರಾಂಶುಪಾಲ ಡಾ. ಸಿ. ಕಮಲಕಣ್ಣನ್ ವಂದಿಸಿದರು. ಡಾ. ಪೂಜಾ ಮತ್ತು ಜಾಯ್ಸನ್ ಮಿರಾಂಡಾ ಕಾರ್ಯಕ್ರಮ ನಿರೂಪಿಸಿದರು. ಕುಂದಾಪುರದ ಕೋಡಿಯಲ್ಲಿರುವ ಬ್ಯಾರೀಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಅಧ್ಯಕ್ಷ ಅಬ್ದುಲ್ ರೆಹಮಾನ್ ಬ್ಯಾರಿ ಹಾಗೂ ಟ್ರಸ್ಟಿ ಡಾ. ಆಸಿಫ್ ಬ್ಯಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.















Tags

Bearys GroupGraduation Dayspeakersgraduatesembrace AIhuman values
share
ವಾರ್ತಾಭಾರತಿ
ವಾರ್ತಾಭಾರತಿ
Next Story
X