Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡ್ರಗ್ಸ್ ಪೆಡ್ಲರ್‌ಗಳ ವಿರುದ್ಧ...

ಡ್ರಗ್ಸ್ ಪೆಡ್ಲರ್‌ಗಳ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿ ಪತ್ರಿಕೆಯ ವಿಶೇಷ ವರದಿಗಳನ್ನು ಉಲ್ಲೇಖಿಸಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ1 Aug 2023 11:07 PM IST
share
ಡ್ರಗ್ಸ್ ಪೆಡ್ಲರ್‌ಗಳ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಮಂಗಳೂರು: ಮಾದಕ ವಸ್ತು ಹಾವಳಿ (ಡ್ರಗ್ಸ್)ಮಂಗಳೂರಿನಲ್ಲಿ ವಿಪರೀತ ಹೆಚ್ಚಾಗುತ್ತಿದ್ದು, ಈ ಬಗ್ಗೆ ಡ್ರಗ್ಸ್ ಪೆಡ್ಲರ್‌ಗಳನ್ನು ಗೂಂಡಾಕಾಯ್ದೆ ಅಡಿಯಲ್ಲಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಅಂಗವಾಗಿ ‘ವಾರ್ತಾಭಾರತಿ’ ಪತ್ರಿಕೆಯ ವರದಿಯನ್ನು ಉಲ್ಲೇಖಿಸಿ ಪೊಲೀಸ್ ಅಧಿಕಾರಿ ಗಳು ಕೈಗೊಂಡ ಕ್ರಮಗಳ ಬಗ್ಗೆ ಪ್ರಶ್ನಿಸಿದರು.

ಈ ಸಂದರ್ಭ ನಗರದಲ್ಲಿ ನಡೆಯುತ್ತಿರುವ ಅಭಿಯಾನದ ಬಗ್ಗೆ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಮಾಹಿತಿ ನೀಡಿದರು.

ಈ ಸಂದರ್ಭ ಮುಖ್ಯಮಂತ್ರಿಯವರು ಮಾತನಾಡಿ, ಡ್ರಗ್ಸ್ ಸಮಾಜದ ಯುವಕರನ್ನು ಹಾದಿ ತಪ್ಪಿಸುತ್ತಿದೆ. ಇದಕ್ಕೆ ಕಟ್ಟುನಿಟ್ಟಿನ ಕ್ರಮವನ್ನು ಇಲಾಖೆ ವಹಿಸಬೇಕು ಎಂದರು.

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಕ್ರಮ

ಉಡುಪಿ, ದ.ಕ. ಜಿಲ್ಲೆಯಲ್ಲಿ ಕಡಲ್ಕೊರೆತ ಸಮಸ್ಯೆ ತೀವ್ರವಾಗಿದ್ದು, ಶಾಶ್ವತ ಪರಿಹಾರ ಈವರೆಗೂ ಯಾವ ಸರಕಾರದಿಂದಲೂ ನಡೆಸಲು ಸಾಧ್ಯ ವಾಗಿಲ್ಲ. ನಾನು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕೆಲವು ಕಡೆ ಮರ ಗಿಡ ನೆಟ್ಟು ಕಡಲ್ಕೊರೆತ ಸಮಸ್ಯೆ ನೀಗಿಸುವ ಬಗ್ಗೆ ಪ್ರಯೋಗ ಮಾಡಲಾಗಿದ್ದು, ಆ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಫಟ್ಟ ಇಲಾಖೆಗಳ ಅಧಿಕಾರಿಗಳನ್ನು ಸೇರಿಸಿ ಸಮಗ್ರ ಚರ್ಚೆ ನಡೆಸಿ ಶಾಶ್ವಕ ಪರಿಹಾರಕ್ಕೆ ಕ್ರಮ ವಹಿಸುವುದಾಗಿ ಅವರು ಭರವಸೆ ನೀಡಿದರು.

ರೈತರು 2ನೆ ಬಾರಿ ಬೀಜ, ರಸಗೊಬ್ಬರ ಕೇಳಿದರೂ ಇಲ್ಲವೆನ್ನಬಾರದು

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗಬಾರದು. ಒಮ್ಮೆ ಬೀಜ, ರಸಗೊಬ್ಬರ ಕೊಟ್ಟರೆ ಮುಗಿಯಿತು ಎಂದು ಅಧಿಕಾರಿಗಳು ವರ್ತಿಸಬಾರದು. ಬೆಳೆಹಾನಿಯಾಗಿ ಮತ್ತೆ ಬೀಜ, ರಸಗೊಬ್ಬರಕ್ಕೆ ಬೇಡಿಕೆ ರೈತರಿಂದ ಬಂದರೆ ಬೇಡಿಕೆ ಪೂರೈಸಬೇಕು ಎಂದು ಸೂಚಿಸಿದರು.

ಅಡಿಕೆಗೆ ಎಲೆಚುಕ್ಕೆ, ಹಳದಿ ರೋಗ: ವಿಜ್ಞಾನಿ- ತಜ್ಞರ ಸಭೆ

ಅಡಿಕೆಗೆ ಎಲೆಚುಕ್ಕೆ ರೋಗ, ಹಳದಿ ರೋಗ, ಕೀಟ ಬಾದೆ ಯಾವ ಪ್ರಮಾಣದಲ್ಲಿ ಬಂದಿದೆ ಎನ್ನುವ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೃಷಿ ವಿಜ್ಞಾನಿಗಳು ಹಾಗೂ ತಜ್ಞರನ್ನು ಕರೆದು ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಮೀನುಗಾರರಿಗೆ ಡೀಸೆಲ್ ಮಿತಿ ಹೆಚ್ಚಿಸಿದ್ದರಿಂದ ಉಪಯೋಗ

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್‌ನಿಂದ 2 ಲಕ್ಷ ಕಿಲೋ ಲೀಟರ್‌ ಗಳಿಗೆ ಹೆಚ್ಚಿಸಲಾಗಿದೆ. ಈ ಮೂಲಕ ಮೀನುಗಾರರಿಗೆ ಸರಕಾರದಿಂದ 250 ಕೋಟಿ ರೂ.ಗಳಷ್ಟು ನೆರವು ನೀಡಿದ್ದೇವೆ. ಇದು ಮೀನುಗಾರ ಸಮುದಾಯಕ್ಕೆ ತಲುಪುತ್ತದೆಯೇ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಮೀನುಗಾರಿಕಾ ಉಪ ನಿರ್ದೇಶಕ ಹರೀಶ್ ಕುಮಾರ್, ಇದರಿಂದ ಸಮುದಾಯಕ್ಕೆ ದೊಡ್ಡ ಅನುಕೂಲವಾಗಿದೆ ಎಂದು ಉತ್ತರಿಸಿದರು.

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ ಗಳನ್ನು ಪೆಟ್ರೋಲ್ ಇಂಜಿನ್‌ ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡುತ್ತಿದ್ದೇವೆ. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ನಾವು ಆಯವ್ಯವಯದಲ್ಲಿ ಘೋಷಿಸಿದ್ದೇವೆ. ಈ ಕಾರ್ಯಕ್ರಮ ಸರಿಯಾಗಿ ಜಾರಿಯಾಗುವಂತೆ ಕ್ರಮ ವಹಿಸಲು ಅಧಿಕಾರಿಗಳು ಸೂಚಿಸಿದರು.

ಶಕ್ತಿ ಯೋಜನೆಯಡಿ ಹೆಚ್ಚುವರಿ ಬಸ್ ವ್ಯವಸ್ಥೆ

ಶಕ್ತಿ ಯೋಜನೆಯಿಂದ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು, ಆಟೋ ರಿಕ್ಷಾ, ಹಾಗೂ ಇತರ ಸಾರ್ವಜನಿಕ ಸಾರಿಗೆ ವಾಹನಗಳಿಗೆ ತೊಂದರೆಯಾಗಿದೆಯೇ ಎಂದು ಪ್ರಶ್ನಿಸಿದಾಗ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ರಾಜೇಶ್ ನಾಯ್ಕ್ ಅವರು ಖಾಸಗಿಯವರಿಗೆ ತೊಂದರೆಯಾಗಿದೆ. ಜೊತೆಗೆ ಶಾಲಾ ಮಕ್ಕಳಿಗೆ ಕೆಲವಡೆ ಬಸ್ಸುಗಳನ್ನು ನಿಲ್ಲಿಸಲಾಗುತ್ತಿಲ್ಲ ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಜನರಿಂದ ಮತ್ತು ವಿದ್ಯಾರ್ಥಿ ಸಮೂಹದಿಂದ ಉತ್ತಮ ಸ್ಪಂದನೆ ಇರುವುದರಿಂದ ಸದ್ಯದಲ್ಲೇ 4000 ಹೆಚ್ಚುವರಿ ಬಸ್‌ಗಳನ್ನು ಖರೀದಿಸಲಾಗುವುದು. ಇದರಿಂದ ಜಿಲ್ಲೆಗೂ ಪ್ರಯೋಜನವಾಗಲಿದೆ ಎಂದರು.

ಸರಕಾರದ ಐದೂ ಗ್ಯಾರಂಟಿ ಯೋಜನೆಗಳ ಲಾಭ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿಗೂ ದೊರಕುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಶಿಕ್ಷಣ, ಆರೋಗ್ಯ ಸೂಚ್ಯಂಕದಲ್ಲಿ ಕುಸಿತ ಒಳ್ಳೆಯ ಬೆಳವಣಿಗೆಯಲ್ಲ

ಸುಶಿಕ್ಷಿತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಆರೋಗ್ಯ ಹಾಗೂ ಶಿಕ್ಷಣ ಸೂಚ್ಯಂಕದಲ್ಲಿ ಕುಸಿತ ಕಂಡುಬಂದಿದ್ದು, ಇದು ಒಳ್ಳೆ ಬೆಳವಣಿಗೆ ಅಲ್ಲ. ಶಿಕ್ಷಣದಲ್ಲಿ 2015ರಲ್ಲಿ 3ನೆ ಸ್ಥಾನದಲ್ಲಿದ್ದ ಜಿಲ್ಲೆ 2022ರಲ್ಲಿ 35ನೆ ಸ್ಥಾನ, 2023ರಲ್ಲಿ 17ನೆ ಸ್ಥಾನಕ್ಕೆ ಕುಸಿದಿರುವ ಬಗ್ಗೆ ಡಿಡಿಪಿಐ ಅವರಿಂದ ವಿವರಣೆ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಡುಪಿ, ಮಂಗಳೂರು ಯಾವಾಗಲೂ ಪ್ರಥಮ, ದ್ವಿತೀಯ ಸ್ಥಾನದಲ್ಲಿ ಇರುತ್ತಿತ್ತು. ಈಗೇಕೆ ಹೀಗೆ ಎಂದು ಪ್ರಶ್ನಿಸಿದರು.

ಆರೋಗ್ಯ ಸೂಚ್ಯಂಕದಲ್ಲೂ ಕುಸಿದಿದೆ. ದಕ ಜಿಲ್ಲೆ 2015 ರಲ್ಲಿ 3 ಸ್ಥಾನದಲ್ಲಿತ್ತು. ಈಗ 23ನೇ ಸ್ಥಾನಕ್ಕೆ ಕುಸಿದಿರುವ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಗಳನ್ನು ಪ್ರಶ್ನಿಸಿದರು. ಅತ್ಯಂತ ಹಿಂದುಳಿದ ಜಿಲ್ಲೆ ಚಿತ್ರದುರ್ಗ ಶೈಕ್ಷಣಿಕವಾಗಿ ಪ್ರಗತಿ ಸಾಧಿಸುತ್ತಿರುವ ಹೊತ್ತಲ್ಲಿ ಅತ್ಯಂತ ಮುಂದಿದ್ದ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿಯಲು ಕಾರಣ ಏನು ಎಂಬ ಬಗ್ಗೆ ಗಮನ ಹರಿಸಬೇಕು ಎಂದು ಡಿಡಿಪಿಐ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೇಯರ್ ಜಯಾನಂದ ಅಂಚನ್, ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಗಳ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಶಾಸಕರಾದ ಹರೀಶ್ ಪೂಂಜ, ಭಾಗೀರಥಿ ಮುರಳ್ಯ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಅಶೋಕ್ ರೈ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಪೊಲೀಸ್ ಆಯುಕ್ತ ಕುಲದೀಪ್ ಆರ್.ಜೈನ್ ಉಪಸ್ಥಿತರಿದ್ದರು.

ಮಳೆಹಾನಿ: ಪೂರ್ತಿ ಮನೆ ಹಾನಿಯಾದರೆ 5 ಲಕ್ಷ ರೂ. ಪರಿಹಾರ

ಮಳೆಯಿಂದಾಗಿ ಮನೆ ಪೂರ್ತಿಯಾಗಿ ಹಾನಿಯಾದರೆ ಐದು ಲಕ್ಷ ರೂ., ಬಹುತೇಕ ಮನೆ ಹಾನಿಗೆ 3 ಲಕ್ಷ ರೂ. ಹಾಗೂ ಭಾಗಶ: ಮಳೆ ಹಾನಿಯಾಗಿದ್ದರೆ 50000 ರೂ.ಗಳನ್ನು ಹಿಂದಿನ ತೀರ್ಮಾನದಂತೆ ನೀಡಬೇಕು ಎಂದು ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸಭೆಯಲ್ಲಿ ಸೂಚನೆ ನೀಡಿದರು.

ಜನಪ್ರತಿನಿಧಿಗಳಿಗೆ ಅಗೌರವ ಸಲ್ಲದು

ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ ಮತ್ತು ಶಿಕ್ಷಣದಲ್ಲಿ ಅತ್ಯಂತ ಹಿಂದುಳಿಯುತ್ತಿರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಿಎಂ ತರಾಟೆಗೆ ತೆಗೆದುಕೊ ಳ್ಳುತ್ತಿದ್ದಾಗ ಮಧ್ಯೆ ಪ್ರವೇಶಿಸಿದ ಶಾಸಕ ಉಮಾನಾಥ ಕೋಟ್ಯಾನ್ ಅವರು ಗ್ರಾಮ ಪಂಚಾಯ್ತಿ ಕಟ್ಟಡವೊಂದರ ಉದ್ಘಾಟನೆ ತಡೆ ಹಿಡಿದಿದ್ದಕ್ಕೆ ಕಾರಣ ಏನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಎಂ ಯಾವುದೇ ಕಾರಣಕ್ಕೂ ಶಿಷ್ಟಾಚಾರ ಉಲ್ಲಂಘಿಸಬಾರದು. ಶಾಸಕರು ಯಾವುದೇ ಪಕ್ಷದವರಿರಲಿ ಅವರನ್ನು ಅಧಿಕಾರಿಗಳು ಜನಪ್ರತಿನಿಧಿಗಳು ಎಂದು ಪರಿಗಣಿಸಿ ಅವರಿಗೆ ಗೌರವ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಸರಕಾರಿ ಆರೋಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ಪ್ರಶ್ನಿಸುತ್ತಿದ್ದ ವೇಳೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು, ಜಿಲ್ಲಾ ಉಸ್ತುವಾರಿ ಸಚಿವರೂ, ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಖಾಲಿ ಇರುವ ಎಲ್ಲಾ ವೈದ್ಯ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಕಳೆದ ಐದು ವರ್ಷದಿಂದ ನಿಮ್ಮ ಸರಕಾರ ಮಾಡದ್ದನ್ನು ನಮಗೆ ಒಂದೇ ದಿನದಲ್ಲಿ ಮಾಡಲು ಹೇಳುತ್ತಿದ್ದೀರಿ. ನಾವು ಅದನ್ನು ಮಾಡಿ ತೋರಿಸಲಿದ್ದೇವೆ ಎಂದರು.

ಸಭೆಯಲ್ಲಿ ವಾರ್ತಾಭಾರತಿಯ ವಿಶೇಷ ವರದಿಗಳ ಉಲ್ಲೇಖಿಸಿದ ಸಿಎಂ

ಸಭೆಯಲ್ಲಿ ವಾರ್ತಾಭಾರತಿಯಲ್ಲಿ ಪ್ರಕಟವಾದ ಎಲೆಚುಕ್ಕಿ ರೋಗ ಸಮಸ್ಯೆ, ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನ ಹಾಗೂ ಸೈಬರ್ ಅಪರಾಧಿಗಳ ಲೋನ್ ಆ್ಯಪ್ ವಂಚನೆ ಕುರಿತಾದ ವಿಶೇಷ ವರದಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಲೇಖಿಸಿದರು.

ಸೈಬರ್ ವಂಚನೆಯಿಂದ ಗೇಮಿಂಗ್, ಬೆಟ್ಟಿಂಗ್‌ನಿಂದಾಗಿ ಜನಸಾಮಾನ್ಯರು ತೊಂದರೆಗಳೊಗಾಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿಸಚಿವ ದಿನೇಶ್ ಗುಂಡೂರಾವ್ ಪ್ರಸ್ತಾಪಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಗೇಮಿಂಗ್, ಬೆಟ್ಟಿಂಗ್‌ಗೆ ಕಾರಣವಾಗುವ ಆ್ಯಪ್‌ಗಳ ಬಗ್ಗೆ ಕ್ರಮಕ್ಕೆ ಚಿಂತನೆ ಮಾಡಲಾಗಿದೆ ಎಂದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X