ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳೆಂದು ಬಿಂಬಿಸಿ ಹಳೆಯ ಫೋಟೋ ದುರ್ಬಳಕೆ
ಟಿವಿ ಚಾನೆಲ್ ವಿರುದ್ಧ ದೂರು

ಮಂಗಳೂರು: ನಾಲ್ಕು ವರ್ಷಗಳ ಹಿಂದಿನ ಪ್ರಕರಣವೊಂದರ ಫೋಟೋವನ್ನು ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳೆಂದು ಬಿಂಬಿಸಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವ ‘ಆರ್ ಟಿವಿ’ ಚಾನೆಲ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಪುದು ಗ್ರಾಮದ ಅಮ್ಮೆಮಾರ್ ನಿವಾಸಿ ತಸ್ಲೀಂ ಎಂಬವರು ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ.
2021ರಲ್ಲಿ ನಡೆದ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ತನ್ನನ್ನು ಒಳಗೊಂಡಂತೆ ಗೆಳೆಯರ ಗ್ರೂಪ್ ಫೋಟೋವನ್ನು ರವಿವಾರ ‘ಆರ್ ಟಿವಿ’ ಚಾನೆಲ್‌ನಲ್ಲಿ ಪ್ರಸಾರ ಮಾಡಿದ ಸುದ್ದಿಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳೆಂದು ಬಿಂಬಿಸಿ ಮಾನ ಹಾನಿ ಮಾಡಿದ್ದಾರೆ. ಆದ್ದರಿಂದ ಆರ್ ಟಿವಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಸ್ಲೀಂ ದೂರಿನಲ್ಲಿ ಒತ್ತಾಯಿಸಿದ್ದಾರೆ.
Next Story





