ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವೃದ್ಧ ವ್ಯಕ್ತಿಯ ಮೃತದೇಹ ಪತ್ತೆ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70ವ) ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ. ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story




