Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಡುಪು ಗುಂಪು ಹತ್ಯೆ ಪ್ರಕರಣದ...

ಕುಡುಪು ಗುಂಪು ಹತ್ಯೆ ಪ್ರಕರಣದ ತನಿಖೆಯಲ್ಲಿ ಸರಕಾರದ ನಿರಾಸಕ್ತಿ : ಸಿಪಿಐಎಂ ಆರೋಪ

ವಾರ್ತಾಭಾರತಿವಾರ್ತಾಭಾರತಿ13 May 2025 1:11 PM IST
share
ಕುಡುಪು ಗುಂಪು ಹತ್ಯೆ ಪ್ರಕರಣದ ತನಿಖೆಯಲ್ಲಿ ಸರಕಾರದ ನಿರಾಸಕ್ತಿ : ಸಿಪಿಐಎಂ ಆರೋಪ

ಮಂಗಳೂರು : ನಗರ ಹೊರವಲಯದ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಆಸಕ್ತಿ ಕಳೆದುಕೊಂಡಿರುವುದು ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದಾಗ ಸ್ಪಷ್ಟವಾಗುತ್ತಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯ ಆರೋಪಿಸಿದೆ.

ಪ್ರಕರಣದ ಪ್ರಧಾನ ಆರೋಪಿ ರವೀಂದ್ರ ನಾಯಕ್ ನನ್ನು ಇನ್ನೂ ಬಂಧಿಸದಿರುವುದು, ಉಳಿದ ಆರೋಪಿಗಳ ಪತ್ತೆ ಕಾರ್ಯ ಕೈ ಬಿಟ್ಟಿರುವುದು, ಪ್ರಕರಣ ಮುಚ್ಚಿ ಹಾಕುವಲ್ಲಿ ಪ್ರಧಾನ ಪಾತ್ರ ವಹಿಸಿದ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಮೇಲೆ ಯಾವುದೇ ಕ್ರಮಗಳನ್ನು ಕೈಗೊಳ್ಳದೆ ತನಿಖೆಯ ಜವಾಬ್ದಾರಿಯನ್ನು ಅದೇ ಕಳಂಕಿತ ಅಧಿಕಾರಿಗೆ ಹೊರಿಸಿರುವುದು ಸರಕಾರದ ನಿರಾಸಕ್ತಿಯನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದೆ.

ಕಡುಪು ಮಾಬ್ ಲಿಂಚಿಂಗ್ ಪ್ರಕರಣ ಬಹಿರಂಗಗೊಂಡು ಜನಾಕ್ರೋಶ ವ್ಯಕ್ತಗೊಂಡಾಗ ಜಿಲ್ಲಾ ಉಸ್ತುವಾರಿ ಸಚಿವರು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಮಾತುಗಳನ್ನು ಆಡಿದ್ದರು. ಆದರೆ, ಸುಹಾಸ್ ಶೆಟ್ಟಿ ಹತ್ಯೆಯ ತರುವಾಯ ರಾಜ್ಯ ಸರಕಾರ ಈ ಭರವಸೆಯನ್ನು ಮಾತ್ರ ಅಲ್ಲದೆ, ಅಶ್ರಫ್ ಮಾಬ್ ಲಿಂಚಿಂಗ್ ಪ್ರಕರಣದ ಕುರಿತು ಮಾತಾಡುವುದನ್ನೇ ಕೈ ಬಿಟ್ಟಿದೆ.‌ ಇದು ಅಶ್ರಫ್ ಗುಂಪು ಹತ್ಯೆ ಪ್ರಕರಣದ ತನಿಖೆ ಹಳಿ ತಪ್ಪುವ, ಹತ್ಯೆಯ ಭಾಗಿದಾರರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳುವ ಭೀತಿಗೆ ಕಾರಣವಾಗಿದೆ. ಮೃತ ಅಶ್ರಫ್ ನ ಸಂತ್ರಸ್ತ ಕುಟುಂಬವೂ ಈ ಆತಂಕಕ್ಕೆ ಒಳಗಾಗಿದೆ ಎಂದು ತಿಳಿಸಿದೆ.

ಪ್ರಕರಣ ಮುಚ್ಚಿ ಹಾಕುವ ಒಳ ಸಂಚಿನ ಭಾಗವಾಗಿಯೇ ಪ್ರಕರಣದಲ್ಲಿ ಪಾಲ್ಗೊಂಡ ಮಂಜುನಾಥ್ ಎಂಬಾತನಿಂದಲೇ ದೂರು ಬರೆಸಿಕೊಂಡು ಯುಡಿಆರ್ ದಾಖಲಿಸಲಾಗಿತ್ತು. ಪ್ರಕರಣ ಬಹಿರಂಗಗೊಂಡು ರಾಜ್ಯ ಮಟ್ಟದಲ್ಲಿ ಸುದ್ದಿಯಾದ ತರುವಾಯ ಕೊಲೆ ಮೊಕದ್ದಮೆ ದಾಖಲಿಸುವ ಅನಿವಾರ್ಯತೆ ಎದುರಾದಾಗಲು, ಸುಮಟೊ ದೂರು ದಾಖಲಿಸಿಕೊಳ್ಳುವ ಬದಲಿಗೆ ಮಾಬ್ ಲಿಂಚಿಂಗ್ ನಡೆಸಿದ ಗುಂಪಿನ ಆತ್ಮೀಯ ಒಡನಾಟ ಹೊಂದಿರುವ ವ್ಯಕ್ತಿಯನ್ನೆ ಪೊಲೀಸ್ ಇಲಾಖೆ ದೂರುದಾರನಾಗಿ ಆಯ್ಕೆ ಮಾಡಿಕೊಂಡಿತು. ಹಾಗೂ, ಠಾಣೆಗೆ ಕರೆಸಿ ಬರೆಸಿಕೊಂಡ ದೂರಿನಲ್ಲಿ "ಅಪರಿಚಿತ ಪಾಕಿಸ್ತಾನ ಎಂದು ಕೂಗುತ್ತಾ ಬರುತ್ತಿದ್ದ" ಎಂಬ ವಾಕ್ಯವನ್ನು ದುರುದ್ದೇಶದಿಂದಲೆ ಸೇರ್ಪಡೆಗೊಳಿಸಲಾಗಿತ್ತು. ಹೀಗಿರುವಾಗ ಮಂಗಳೂರು ಕಮಿಷನರೇಟ್ ಪೊಲೀಸರಿಂದ ಅಮಾಯಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ನ್ಯಾಯ ದೊರಕಲು ಹೇಗೆ ಸಾಧ್ಯ ? ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಪ್ರಶ್ನಿಸಿದೆ.

ರಾಜ್ಯದ ಕಾಂಗ್ರೆಸ್ ಸರಕಾರ ಪ್ರಕರಣದ ಕುರಿತು ತನ್ನ ನಿರಾಸಕ್ತಿ ತೊರೆಯಬೇಕು. ಕುಡುಪು ಗುಂಪು ಹತ್ಯೆ ಪ್ರಕರಣದ ತನಿಖೆಗಾಗಿ ತಕ್ಷಣವೆ, ಹಿರಿಯ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು, ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಕಳಂಕ ಹೊತ್ತಿರುವ ಪೊಲೀಸ್ ಕಮೀಷನರ್ ಅಗ್ರವಾಲ್ ರನ್ನು ತಕ್ಷಣ ಅಮಾನತುಗೊಳಿಸಬೇಕು, ಗುಂಪು ಹತ್ಯೆ ಪ್ರಕರಣದ ಪ್ರಧಾನ ಪಾತ್ರಧಾರಿ, ಪ್ರಭಾವಿ ಬಿಜೆಪಿ ಮುಖಂಡ ರವೀಂದ್ರ ನಾಯಕ್ ಹಾಗೂ ಉಳಿದ ಭಾಗೀದಾರರನ್ನು ತಕ್ಷಣ ಬಂಧಿಸಬೇಕು ಎಂದು ಸಿಪಿಐಎಂ ಆಗ್ರಹಿಸಿದೆ.

ಈ ಕುರಿತು ತಕ್ಷಣ ತೀರ್ಮಾನ ಕೈಗೊಳ್ಳದಿದ್ದಲ್ಲಿ ವಾರಾಂತ್ಯದಲ್ಲಿ ಜಿಲ್ಲಾ ಪ್ರವಾಸದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶ್ನೆಗಳನ್ನು ಎದುರಿಸಬೇಕಾಗುತ್ತದೆ ಎಂದು ಸಿಪಿಐಎಂ ಎಚ್ಚರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X