BITಯ ECE, CSE ಕೋರ್ಸ್‌ಗಳಿಗೆ NBA ಮಾನ್ಯತೆ

ಮಂಗಳೂರು, ಜೂ. 3: ನಗರದ ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ)ಯ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ (ಇಸಿಇ) ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ಸಿಎಸ್‌ಇ) ವಿಭಾಗಗಳ ಬಿ.ಇ. ಕೋರ್ಸ್‌ಗಳಿಗೆ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್‌ಬಿಎ) ಮಾನ್ಯತೆ ದೊರೆತಿದೆ.
ಇಂಜಿನಿಯರಿಂಗ್ ಶಿಕ್ಷಣದಲ್ಲಿ ಉನ್ನತ ಗುಣಮಟ್ಟ ಕಾಯ್ದುಕೊಳ್ಳುವುದು, ಬೋಧನೆ–ಕಲಿಕಾ ಪ್ರಕ್ರಿಯೆಗಳಲ್ಲಿ ನಿರಂತರ ಸುಧಾರಣೆ ತರುವುದು, ಉದ್ಯಮದ ಅಗತ್ಯಗಳಿಗೆ ಅನುಗುಣವಾದ ಪಠ್ಯಕ್ರಮ ಜಾರಿಗೊಳಿಸುವುದು ಹಾಗೂ ಫಲಿತಾಂಶಾಧಾರಿತ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಳ್ಳುವಲ್ಲಿ ಸಂಸ್ಥೆ ತೋರಿದ ಬದ್ಧತೆಯನ್ನು ಈ ಮಾನ್ಯತೆ ಗುರುತಿಸಿದೆ. ದೇಶದ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಎನ್‌ಬಿಎ ಮಾನ್ಯತೆಯನ್ನು ಗುಣಮಟ್ಟದ ಪ್ರತಿಷ್ಠಿತ ಮಾನದಂಡವೆಂದು ಪರಿಗಣಿಸಲಾಗುತ್ತದೆ.
ಈ ಸಾಧನೆ ಕುರಿತು ಬಿಐಟಿಯ ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಎನ್‌ಬಿಎ ಮಾನ್ಯತೆಯಿಂದ ಸಂಸ್ಥೆಯ ಶೈಕ್ಷಣಿಕ ಪ್ರತಿಷ್ಠೆ ಮತ್ತಷ್ಟು ಹೆಚ್ಚಲಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ಉದ್ಯೋಗ ಹಾಗೂ ವೃತ್ತಿಪರ ಬೆಳವಣಿಗೆಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ ಎಂದು ಸಂಸ್ಥೆ ತಿಳಿಸಿದೆ.
"ಈ ಸಾಧನೆಗೆ ಅಧ್ಯಾಪಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು, ಉದ್ಯಮ ವಲಯದ ಪ್ರತಿನಿಧಿಗಳು ಹಾಗೂ ಇತರರ ಸಹಕಾರ ಕಾರಣವಾಗಿದೆ ಎಂದು ಸಂಸ್ಥೆ ತಿಳಿಸಿದೆ. ಇಂಜಿನಿಯರಿಂಗ್ ಶಿಕ್ಷಣದಲ್ಲಿ ಗುಣಮಟ್ಟ, ಹೊಸತನ ಹಾಗೂ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಬಿಐಟಿ ನೀಡುತ್ತಿರುವ ಆದ್ಯತೆಯನ್ನು ಈ ಮಾನ್ಯತೆ ಪ್ರತಿಬಿಂಬಿಸುತ್ತದೆ" ಎಂದೂ ಹೇಳಿದೆ.
"ಎನ್‌ಬಿಎ ಮಾನ್ಯತೆ ದೊರೆತಿರುವುದಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಮಾನ್ಯತೆಯು ಸಂಸ್ಥೆಯ ಶೈಕ್ಷಣಿಕ ಬೆಳವಣಿಗೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.".






