ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ: ಮೇ 29ರಂದು ಸಭೆ
ಸರಣಿ ಹತ್ಯೆ ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಮುಸ್ಲಿಮರ ಮೇಲಿನ ದೌರ್ಜನ್ಯಕ್ಕೆ ಖಂಡನೆ

ಮಂಗಳೂರು, ಮೇ 28: ದ.ಕ. ಜಿಲ್ಲೆಯಲ್ಲಿ ಕೆಲವು ಸಮಯದಿಂದ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ರಾಜ್ಯ ಗೃಹ ಇಲಾಖೆಯ ವೈಫಲ್ಯವನ್ನು ಖಂಡಿಸಿ ಮುಂದಿನ ನಿರ್ಧಾರದ ಬಗ್ಗೆ ಚರ್ಚಿಸಲು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವು ಮೇ 29ರಂದು ಅಪರಾಹ್ನ 2:30ಕ್ಕೆ ನಗರದ ಬೋಳಾರ ಶಾದಿಮಹಲ್ ನ ಸಭಾಂಗಣದಲ್ಲಿ ಸಭೆ ಕರೆದಿದೆ.
ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ಇದನ್ನು ತಡೆಯುವಲ್ಲಿ ಗೃಹ ಇಲಾಖೆಯ ವೈಫಲ್ಯ ಮತ್ತು ಮುಸ್ಲಿಮರ ಕಡೆಗಣನೆ ಬೇಸತ್ತು ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಯಲ್ಲಿರುವ ಮುಸ್ಲಿಮ್ ಮುಖಂಡರು ಮತ್ತು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸುವ ನಿಟ್ಟಿನಲ್ಲಿ ಈ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್ ಮತ್ತು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story