Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಹಕಾರಿ ಆಂದೋಲನ ಜನರ ಆಂದೋಲನವಾಗಬೇಕು:...

ಸಹಕಾರಿ ಆಂದೋಲನ ಜನರ ಆಂದೋಲನವಾಗಬೇಕು: ಕೆ.ಎನ್.ರಾಜಣ್ಣ

70ನೆ ಸಹಕಾರಿ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ18 Nov 2023 4:00 PM IST
share
ಸಹಕಾರಿ ಆಂದೋಲನ ಜನರ ಆಂದೋಲನವಾಗಬೇಕು: ಕೆ.ಎನ್.ರಾಜಣ್ಣ

ಮಂಗಳೂರು,ನ.18; ಸಹಕಾರಿ ಆಂದೋಲನದಲ್ಲಿ ಯುವಕರು, ಮಹಿಳೆಯರು ಎಲ್ಲರೂ ಸೇರಿ ಜನರ ಆಂದೋಲನವಾಗಿ ಬೆಳೆಯಬೇಕಾಗಿದೆ ಎಂದು ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ ತಿಳಿಸಿದ್ದಾರೆ.

ಶನಿವಾರ ನಗರದ ಉರ್ವ ಮೈದಾನ ದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ.ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಸಹಯೋಗ ಹಮ್ಮಿಕೊಂಡಿದ್ದ 70ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಹಾಕಾರಿ ಆಂದೋಲನ ಕೇವಲ ಕೆಲವೇ ವ್ಯಕ್ತಿಗಳ ಕಪಿಮುಷ್ಟಿಯಲ್ಲಿ ಇರಬಾರದು ಎಲ್ಲಾ ವರ್ಗದ ಜನರು ಪಕ್ಷಾತೀತವಾಗಿ, ಜಾತಿ, ಧರ್ಮ ಮೀರಿದ ಜನರ ಆಂದೋಲನವಾಗಬೇಕು ಎನ್ನುವುದು ನಮ್ಮ ಗುರಿಯಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಯಾಗಬೇಕಾದರೆ ಹಳ್ಳಿ ಗಾಡಿನ ಜನರ ಆರ್ಥಿಕ ಶಕ್ತಿ ಬಲಗೊಳ್ಳಬೇಕಾಗಿದೆ. ಆಗ ಜಿಡಿಪಿ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಬೇಸಾಯ ಮಾಡುವ ಕುಟುಂಬಗಳಿಗೆ, ಸ್ವ ಸಹಾಯ ಸಂಘಗಳಿಗೆ ಸಹಕಾರ ಕ್ಷೇತ್ರದ ಮೂಲಕ ಸಾಲ ಸಹಾಯ ದೊರೆಯ ಬೇಕಾಗಿದೆ.ರೈತರ ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿಕೊಡಲು ಸಹಕಾರ ಕ್ಷೇತ್ರ ಬಲ ನೀಡಬೇಕಾಗಿದೆ ಎಂದು ರಾಜಣ್ಣ ವಿವರಿಸಿದರು.

ಗ್ರಾಮೀಣ ಜನರ ಸ್ವಾವಲಂಬಿ,ಸ್ವಾಭಿಮಾನಿ ಬದುಕಿಗೆ ಸಹಕಾರಿ ಕ್ಷೇತ್ರ ಶಕ್ತಿ ನೀಡಿದೆ. ಸಹಕಾರಿ ಕ್ಷೇತ್ರದ ಧುರೀಣರ ದೂರದೃಷ್ಟಿಯ ಪರಿಣಾಮವಾಗಿ ಮತ್ತು ಸಹಕಾರಿ ಸಂಘಗಳ ಜನ ಸ್ನೇಹಿಯಾದ ಸೇವೆ ಜನ ಸಾಮಾನ್ಯ ರ ಬದುಕಿಗೆ ನೆರವಾಗಿದೆ ಎಂದು ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಶುಭ ಹಾರೈಸಿದರು.

ಉತ್ತಮ ಸಹಕಾರ ಸಂಘಗಳಿಗೆ ಪುರಸ್ಕಾರವನ್ನು ಪ್ರದಾನ ಮಾಡಿ ಮಾತನಾಡಿದ ಸಂಸದ ನಳಿನ್‌ಕುಮಾರ್ ಕಟೀಲ್ ಅವರು, ನವೋದಯ ಸ್ವ ಸಹಾಯ ಸಂಘ ಜಿಲ್ಲೆಯ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿ ಜನ ಸಾಮಾನ್ಯರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆಗೆ ಕಾರಣವಾಗಿದೆ. ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿರು ವ ಕ್ಷೇತ್ರ ಸಹಕಾರಿ ರಂಗ ಎಂದು ಹೇಳಿದರು.

ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಮಾನ್ಯ ಅಧ್ಯಕ್ಷರಾದ ಜಿ. ಟಿ. ದೇವೇಗೌಡ ನೆರವೇರಿಸಿ ಶುಭ ಹಾರೈಸಿದರು.

ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನಮಳಿಗೆಗಳನ್ನುಆಯೋಜಿಸಲಾಗಿತ್ತು.

ಕೆಎಂಎಫ್ ವತಿಯಿಂದ ನಂದಿನಿಯ ನೂತನ ಉತ್ಪನ್ನಗಳನ್ನು ಬಿಡುಗಡೆ ಗೊಳಿಸಲಾಯಿತು.

ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ.ಎನ್.ರಾಜೇಂದ್ರ ಕುಮಾರ್‌ ರವರು ಮಾತನಾಡುತ್ತಾ, "ದೇಶದ ರೈತರ ಕಟ್ಟ ಕಡೆಯ ರೈತರ ಅಭಿವೃದ್ಧಿ ಗೆ ಕೇಂದ್ರ ರಾಜ್ಯ ಸರಕಾರಗಳು ಸಹಕಾರಿ ರಂಗಕ್ಕೆ ನೆರವು ನೀಡುತ್ತಿರುವುದಕ್ಕೆ ತಾನು ಕೃತಜ್ಞತೆ ಸಲ್ಲಿಸುತ್ತೇನೆ.ನವೋದಯ ಸ್ವ ಸಹಾಯ ಸಂಘಗಳ ಮೂಲಕ ಸ್ವಾವಲಂಬಿ ಗಳಾಗಿ ತಮ್ಮ ಬದುಕು ಕಟ್ಟಿ ಕೊಳ್ಳಲು ಸಹಾಯ ಆಗಿದೆ ಎಂದು ಸಹಕಾರಿ ರಂಗ ವನ್ನು ನೆನಪಿಸಿಕೊಳ್ಳುತ್ತಿದ್ದಾರೆ" ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ವೇದವ್ಯಾಸ ಕಾಮತ್, ಯಶ್ಫಾಲ್ ಸುವರ್ಣ,ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಯಮಿ ರೋಹನ್ ಮೊಂತೆರೊ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾದ ಕೆ. ಪಿ. ಸುಚರಿತ ಶೆಟ್ಟಿ ಅವರು ಗೌರವ ಅತಿಥಿ ಗಳಾಗಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ , ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು,ಶಶಿಕುಮಾರ್ ರೈ ಬಾಲ್ಯೋಟ್ಟು , ಭಾಸ್ಕರ್ ಎಸ್. ಕೋಟ್ಯಾನ್ , ಬಿ.ನಿರಂಜನ್ , ಟಿ.ಜಿ. ರಾಜಾರಾಮ ಭಟ್ , ಎಂ.ವಾದಿರಾಜ ಶೆಟ್ಟಿ , ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ , ಎಸ್.ಬಿ. ಜಯರಾಮ್ ರೈ, ಮೋನಪ್ಪ ಶೆಟ್ಟಿ , ಹರಿಶ್ಚಂದ್ರ , ಕೆ.ಜೈರಾಜ್ ಬಿ ರೈ , ರಾಜೇಶ್ ರಾವ್ ,ಸದಾಶಿವ ಉಳ್ಳಾಲ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ , ಮಹಾಪ್ರಬಂಧಕ ರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿಯೂನಿಯನ್ ಅಧ್ಯಕ್ಷರುಗಳಾದ ಬೆಳ್ಳಿಪಾಡಿ ಪ್ರಸಾದ್‌ ಕೌಶಲ್‌ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಸ್ಕ್ಯಾಡ್ಸ್‌ ಅಧ್ಯಕ್ಷ ರವೀಂದ್ರ ಕಂಬಳ ಮತ್ತು ಸಹಕಾರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X