ದ.ಕ.ಜಿಲ್ಲಾ ಕಾಂಗ್ರೆಸ್‌ನಿಂದ ಗಣರಾಜ್ಯೋತ್ಸವ ಆಚರಣೆ

ಮಂಗಳೂರು, ಜ.26: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರಕಾರಗಳು ಮಾಡಬೇಕು. ಸರಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.
ರಾಜ್ಯ ಕಾಂಗ್ರೆಸ್ ಸರಕಾರ ಸಂವಿಧಾನದ ಆಶಯದಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮಸಮಾಜ ನಿರ್ಮಾಣಕ್ಕೆ ಪಣತೊಟ್ಟಿದೆ. ಸಂವಿಧಾನ ಮತ್ತು ಅದರ ಆಶಯಗಳನ್ನು ರಕ್ಷಿಸಲು ಕಾಂಗ್ರೆಸ್ ಸದಾ ಸಿದ್ಧವಾಗಿದೆ ಎಂದು ಹೇಳಿದರು.
ಮನಮೋಹನ ಸಿಂಗ್ ಅವರು ದೇಶ ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೊಳಿಸಿ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿದ್ದರು. ಈಗ ಈ ಉದ್ಯೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರಕಾರ ಕೈ ಹಾಕಿದೆ ಎಂದರು.
ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಜೆ.ಅಬ್ದುಲ್ ಸಲೀಂ, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್, ಅಪ್ಪಿ.ಎಸ್, ಉಷಾ ಅಂಚನ್, ದಿನೇಶ್ ಮುಳೂರು, ಮುಖಂಡರಾದ ಜಯಶೀಲ ಅಡ್ಯಂತಾಯ, ಡೆನ್ನಿಸ್ ಡಿಸಿಲ್ವ, ನೀರಜ್ ಚಂದ್ರಪಾಲ್, ಟಿ.ಕೆ.ಸುಧೀರ್, ನವೀನ್ ಡಿಸೋಜಾ, ಶುಭೋದಯ ಆಳ್ವ, ಭಾಸ್ಕರ್ ರಾವ್, ಶಬ್ಬೀರ್.ಎಸ್, ಅಶೋಕ್ ಡಿ.ಕೆ, ನಮಿತಾ ಡಿ ರಾವ್, ಮಂಜುಳ ನಾಯಕ್, ರಮಾನಂದ ಪೂಜಾರಿ, ಆಲ್ವಿನ್ ಪ್ರಕಾಶ್, ಮೋಹನ್ ದಾಸ್ ಕೊಟ್ಟಾರಿ, ಕೃಷ್ಣ ಶೆಟ್ಟಿ, ಪ್ರೇಮ್, ದುರ್ಗಾ ಪ್ರಸಾದ್, ರವಿರಾಜ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿ ಸೋಜ ಧ್ವಜ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದರು.







