Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ ದೂರು | ಗ್ರಾಮ ಪಂಚಾಯತ್...

ಧರ್ಮಸ್ಥಳ ದೂರು | ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಬಂಧನಕ್ಕೆ ಆಗ್ರಹಿಸಿದ ಸುಜಾತಾ ಭಟ್ ಪರ ವಕೀಲರು

ವಾರ್ತಾಭಾರತಿವಾರ್ತಾಭಾರತಿ28 July 2025 10:36 PM IST
share
ಧರ್ಮಸ್ಥಳ ದೂರು | ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಬಂಧನಕ್ಕೆ ಆಗ್ರಹಿಸಿದ ಸುಜಾತಾ ಭಟ್ ಪರ ವಕೀಲರು

ಮಂಗಳೂರು, ಜು.28: ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಲಾಗಿರುವ ಪ್ರಕರಣದಲ್ಲಿ ಸೋಮವಾರ ಮಹತ್ವದ ಬೆಳವಣಿಗೆ ನದೆದಿದೆ. ಇದು ಎಲ್ಲ ಶವಗಳನ್ನು ಸೂಕ್ತ ದಾಖಲಾತಿಯೊಂದಿಗೆ ಅಧಿಕೃತ ಮಾರ್ಗಗಳ ಮೂಲಕ ಹೂಳಲಾಗಿತ್ತು ಎಂಬ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರ ಪೊಳ್ಳು ಹೇಳಿಕೆಗಳನ್ನು ಬಹಿರಂಗಗೊಳಿಸಿದೆ, ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್‌ ಎನ್. ಅವರು ಪ್ರತಿಪಾದಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಪ್ರಕರಣದ ದೂರುದಾರರು ಸೋಮವಾರ ವಿಶೇಷ ತನಿಖಾ ತಂಡ (SIT)ವನ್ನು ನೇತ್ರಾವತಿ ನದಿ ಸಮೀಪದ ಪ್ರದೇಶದಲ್ಲಿ ಶವಗಳನ್ನು ಹೂಳಲಾಗಿದ್ದ ಹಲವಾರು ಸ್ಥಳಗಳಿಗೆ ಕರೆದೊಯ್ದಿದ್ದರು. ಈ ಪ್ರದೇಶವು ಎಷ್ಟೊಂದು ಅಪಾಯಕಾರಿಯಾಗಿದೆ ಎಂದರೆ, ದೇಶದಲ್ಲಿಯ ಯಾವುದೇ ಪಂಚಾಯತಿಯು ಶವಗಳನ್ನು ಅಧಿಕೃತವಾಗಿ ಹೂಳಲು ಇಂತಹ ಸ್ಥಳಗಳನ್ನು ಆಯ್ಕೆ ಮಾಡುವುದಿಲ್ಲ. ಮಂಗಳವಾರದಿಂದ ಶವಗಳನ್ನು ಹೊರತೆಗೆಯಲು SIT ಗುರುತಿಸಿರುವ ಈ ಸ್ಥಳಗಳು 1980ರ ದಶಕದಿಂದಲೂ ವ್ಯವಸ್ಥಿತ, ದಾಖಲಿತ ಹೂಳುವಿಕೆಯ ಕುರಿತು ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹೇಳಿಕೆಗೆ ಸಂಪೂರ್ಣವಾಗಿ ವಿರುದ್ಧವಾಗಿವೆ ಎಂದು ವಕೀಲ ಮಂಜುನಾಥ್‌ ಬೆಟ್ಟು ಮಾಡಿದ್ದಾರೆ.

ಸೋಮವಾರದಂದು ಗುರುತಿಸಲಾಗಿರುವ ಸ್ಥಳಗಳು ಅಪಾಯಕಾರಿ ಮತ್ತು ಪ್ರವೇಶಿಸಲು ಕಷ್ಟಕರವಾದ ಪ್ರದೇಶದಲ್ಲಿದ್ದು, ಯಾವುದೇ ವಿವೇಕಯುತ ಪಂಚಾಯತ್ ಆಡಳಿತವು ಬಳಿಕ ಸಂಬಂಧಿಕರಿಗಾಗಿ ಹೊರತೆಗೆಯುವುದು ಅಗತ್ಯವಾಗಬಹುದಾದ ಶವಗಳನ್ನು ಇಲ್ಲಿ ಹೂಳುವುದಿಲ್ಲ. ಶವಗಳನ್ನು ಹೂಳಲಾದ ಸ್ಥಳಗಳು ಅಧಿಕೃತ ಪಂಚಾಯತ್ ಕಾರ್ಯವಿಧಾನಕ್ಕೆ ಅನುಗುಣವಾಗಿ ಯಾವುದೇ ಗೊತ್ತುಪಡಿಸಿದ ಬಯಲು ಮತ್ತು ಸುಲಭವಾಗಿ ತಲುಪಬಹುದಾದ ಪ್ರದೇಶಗಳ ಬದಲು ಅರಣ್ಯದಂತಹ ಪ್ರದೇಶಗಳಲ್ಲಿ ಅಲ್ಲಲ್ಲಿ ಹರಡಿಕೊಂಡಿವೆ. ಪಂಚಾಯತ್ ದಾಖಲೆಗಳನ್ನು ನಿರ್ವಹಿಸಿದೆ ಮತ್ತು ಬಳಿಕ ಸಂಬಂಧಿಕರು ಬಂದ ಬಳಿಕ ಶವಗಳನ್ನು ಹೊರತೆಗೆದಿದ್ದೂ ಇದೆ ಎಂದು ರಾವ್ ಹೇಳಿಕೊಂಡಿದ್ದರು. ಪಂಚಾಯತ್ ಇಂತಹ ಅಪಾಯಕಾರಿ ಪ್ರದೇಶಗಳಿಗೆ ದುಃಖತಪ್ತ ಕುಟುಂಬಗಳನ್ನು ಸುರಕ್ಷಿತವಾಗಿ ಕರೆದೊಯ್ಯಲು ಹೇಗೆ ಸಾಧ್ಯ ಎಂದು ವಕೀಲ ಮಂಜುನಾಥ್‌ ಪ್ರಶ್ನಿಸಿದ್ದಾರೆ.

ದೂರುದಾರರು ಹಲವಾರು ಗುಪ್ತಸ್ಥಳಗಳನ್ನು SIT ಗೆ ತೋರಿಸಲು ಗಂಟೆಗಟ್ಟಲೆ ಸಮಯವನ್ನು ತೆಗೆದುಕೊಂಡಿದ್ದರು ಮತ್ತು ಇವುಗಳಲ್ಲಿ ಒಂದೂ ಸ್ಥಳವು ಅಧಿಕೃತ ಕಾರ್ಯವಿಧಾನವು ಕಡ್ಡಾಯಗೊಳಿಸಿರುವಂತೆ ಗೊತ್ತುಪಡಿಸಿದ ಪ್ರದೇಶದಲ್ಲಿ ಇರಲಿಲ್ಲ. ದುರ್ಗಮ ಪ್ರದೇಶಗಳಲ್ಲಿ ಶವಗಳನ್ನು ಹೂಳಲಾದ ಸ್ಥಳಗಳು ತಾರ್ಕಿಕತೆಯನ್ನು ಮೀರಿದ್ದು, ಪಂಚಾಯತ್ ಹೇಳಿಕೆಯ ಪೊಳ್ಳುತನವನ್ನು ಬಯಲಿಗೆಳೆದಿದೆ. ಇದು ಈಗ ಅಪರಾಧಗಳನ್ನು ಮುಚ್ಚಿ ಹಾಕುವ ಕಾರ್ಯಾಚರಣೆಯಂತೆ ಕಂಡು ಬರುತ್ತಿದ್ದು, ಇದರಲ್ಲಿ ರಾವ್ ಪಾತ್ರದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದಿರುವ ವಕೀಲ ಮಂಜುನಾಥ್‌, ಈ ಸ್ಥಳಗಳಲ್ಲಿ ಮಾನವ ಅವಶೇಷಗಳು ಪತ್ತೆಯಾದ ತಕ್ಷಣ ರಾವ್ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇದರಲ್ಲಿ ಶಾಮೀಲಾಗಿರಬಹುದಾದ ಪಂಚಾಯತ್‌ ನ ಎಲ್ಲ ಅಧಿಕಾರಿಗಳನ್ನು ತನಿಖೆಗೊಳಪಡಿಸುವಂತೆ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X