ಬೆಳ್ತಂಗಡಿ: ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಶ್ರೀಧರ ವೆಂಕಟ ಕೃಷ್ಣ ಉಪಾಧ್ಯಯ ಹೊನ್ನಾವರ ಎಂಬಾತ ಬಂಧಿತ ಆರೋಪಿ. ಈತನ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಅ. ಕ್ರ. 510/2015 ಕಲಂ. 379 ಐಪಿಸಿ ಪ್ರಕರಣ ದಾಖಲಾಗಿತ್ತು. ಈತ ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಆರೋಪಿಯನ್ನು ಜು11 ರಂದು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ನಾಗೇಶ್ ಕದ್ರಿ, ಉಪ ನೀರಿಕ್ಷಕರು ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ರವರು ಮಂಗಳೂರು ನಿಂದ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿದಿಸಲಾಗಿದೆ.
Next Story





