ಮಕ್ಕಳಿಗಾಗಿ ಆಸ್ತಿ ಮಾಡದೆ, ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ : ಬಿ.ಎಂ.ಅಬ್ಬಾಸ್ ಅಲಿ

ವಿಟ್ಲ : ಪೋಷಕರು ತಮ್ಮ ಮಕ್ಕಳಿಗಾಗಿ ಆಸ್ತಿ ಮಾಡದೆ ಅವರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಬೋಳಂತೂರು ಹೇಳಿದರು.
ಜಮೀಯ್ಯತುಲ್ ಫಲಾಹ್ ಘಟಕದ ವತಿಯಿಂದ ಬೊಳಂತಿಮುಗೇರು ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ ವಿತರಿಸಿ ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳ ಕಲಿಕೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ ಎಂದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷ ಲಿಯಾಖತ್ ಸಭೆಯು ಅಧ್ಯಕ್ಷತೆ ವಹಿಸಿದ್ದರು. ಜಮೀಯ್ಯತುಲ್ ಫಲಾಹ್ ಉಪಾಧ್ಯಕ್ಷ, ತರಬೇತುದಾರ ಬಿ.ಎಂ. ತುಂಬೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.
ಬೊಳಂತಿಮುಗೇರು ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಹಸೈನಾರ್, ಟ್ರಸ್ಟ್ ನ ಕೋಶಾಧಿಕಾರಿ ಹನೀಫ್ ಕೊಳಂಬೆ, ಎಸ್ಡಿಎಂಸಿ ಉಪಾಧ್ಯಕ್ಷೆ ರುಬೀನಾ ಬಾನು, ಜಮೀಯ್ಯತುಲ್ ಫಲಾಹ್ ಕಾರ್ಯದರ್ಶಿ ಹಕೀಂ ಕಲಾಯಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಉದಯ ವಿ, ಸ್ವಾಗತಿಸಿ, ವಂದಿಸಿದರು.





