ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ
![ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ](https://www.varthabharati.in/h-upload/2024/04/04/1258350-cbc.webp)
ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ ,ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಉಪಸ್ಥಿತರಿದ್ದರು.
Next Story