Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ | ತಮ್ಮನಿಗೆ ಹುಚ್ಚನೆಂದು...

ಬಂಟ್ವಾಳ | ತಮ್ಮನಿಗೆ ಹುಚ್ಚನೆಂದು ಹಣೆಪಟ್ಟಿ ಕಟ್ಟಿ ಆಸ್ತಿ ಕಬಳಿಸಲು ಯತ್ನ : ಅಣ್ಣಂದಿರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ7 Jun 2025 10:37 PM IST
share
ಬಂಟ್ವಾಳ | ತಮ್ಮನಿಗೆ ಹುಚ್ಚನೆಂದು ಹಣೆಪಟ್ಟಿ ಕಟ್ಟಿ  ಆಸ್ತಿ ಕಬಳಿಸಲು ಯತ್ನ : ಅಣ್ಣಂದಿರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ಆಸ್ತಿ ಕಬಳಿಕೆ ಉದ್ದೇಶದಿಂದ ವೀಲುನಾಮೆ ಯಾನೆ ಮರಣ ಶಾಸನ ದಾಖಲೆಯನ್ನು ಸೃಷ್ಟಿಸಿ, ವಂಚನೆ, ವಿಶ್ವಾಸದ್ರೋಹ, ಪ್ರಾಣ ಬೆದರಿಕೆ ಹಾಗೂ ಸುಲಿಗೆ ಮಾಡಿರುವ ಆರೋಪದಲ್ಲಿ ವ್ಯಕ್ತಿಯೋರ್ವ ತನ್ನ ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬರಿಮಾರು ಗ್ರಾಮದ ಪುರುಷಕೋಡಿ ನಿವಾಸಿ ವಲೇರಿಯನ್ ಲಸ್ರಾದೊ(51) ಅವರು ತನ್ನ ಸಹೋದರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಹೋದರರಾದ ಬೆನೆಡಿಕ್ಟ್ ಲಸ್ರಾದೊ (64) ಹಾಗೂ ಫೆಡ್ರಿಕ್ ಲಸ್ರಾದೊ (59)ಜೊತೆಗೂಡಿ ನನಗೆ ಮದ್ಯಪಾನ ಮಾಡಿಸಿ, ಮನವೊಲಿಸಿ ಬರಿಮಾರು ಗ್ರಾಮದ ಸರ್ವೇ ನಂಬರ್ 51/5ರಲ್ಲಿ 2.78 ಎಕ್ರೆ ವಿಸ್ತೀರ್ಣದ ಜಮೀನನ್ನು ವಿಟ್ಲ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರೆಡ್ ವೀಲುನಾಮೆ ಯಾನೆ ಮರಣ ಶಾಸನ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆನಂತರ ಪ್ರತಿದಿನ ಸಂಜೆ ಶರಾಬು ಹಾಗೂ ಮಾಂಸ ನೀಡಿ ಅಮಲಿನ ದಾಸನಾಗುವಂತೆ ಮಾಡಿ, ಮೂಲ ವೀಲುನಾಮೆಯನ್ನು ಬಲಾತ್ಕಾರವಾಗಿ ಇಟ್ಟುಕೊಂಡಿದ್ದಾರೆ. ಸಹೋದರರ ಕೈಗೆ ರಿಜಿಸ್ಟ್ರೆಡ್ ವೀಲುನಾಮೆಯ ಮೂಲ ಪ್ರತಿ ದೊರಕಿದ ನಂತರ ಹುಚ್ಚನೆಂಬ ಹಣೆಪಟ್ಟಿ ಕಟ್ಟಿ ಉಡುಪಿಯ "ಇಮ್ಮಾನ್ಯುಯೆಲ್ ಟ್ರಸ್ಟ್” ಎಂಬ ಹೆಸರಿನ ಆಶ್ರಮಕ್ಕೆ ಬಲಾತ್ಕಾರವಾಗಿ ಸೇರಿಸಿ ಉಳಿತಾಯ ಖಾತೆಯಿಂದ ಎಟಿಎಂ ಮುಖಾಂತರ ಹಂತ ಹಂತವಾಗಿ 1.50 ಲಕ್ಷ ರೂಪಾಯಿಗಳನ್ನು ಡ್ರಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಆಶ್ರಮದಲ್ಲಿ ಸಹೋದರರು ತಮ್ಮ ಪ್ರಭಾವದ ಮೂಲಕ ಹುಚ್ಚನೆಂಬ ಹಣೆಪಟ್ಟಿ ಕಟ್ಟಲು 8 ತಿಂಗಳು ಕೋಣೆಯಲ್ಲಿ ಬಲಾತ್ಕಾರವಾಗಿ ಕೂಡಿಹಾಕಿ, ಶೌಚಾಲಯದ ನೀರನ್ನು ಕುಡಿಸಿ ವಿವಿಧ ರೀತಿಯಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ನಂತರವೂ ಅಪರಿಚಿತ ಗೂಂಡಾಗಳ ಸಹಾಯದಿಂದ ಪಂಪ್ ವೆಲ್ ಬಳಿ ಇರುವ ಆಶ್ರಮದಲ್ಲಿ ಕೂಡಿ ಹಾಕಿದ್ದರು. ಅಲ್ಲಿಂದಲೂ ತಪ್ಪಿಸಿ ಬಂದಿದ್ದೇನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಅಣ್ಣಂದಿರಾದ ಬೆನೆಡಿಕ್ಟ್ ಲಸ್ರಾದೊ ಹಾಗೂ ಫ್ರೆಡ್ರಿಕ್ ನನಗೆ ಮನೆಯೊಳಗೆ ಪ್ರವೇಶಿಸದಂತೆ ನಿರ್ಬಂಧಿಸಿದ್ದಾರೆ ಹಾಗೂ ಮನೆ ಮತ್ತು ಜಾಗವನ್ನು ತಮ್ಮ ಸ್ವಾಧೀನದಲ್ಲಿ ಬಲಾತ್ಕಾರವಾಗಿ ಇಟ್ಟುಕೊಂಡಿದ್ದಾರೆ. ತನ್ನ ಜಮೀನಿನಲ್ಲಿ ಕಳೆದ ಮೂರು ವರ್ಷಗಳಿಂದ ಬೆಳೆದ 45 ಕ್ವಿಂಟಲ್ ಗಳಿಗಿಂತಲೂ ಅಧಿಕ ಅಡಿಕೆಯನ್ನು ಮಾರಾಟ ಮಾಡಿ ಯಾವುದೇ ಹಣ ನೀಡದೆ ಬಿಕ್ಷಾಟನೆ ಮಾಡುವಂತೆ ಮಾಡಿದ್ದಾರೆ. 15 ಲಕ್ಷ ರೂಪಾಯಿಗಳಿಗಿಂತಲೂ ಹೆಚ್ಚಿನ ನನ್ನ ಹಣದಿಂದ ಅಣ್ಣ ಬೆನೆಡಿಕ್ಟ್ ಲಸ್ರಾದೊ ಕಾರು ಹಾಗೂ ವಸ್ತುಗಳನ್ನು ಖರೀದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವೀಲುನಾಮೆಯ ಮೂಲ ಪ್ರತಿ, ವಿಥ್ ಡ್ರಾ ಮಾಡಿದ 1.50 ಲಕ್ಷ ರೂ, ನನ್ನ ಮನೆಯ ಕೀಲಿಕೈ, 45 ಕ್ವಿಂಟಾಲ್ ಅಡಿಕೆ ಮಾರಾಟ ಮಾಡಿ ಪಡೆದುಕೊಂಡ ಸಂಪೂರ್ಣ ಹಣವನ್ನು ನನಗೆ ವಾಪಾಸ್ಸು ನೀಡಬೇಕು, ನನ್ನ ಕೊಲೆಯಾದಲ್ಲಿ ಸಹೋದರರೇ ಹೊಣೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X