ಧರ್ಮಸ್ಥಳ ಪ್ರಕರಣ | ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ್ದ ವರದಿ ಕುರಿತ ಆದೇಶವನ್ನು ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215ರ ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ ಡಿ.26 ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ.29ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ.
ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು 'ಸುಳ್ಳು ಸಾಕ್ಷಿ' ವರದಿಯನ್ನು (u/s)215ರ ಅಡಿಯಲ್ಲಿ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ., ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ವರದಿ ಸಲ್ಲಿಸಿದ್ದರು.
ಈ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಎಚ್.ಟಿ ಅವರು ವಿಚಾರಣೆ ನಡೆಸಿ ತೀರ್ಪನ್ನು ಡಿ.26ಕ್ಕೆ ನಿಗದಿಪಡಿಸಿದ್ದರು. ಇಂದು ನ್ಯಾಯಾಲಯ ತೀರ್ಪನ್ನು ಮತ್ತೆ ಮುಂದಿನ ಡಿ.29 ಕ್ಕೆ ಮುಂದೂಡಿದೆ.
ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
Next Story





