'ಧರ್ಮಸ್ಥಳ ದೂರುದಾರ' ನ್ಯಾಯಾಲಯದಿಂದ ಬೆಳ್ತಂಗಡಿ ಠಾಣೆಗೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಹೇಳಿಕೆ ನಿಡಿದ್ದು, ನ್ಯಾಯಾಧೀಶರು ಸದ್ರಿ ವ್ಯಕ್ತಿ ನೀಡಿದ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಸುಮಾರು 1 ಗಂಟೆ 20 ನಿಮಿಷ ಆತ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಹೇಳಿಕೆ ನೀಡಲು ಬಂದ ವ್ಯಕ್ತಿಯನ್ನು ನ್ಯಾಯಾಲಯದಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು ಠಾಣೆಯಲ್ಲಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ಎಫ್‌ಎಸ್‌ಎಲ್ ಅಧಿಕಾರಿಗಳ ತಂಡ ಆಗಮಿಸಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.
Next Story





