Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ| ಮಹಿಳೆಯ ಮನೆ ಮುಟ್ಟುಗೋಲು...

ಬೆಳ್ತಂಗಡಿ| ಮಹಿಳೆಯ ಮನೆ ಮುಟ್ಟುಗೋಲು ಕ್ರಮ ವಾಪಸ್‌ ಪಡೆಯಲು ಮನವಿ

ವಾರ್ತಾಭಾರತಿವಾರ್ತಾಭಾರತಿ7 Nov 2025 5:43 PM IST
share
ಬೆಳ್ತಂಗಡಿ| ಮಹಿಳೆಯ ಮನೆ ಮುಟ್ಟುಗೋಲು ಕ್ರಮ ವಾಪಸ್‌ ಪಡೆಯಲು ಮನವಿ
ಜಾನುವಾರು ಮಾರಾಟ ಮಾಡಿದ್ದಕ್ಕೆ ಮನೆ ಮುಟ್ಟುಗೋಲು ಹಾಕಿದ್ದು ಕಾನೂನು ಬಾಹಿರ : ಬಿ.ಎಂ ಭಟ್

ಬೆಳ್ತಂಗಡಿ:‌ ಅಕ್ರಮ ಗೋ ಸಾಗಾಟಗಾರರಿಗೆ ದನವನ್ನು ಮಾರಾಟ ಮಾಡಿದ್ದಾರೆ ಎಂದು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿನ ನಿವಾಸಿ ಜೊಹರಾ ಎಂಬವರ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿರುವ ಕ್ರಮ ಕಾನೂನು ಬಾಹಿರ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ದವಾಗಿದೆ. ಈ ಕ್ರಮವನ್ನು ಹಿಂಪಡೆದು ಮೂವರು ಮಕ್ಕಳೊಂದಿಗೆ ಬದುಕುತ್ತಿರುವ ಬಡ ಮಹಿಳೆಯ ಕುಟುಂಬಕ್ಕೆ ಬದುಕುವ ಅವಕಾಶವನ್ನು ನೀಡುವಂತೆ ಸಿಪಿಐಎಂ ಪಕ್ಷದ ಮುಖಂಡ‌ ಬಿ.ಎಂ ಭಟ್ ಅವರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ ನೀಡಿದ್ದಾರೆ.

ನ.4 ರಂದು ಅಕ್ರಮವಾಗಿ ದನಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದರು. ಪ್ರಕರಣದಲ್ಲಿ ಇವರಿಗೆ ದನ ಮಾರಾಟ ಮಾಡಿದ್ದ ಪಟ್ಟೂರು ನಿವಾಸಿ ಜೊಹರಾ ಎಂಬವರ ವಿರುದ್ದವೂ ಪ್ರಕರಣ ದಾಖಲಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಮುಂದುವರಿಸಿದ ಧರ್ಮಸ್ಥಳ ಪೊಲೀಸರು ನ 6 ರಂದು ಜೊಹರ ಅವರ ಮನೆಯನ್ನು ಮುಟ್ಟುಗೋಲು ಹಾಕಿದ್ದು, ಈ ಮನೆಯಲ್ಲಿರುವ ಶಾಲೆಗ ಹೋಗುವ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಮೂವರು ಮಕ್ಕಳ ಸಹಿತ ಇಡೀ ಕುಟುಂಬ ಬೀದಿಗೆ ಬಿದ್ದಂತಾಗಿದೆ ಎಂದು ಅವರು ಹೇಳಿದ್ದಾರೆ.

ಹಾಲು ಉತ್ಪಾದಕರು ಕೃಷಿಕರು ಜಾನುವಾರುಗಳನ್ನು ಖರೀದಿಸುವುದು ಮಾರಾಟ ಮಾಡುವುದು ಸಾಮಾನ್ಯ ವಿಚಾರವಾಗಿದೆ. ಖರೀದಿಸಿದವರು ಅದನ್ನು ಕಾನೂನು ಬಾಹಿರ ಕೆಲಸಗಳಿಗೆ ಉಪಯೋಗಿಸುತ್ತಾರೋ ಎಂಬುದು ಅವರಿಗೆ ತಿಳಿಯಲು ಸಾಧ್ಯವಿಲ್ಲ. ಹೀಗಿರುವಾಗ ದನವನ್ನು ಮಾರಿದರು ಎಂಬ ಕಾರಣಕ್ಕೆ ಒರ್ವ ಮಹಿಳೆ ತನ್ನ ಮಕ್ಕಳೊಂದಿಗೆ ವಾಸಿಸುತ್ತಿರುವ ಮನೆಯನ್ನು ಸರಿಯಾದ ನೋಟೀಸ್ ಕೂಡಾ ನೀಡದೆ ಮುಟ್ಟುಗೋಲು ಹಾಕಿರುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸರು ಪ್ರಕರಣದಲ್ಲಿ ಜೊಹರಾ ಅವರು ದನ ಸಾಗಾಟಗಾರರಿಗೆ ದನವನ್ನು ಮಾರಿರುವುದು ಮಾತ್ರ. ದನದ ಹತ್ಯೆ ಜೊಹರಾ ಅವರಿಗೆ ಸೇರಿರುವ ಜಾಗದಲ್ಲಿ ನಡೆದಿರುವ ಬಗ್ಗೆ ಎಫ್.ಐ.ಆರ್ ನಲ್ಲಿ ಮಾಹಿತಿ ಇಲ್ಲ. ದನವನ್ನು ಮಾರಾಟ ಮಾಡುವುದೇ ಸ್ಥಳವನ್ನು ಜಪ್ತಿ ಮಾಡುವಂತಹ ಅಪರಾಧವಾದರೆ ರೈತರ ಜಮೀನುಗಳನ್ನು ಮುಟ್ಟುಗೋಲು ಹಾಕಬೇಕಾಗುತ್ತದೆ ಎಂದು ಎಂದು ಮನವಿಯಲ್ಲಿ ಹೇಳಿದ್ದಾರೆ.

ನ.6 ರಂದೆ ನೋಟೀಸ್ ನೀಡಿ ಕನಿಷ್ಟ ಸ್ಪಷ್ಟನೆ ನೀಡಲು ಸಮಯಾವಕಾಶ ನೀಡದೆ ಅದೇ ದಿನ ವಾಸದ ಮನೆಯನ್ನು ಮುಟ್ಟುಗೋಲು ಹಾಕುವ ಕಾರ್ಯವನ್ನು ಪೊಲೀಸರು ಮಾಡಿದ್ದಾರೆ . ಮುಟ್ಟುಗೋಲು ಹಾಕಿದ ಮನೆಯಲ್ಲಿ ಯಾವ ತರದ ಅಕ್ರಮ ವ್ಯವಹಾರಗಳು ನಡೆದಿಲ್ಲ. ಹೀಗಿರುವಾಗ ಮೂವರು ಮಕ್ಕಳು ಹಾಗೂ ವೃದ್ದ ತಾಯಿಯೊಂದಿಗೆ ಮಹಿಳೆಯೊಬ್ಬರು ವಾಸಿಸುತ್ತಿರುವ ಮನೆಯನ್ನು ಮುಟ್ಟುಗೋಲು ಹಾಕಿರುವ ಕ್ರಮವನ್ನು ಹಿಂಪಡೆದು ಮಾನವೀಯ ನೆಲೆಯಲ್ಲಿ ಈ ಕುಟುಂಬಕ್ಕೆ ವಾಸಿಸಲು ಮನೆಯನ್ನು ಬಿಟ್ಟು ಕೊಡಲು ಮನವಿಯಲ್ಲಿ ವಿನಂತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X