Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೀದರ್‌ನ ಶಾಹೀನ್ ಸಂಸ್ಥೆಯ ಮಂಗಳೂರಿನ...

ಬೀದರ್‌ನ ಶಾಹೀನ್ ಸಂಸ್ಥೆಯ ಮಂಗಳೂರಿನ ವಿದ್ಯಾರ್ಥಿನಿ ತೀವ್ರ ಅಸ್ವಸ್ಥ : ಸಮಗ್ರ ತನಿಖೆಗೆ ಪೋಷಕರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Sept 2026 1:09 PM IST
share
ಬೀದರ್‌ನ ಶಾಹೀನ್ ಸಂಸ್ಥೆಯ ಮಂಗಳೂರಿನ ವಿದ್ಯಾರ್ಥಿನಿ ತೀವ್ರ ಅಸ್ವಸ್ಥ : ಸಮಗ್ರ ತನಿಖೆಗೆ ಪೋಷಕರ ಆಗ್ರಹ

ಮಂಗಳೂರು : ಬೀದರ್‌ನ ಶಾಹೀನ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಂಗಳೂರಿನ ವಿದ್ಯಾರ್ಥಿನಿ ಯುಮ್ನ ಅವರು ಸಂಸ್ಥೆಯ ಹಾಸ್ಟೆಲ್‌ನಲ್ಲಿ ಅಸ್ವಸ್ಥಗೊಂಡ ಪರಿಣಾಮ ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ಅವರ ಪೋಷಕರು ಹೇಳಿದ್ದಾರೆ. ಅವರ ಈ ಗಂಭೀರ ಸ್ಥಿತಿಗೆ ಸಂಸ್ಥೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಪೋಷಕರು, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿದ್ಯಾರ್ಥಿನಿಯ ತಂದೆ ಅಶ್ಪಾಕ್ ಶೇಕ್, ಹಾಸ್ಟೆಲ್‌ನಲ್ಲಿ ತೀವ್ರ ಅನಾರೋಗ್ಯ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ತಮ್ಮ ಪುತ್ರಿಗೆ ಅಲ್ಲಿನ ನರ್ಸಿಂಗ್ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಯಿತು. ಆದರೆ ಆಕೆಯ ಆರೋಗ್ಯ ಮತ್ತಷ್ಟು ಹದಗೆಟ್ಟಾಗ ಸೂಕ್ತ ಸಮಯದಲ್ಲಿ ವೈದ್ಯಕೀಯ ಚಿಕಿತ್ಸೆ ಅಥವಾ ಆಸ್ಪತ್ರೆ ಸೇರಿಸಿಲ್ಲ ಎಂದು ಅಶ್ಪಾಕ್ ಶೇಕ್ ಆರೋಪಿಸಿದರು.

ಮಗಳು ಅನಾರೋಗ್ಯ ಪೀಡಿತರಾಗಿದ್ದಾರೆ ಎನ್ನುವ ಮಾಹಿತಿಯನ್ನು ಪಡೆದುಕೊಂಡು ಅಲ್ಲಿಂದ ಮಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಿದಾಗ ಟೈಫಾಯ್ಡ್ ಜ್ವರವಿರುವುದು ಪತ್ತೆಯಾಯಿತು. ಆರಂಭದಲ್ಲಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ ದೇಹದಲ್ಲಿ ಕಿಡ್ನಿ, ಮೆದುಳು ಎಲ್ಲವೂ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ವೈದ್ಯರು ತಿಳಿಸಿದರು. ಈಗಾಗಲೇ 35 ಲಕ್ಷ ರೂ.ಗಳನ್ನು ಮಗಳ ಆರೋಗ್ಯಕ್ಕಾಗಿ ಖರ್ಚು ಮಾಡಲಾಗಿದೆ. ಆದರೆ ಸಂಸ್ಥೆಯವರು ಮಗಳನ್ನು ಕರೆದುಕೊಂಡು ಬಂದ ಬಳಿಕ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಬೀದರ್‌ನ ಹಾಸ್ಟೆಲ್‌ನಲ್ಲಿ ಅನಾರೋಗ್ಯ ಪೀಡಿತರಾದ ಬಳಿಕ ಅಲ್ಲಿ ನೀಡಿದ ಎಲ್ಲ ಚಿಕಿತ್ಸೆಯ ವಿವರ, ವೈದ್ಯಕೀಯ ದಾಖಲೆ, ಸಿಸಿಟಿವಿಯ ಮಾಹಿತಿ ಎಲ್ಲ ವಿವರಗಳನ್ನು ಒದಗಿಸಬೇಕು. ತನಿಖೆಯ ವರದಿ ಮತ್ತು ಅನ್ವಯಿಸುವ ಕಾನೂನುಗಳ ಆಧಾರದ ಮೇಲೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಈಗಾಗಲೇ ಅಲ್ಲಿ ಬಹಳಷ್ಟು ಮಕ್ಕಳು ಜಾಂಡೀಸ್, ಟೈಫಾಯ್ಡ್ ಸೇರಿದಂತೆ ಇತರ ಕಾಯಿಲೆಗಳಿಂದ ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ. ಅವರ ಆರೋಗ್ಯ ಪರಿಶೀಲನೆ ಮಾಡಿಸಬೇಕು ಎಂದು ಅಶ್ಪಾಕ್ ಶೇಕ್ ಆಗ್ರಹಿಸಿದರು.

ಈ ಸಂದರ್ಭ ವಿದ್ಯಾರ್ಥಿನಿಯ ಕುಟುಂಬಸ್ಥರಾದ ಸೈಯದ್ ಶಾರೀಕ್, ಶೌಕತ್ ಉಪಸ್ಥಿತರಿದ್ದರು.

ಸಿಎಂ, ಶಿಕ್ಷಣ ಮಂತ್ರಿಗೂ ಮನವಿ :

ರಾಜ್ಯದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಬಳಿಗೆ ಈ ವಿಚಾರವನ್ನು ತಿಳಿಸಿದ್ದೇವೆ. ಆದರೆ ಅವರು ಇದಕ್ಕೆ ಪೂರಕವಾಗಿ ಸ್ಪಂದಿಸಿಲ್ಲ. ಸೆ.15ರಂದು ಅವರ ವಾಟ್ಸಾಪ್‌ಗೂ ಮಾಹಿತಿ ಕೊಟ್ಟಿದ್ದೇವೆ. ನಮಗೆ ನೆರವು ಸಿಗುತ್ತಿಲ್ಲ. ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವರಿಗೂ ಮನವಿ ನೀಡುವ ಕೆಲಸ ಮಾಡಿದ್ದೇವೆ ಎಂದು ಅಶ್ಪಾಕ್ ಶೇಕ್ ಹೇಳಿದರು.

‘ಶಾಹೀನ್ ಸಂಸ್ಥೆಯಲ್ಲಿ ಕಲಿಯುತ್ತಿರುವ ನನ್ನ ಮಗಳೂ ಅನಾರೋಗ್ಯಕ್ಕೆ ತುತ್ತಾಗಿ ಈಗಲೂ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ನಿನ್ನೆಯಿಂದ ಆಕೆ ಕಣ್ಣು ತೆರೆದಿದ್ದಾಳೆ. ಅಲ್ಲಿ ಗುಣಮಟ್ಟದ ಶಿಕ್ಷಣ ಸಿಗುವ ನಿರೀಕ್ಷೆಯೊಂದಿಗೆ ಮಗಳನ್ನು ಆ ಸಂಸ್ಥೆಗೆ ಸೇರಿಸಲಾಗಿದೆ. ಇದೀಗ ಅಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಈ ರೀತಿ ಅನಾರೋಗ್ಯಕ್ಕೆ ತುತ್ತಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು’ ಎಂದು ದಾವಣಗೆರೆ ಮೂಲದ ವಿದ್ಯಾರ್ಥಿನಿಯೊಬ್ಬರ ತಂದೆ ಅನ್ಸಾರ್ ಅಲಿ ಅವರು ಆಗ್ರಹಿಸಿದರು.

Tags

MangaluruStudentShaheen InstitutionBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X