Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ | ಸ್ಕ್ರ್ಯಾಚ್‌ ಜೀನ್ಸ್‌...

ಬೆಳ್ತಂಗಡಿ | ಸ್ಕ್ರ್ಯಾಚ್‌ ಜೀನ್ಸ್‌ ಧರಿಸಿದ್ದ ಹುಡುಗನ ಪ್ಯಾಂಟ್‌ ಹೊಲಿದ ಯುವಕರು; ವಿಡಿಯೋ ವೈರಲ್

ನೊಂದ ಯುವಕ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ವಾರ್ತಾಭಾರತಿವಾರ್ತಾಭಾರತಿ22 Nov 2024 10:57 AM IST
share
Photo of  Ragging

ಬೆಳ್ತಂಗಡಿ: ಯುವಕನೊಬ್ಬ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಮಂದಿಯ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್‌ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕಜಾಲತಾಣದಲ್ಲಿ ಹಾಕಿದ್ದು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್ , ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂಬ ಯುವಕ ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಧರಿಸಿ ‌ ಗುರುವಾರ ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು, ಅದನ್ನು ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದಾರೆ.

ವಿಡಿಯೋ ಮೂಲಕ ಟ್ರೋಲ್ ಮಾಡಿದ್ದರಿಂದ ಮಾನಸಿಕವಾಗಿ ನೊಂದ ಶಾಹಿಲ್ ಗುರುವಾರ ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಧ್ಯ ಘಟನೆಯ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.

ಯುವಕನೊಬ್ಬ ವಿನೂತನ ಶೈಲಿಯ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿದ್ದಲ್ಲದೇ, ಆತನ ಎರಡೂ ಕೈಗಳನ್ನು ಬಲವಂತವಾಗಿ ಹಿಡಿದು ಪ್ಯಾಂಟಿಗೆ ಗೋಣಿಚೀಲದ ಸೂಜಿಯಿಂದ ಹೊಲಿಗೆ ಹಾಕಿ, ಅದರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. pic.twitter.com/f7SEaxR3qL

— Irshad Venur ಇರ್ಷಾದ್ ವೇಣೂರು (@muhammadirshad6) November 22, 2024

Tags

belthangady
share
ವಾರ್ತಾಭಾರತಿ
ವಾರ್ತಾಭಾರತಿ
Next Story
X