ಸುಳ್ಯ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತ, ಅಸಮಾಧಾನ ಮುಗಿದ ಅಧ್ಯಾಯ - ಮಮತಾ ಗಟ್ಟಿ

ಸುಳ್ಯ: ಕಾಂಗ್ರೆಸ್ ಪಕ್ಷದಲ್ಲಿದ್ದ ಇದ್ದ ಭಿನ್ನಮತ, ಅಸಮಾಧಾನ ಮುಗಿದ ಅಧ್ಯಾಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ತದ ಉಸ್ತುವಾರಿ ಮಮತಾ ಗಟ್ಟಿ ಹೇಳಿದ್ದಾರೆ.
ಸುಳ್ಯ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಕಾಂಗ್ರೆಸ್ ಪಕ್ಷದಲ್ಲಿದ್ದ ಭಿನ್ನಮತ, ಅಸಮಾಧಾನ ಸರಿಪಡಿಸಲಾಗಿದೆ.ಚುನಾವಣೆಯ ಸಂದರ್ಭದಲ್ಲಿ ಸಣ್ಣಪುಟ್ಟ ಭಿನ್ನಾಪ್ರಾಯಗಳಿತ್ತು. ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಸುಳ್ಯದಲ್ಲಿ ಸಭೆ ನಡೆಸಿದ್ದು ಸಭೆಯೂ ಯಶಸ್ವಿಯಾಗಿದ್ದು, ಗೊಂದಲಗಳು ಶಮನಗೊಂಡಿದೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಮುಂದಿನ ಲೋಕಸಭೆ, ಜಿ.ಪಂ., ತಾ.ಪಂ. ಚುನಾವಣೆ ಎದುರಿಸಲಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗಿದೆ.ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು ಮತ್ತು ಕಾರ್ಯಕರ್ತರ ಬೇಡಿಕೆಯನ್ನು ಈಡೇರಿಸಲಾಗುವುದು. ಸಭೆ ಯಶಸ್ವಿಯಾಗಿ ಮುಗಿದಿದ್ದು, ಎಲ್ಲರೂ ಒಟ್ಟಾಗಿ ಪಕ್ಷ ಸಂಘಟಿಸುವ ಬಗ್ಗೆ ಸೂಚನೆ ನೀಡಲಾ ಗಿದೆ. ಕಾಂಗ್ರೆಸ್ ಒಂದು ಕುಟುಂಬ ಇದ್ದಂತೆ. ಸಣ್ಣ ಪುಟ್ಟ ಗೊಂದಲಗಳು ನಿವಾರಣೆಯಾಗಿದೆ. ಆದ್ದರಿಂದ, ಶೋಕಾಸ್ ಉಚ್ಛಾಟನೆ ವಿಚಾರವೂ ಮುಗಿದ ಅಧ್ಯಾಯ ಎಂದರು.
ಸುಳ್ಯದ 110 ಕೆವಿ ಸಬ್‍ಸ್ಟೇಷನ್ ಅನುಷ್ಠಾನಕ್ಕೆ ಸರಕಾರ ತಡೆ ನೀಡಿಲ್ಲ. ಚುನಾವಣಾ ದೃಷ್ಠಿಯಿಂದ ಟೆಂಡರ್ ಪ್ರಕ್ರಿಯೆಯ ತಾಂತ್ರಿಕ ವಿಚಾರ ಫೂರ್ಣಗೊಳ್ಳುವ ಮೊದಲೇ ಬಿಜೆಪಿಯವರು ಶಿಲಾನ್ಯಾಸ ನಡೆಸಿದ್ದಾರೆ. ನಮ್ಮ ಸರಕಾರ ಈ ಕಾಮಗಾರಿಯನ್ನು ಅನುಷ್ಠಾನ ಗೊಳಿಸಿಯೇ ಸಿದ್ಧ ಎಂದು ಪ್ರಶ್ನೆಗೆ ಕಾಂಗ್ರೆಸ್ ನಾಯಕರು ಉತ್ತರಿಸಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕಾಂಗ್ರೆಸ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಜಿ.ಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಸದಸ್ಯ ಭರತ್ ಮುಂಡೋಡಿ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಡಿಸಿಸಿ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ರಾಜೀವಿ ಆರ್.ರೈ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಸದಾನಂದ ಮಾವಜಿ, ಪಿ.ಎಸ್. ಗಂಗಾಧರ, ಶರೀಫ್ ಕಂಠಿ, ಶಾಫಿ ಕುತ್ತಮೊಟ್ಟೆ, ಸಿದ್ದಿಕ್ ಕೊಕ್ಕೊ, ಶಹೀದ್ ಪಾರೆ, ಮಹಮ್ಮದ್ ಫವಾಝ್ ಕನಕಮಜಲು, ಪ್ರವೀಣಾ ಮರುವಂಜ, ಮಂಜುಳಾ ಕುಶಲ್ ಪೆರಾಜೆ, ಪ್ರೇಮಾ ಗಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.







