Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ...

ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಮಾರ್ನಾಡು ಪ್ರೌಢಶಾಲಾ ಶಿಕ್ಷಕ ಜೋನ್ ರೊನಾಲ್ಡ್ ಡಿಸೋಜ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ5 Sept 2026 2:46 PM IST
share
ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಮಾರ್ನಾಡು ಪ್ರೌಢಶಾಲಾ ಶಿಕ್ಷಕ ಜೋನ್ ರೊನಾಲ್ಡ್ ಡಿಸೋಜ ಆಯ್ಕೆ

ಮೂಡುಬಿದಿರೆ: ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ಜೋನ್ ರೊನಾಲ್ಡ್ ಡಿಸೋಜ ಅವರು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

1988ರಲ್ಲಿ ಇರುವೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆಗೆ ಸೇರಿದ ಜೋನ್ ರೊನಾಲ್ಡ್ ಡಿಸೋಜ ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಇರುವೈಲು, ಮೂಡುಬಿದಿರೆ ಮೈನ್ ಹಾಗೂ ಕಿರಿಯ ಪ್ರಾಥಮಿಕ ಶಾಲೆ, ಗುತ್ತು ಕರಿಂಜೆ ಸೇರಿದಂತೆ ವಿವಿಧ ಶಾಲೆಗಳಲ್ಲಿ ಒಟ್ಟು 37 ವರ್ಷಗಳ ಸೇವೆ ಸಲ್ಲಿಸಿದ್ದಾರೆ.

2005ರಲ್ಲಿ ಪ್ರೌಢಶಾಲಾ ಸಹಶಿಕ್ಷಕರಾಗಿ ಬಡ್ತಿ ಪಡೆದ ಅವರು, ಈವರೆಗೆ ಸರ್ಕಾರಿ ಪ್ರೌಢಶಾಲೆ, ಮೂಡುಮಾರ್ನಾಡು ಇಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಕ್ಷೇತ್ರ ಸಂಪನ್ಮೂಲ ಕೇಂದ್ರ, ಮೂಡುಬಿದಿರೆ ಇಲ್ಲಿ ಮೂರು ವರ್ಷಗಳ ಕಾಲ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿ ನೀಡಿದ್ದಾರೆ.

ಟಾಲ್ಪ್, ಇ.ಎಲ್.ಸಿ., ಸಮಾಜ ವಿಜ್ಞಾನ ವಿಷಯ ಹಾಗೂ ಶಿಕ್ಷಕರ ಇತರ ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡಿರುವ ಅವರು, ಸಮಾಜ ವಿಜ್ಞಾನ ವಿಷಯದಲ್ಲಿ ನಿಧಾನಗತಿಯ ಕಲಿಕೆಯ ಮಕ್ಕಳಿಗೆ ಅನುಕೂಲವಾಗುವಂತೆ ‘ಸಮಾಜ ಬಲು ಸುಲಭ’, ‘ಸವಿಸೂತ್ರಗಳು’, ‘ಸವಿಮೌಲ್ಯ’ ಮುಂತಾದ ಪುಸ್ತಕಗಳನ್ನು ರಚಿಸಿದ್ದಾರೆ.

ಕೋವಿಡ್ ರಜೆಯ ಸಂದರ್ಭದಲ್ಲಿ ಮಕ್ಕಳಿಗಾಗಿ ಆನ್‌ಲೈನ್ ರಸಪ್ರಶ್ನೆಗಳನ್ನು ರಚಿಸಿ ನಿರ್ವಹಿಸಿದ್ದಾರೆ. ಶೈಕ್ಷಣಿಕ ವೀಡಿಯೋಗಳಿಗಾಗಿ ಯೂಟ್ಯೂಬ್ ಚಾನಲ್ ರಚಿಸಿದ್ದು, ಪಾಠಬೋಧನೆಗೆ ಇ-ಕಂಟೆಂಟ್ ಸಿದ್ಧಪಡಿಸಿದ್ದಾರೆ. ಕಂಪ್ಯೂಟರ್ ಮೂಲಕ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪಾಠಬೋಧನೆಯನ್ನೂ ನಡೆಸಿದ್ದಾರೆ.

ದಾನಿಗಳ ನೆರವಿನಿಂದ ಮಕ್ಕಳಿಗೆ ನೋಟ್ ಪುಸ್ತಕ, ಸ್ಕೂಲ್ ಐ.ಡಿ., ಧ್ವನಿವರ್ಧಕ, ಕುಡಿಯುವ ನೀರಿನ ಶೀತಲ ಯಂತ್ರ, ಊಟದ ಬಟ್ಟಲು, ಲೋಟ, ಬಿಸಿಯೂಟ ತಯಾರಿಕೆಗೆ ಮಿಕ್ಸಿ, ಕುಕ್ಕರ್ ಹಾಗೂ ಮಕ್ಕಳಿಗೆ ಬಹುಮಾನಗಳನ್ನು ಕೊಡಿಸಿದ್ದಾರೆ.

ಸರ್ಕಾರಿ ಪ್ರೌಢಶಾಲೆ, ಮೂಡುಮಾರ್ನಾಡು ಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು ಒಂಬತ್ತು ವರ್ಷ ಶೇ.100 ಫಲಿತಾಂಶ ದಾಖಲಿಸಿದೆ. ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಶೇ.100 ಫಲಿತಾಂಶ ದಾಖಲಿಸಿರುವ ತಾಲೂಕಿನ ಏಕೈಕ ಸರ್ಕಾರಿ ಪ್ರೌಢಶಾಲೆಯಾಗಿದೆ. ಜೋನ್ ರೊನಾಲ್ಡ್ ಡಿಸೋಜ ಬೋಧಿಸಿದ ಸಮಾಜ ವಿಜ್ಞಾನ ವಿಷಯದಲ್ಲಿಯೂ ಹಲವಾರು ವರ್ಷಗಳಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X