Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೋಳಿಯಾರು ಪ್ರಕರಣ ಒಂದು ಮನೆಯಲ್ಲಿ...

ಬೋಳಿಯಾರು ಪ್ರಕರಣ ಒಂದು ಮನೆಯಲ್ಲಿ ಆಗಿರುವ ಘಟನೆ: ಅಭಿಷೇಕ್ ಉಳ್ಳಾಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ13 Jun 2024 3:35 PM IST
share
ಬೋಳಿಯಾರು ಪ್ರಕರಣ ಒಂದು ಮನೆಯಲ್ಲಿ ಆಗಿರುವ ಘಟನೆ: ಅಭಿಷೇಕ್ ಉಳ್ಳಾಲ್ ಆರೋಪ

ಉಳ್ಳಾಲ: ಬೋಳಿಯಾರು ಚೂರಿ ಇರಿತ ಪ್ರಕರಣ ಒಂದು ಮನೆಯಲ್ಲಿ ಆದ ಘಟನೆ, ಚುನಾವಣೆ ಸಂದರ್ಭದಲ್ಲಿ ಶಾಸಕರನ್ನು ಸೋಲಿಸಲು ಜಂಟಿಯಾಗಿ ಪ್ರಯತ್ನಿಸಿದ ಎರಡು ಪಕ್ಷದವರ ನಡುವೆ ನಡೆದಿರುವ ಘಟನೆ ಇದಾದರೂ ಕಾನೂನು ಪರ ಇರುವ ಶಾಸಕರ ಮೇಲೆ ಗೂಬೆ ಕೂರಿಸುವ ಕೆಲಸಗಳು ಬಿಜೆಪಿ ಮುಖಂಡರು ಹಾಗೂ ಶಾಸಕರಿಂದ ಆಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಅಭಿಷೇಕ್ ಉಳ್ಳಾಲ್ ಆರೋಪಿಸಿದ್ದಾರೆ.

ಅವರು ಗುರುವಾರ ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭೆ ಚುನಾವಣಾ ಸಂದರ್ಭ ಶಾಸಕರನ್ನು ಸೋಲಿಸಲು ಜಂಟಿಯಾಗಿ ಹೋರಾಟ ನಡೆಸಿದವರ ನಡುವೆ ಹೋರಾಟ ನಡೆಯುತ್ತಿದೆ. ಭಾರತ್ ಮಾತಾ ಕಿ ಜೈ ಪ್ರಚೋದನಕಾರಿ ಎಂದು ಯಾವತ್ತೂ ಕಾಂಗ್ರೆಸ್ ಹೇಳುವುದಿಲ್ಲ. ಅಲ್ಲಿ ನಡೆದಿರುವ ನೈಜ ವಿಚಾರ ಸತ್ಯ ಸಂಗತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿಸುವ ಕಾರ್ಯವಾಗಬೇಕು. ಶಾಸಕರು ಕಾನೂನು ವ್ಯಾಪ್ತಿಯಲ್ಲಿ ಕೆಲಸಕಾರ್ಯಗಳನ್ನು ಮಾಡಿದ್ದಾರೆ‌ ತಪ್ಪಿತಸ್ಥ ರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರು ಅನುಮತಿ ಪಡೆಯದೆ ರ್‍ಯಾಲಿ ನಡೆಸಿದ್ದಾರೆ. ಪಕ್ಷದ ವಿಜಯೋತ್ಸವ ವೇಳೆ ಕಾರ್ಯಕರ್ತರಲ್ಲಿ ನಾಯಕರು ನಡೆದುಕೊಳ್ಳುವ ರೀತಿಯನ್ನು ತಿಳಿಸಬೇಕು. ಅದನ್ನು ಬಿಟ್ಟು ಶಾಸಕರ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ? ಕಾಂಗ್ರೆಸ್ ಶಾಂತಿಯನ್ನು ಕೆಡಿಸಿರುವ ಇತಿಹಾಸವೇ ಇಲ್ಲ. ಯು.ಟಿ‌ ಖಾದರ್ ವೈರಿ ಎಂದು ಹೇಳುವವರು ಕಾನೂನು ವಿರುದ್ಧವಾಗಿ ಇರುವವರು. ಬೋಳಿಯಾರು ಪ್ರಕರಣದಲ್ಲಿ ಸಿಸಿಟಿವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಯುತ್ತಿದ್ದು, ಸತ್ಯಾಂಶವನ್ನು ಪೊಲೀಸ್ ಇಲಾಖೆ ಜನತೆಯ ಮುಂದೆ ತಂದಿದೆ. ಈ ಬಗ್ಗೆ ಬಿಜೆಪಿ ನಾಯಕರ ಸಲಹೆಯ ಅಗತ್ಯವಿಲ್ಲ. ಭಾರತದವನ್ನು ಪಾಕಿಸ್ತಾನದವ ಅಂದರೆ ಸುಮ್ಮನೆ ಯಾರೂ ಕೂರುವುದಿಲ್ಲ. ಇಡೀ ಘಟನೆಯನ್ನು ಶಾಸಕರ ತಲೆಗೆ ಕಟ್ಟಿಕೊಡುವುದು ಹಾಸ್ಯಾಸ್ಪದ ಎಂದರು

ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರವೂಫ್ ಮಾತನಾಡಿ,ಬೋಳಿಯಾರ್ ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕಾನೂನು ಹೋರಾಟ ಮಾಡಿದವರು ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಯಾದಾಗ ಎಲ್ಲಿ ಹೋಗಿದ್ದರು? ಯಾಕೆ ಕಾನೂನು ಹೋರಾಟ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಈ ಸಂದರ್ಭ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಂ ರವೂಫ್, ಯುವಕಾಂಗ್ರೆಸ್ ಅಧ್ಯಕ್ಷ ಫಿರೋಝ್ ಮಲಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X