Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ದಲ್ಲಿ ಮನೆ ಮನೆಗೆ ಪೊಲೀಸ್ ಯೋಜನೆ...

ದ.ಕ.ದಲ್ಲಿ ಮನೆ ಮನೆಗೆ ಪೊಲೀಸ್ ಯೋಜನೆ ಆರಂಭ

ವಾರ್ತಾಭಾರತಿವಾರ್ತಾಭಾರತಿ12 Oct 2025 9:15 AM IST
share
ದ.ಕ.ದಲ್ಲಿ ಮನೆ ಮನೆಗೆ ಪೊಲೀಸ್ ಯೋಜನೆ ಆರಂಭ
ಮಾಹಿತಿ ಪ್ರಚಾರದ ಕೊರತೆಯಿಂದ ಜನರಲ್ಲಿ ಆತಂಕ

ಮಂಗಳೂರು: ರಾಜ್ಯ ಸರಕಾರ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ 'ಮನೆ ಮನೆಗೆ ಪೊಲೀಸ್' ಎಂಬ ಯೋಜನೆಯನ್ನು ಆರಂಭಿಸಿದೆ. ಆದರೆ ಈ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ಮತ್ತು ಪ್ರಚಾರದ ಕೊರತೆಯಿಂದಾಗಿ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಯಾಗಿದೆ.

ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ವಿಶ್ವಾಸ ತುಂಬುವುದು, ಸುರಕ್ಷತೆಯ ವಾತಾವರಣ ಸೃಷ್ಟಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಆದರೆ ಬಹುತೇಕ ಮಂದಿಗೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯೇ ಇಲ್ಲ ಹಾಗಾಗಿ ದಿಢೀರ್ ಮನೆಗೆ ಆಗಮಿಸಿ ಪ್ರಶ್ನಿಸುವ ಪೊಲೀಸರಿಗೆ ಏನು ಉತ್ತರಿಸಬೇಕು ಎಂಬ ಗೊಂದಲ ಸಾರ್ವಜನಿಕರಲ್ಲಿದೆ.

ದೇಶದಲ್ಲೇ ಪ್ರಥಮ ಎಂಬಂತೆ ಮನೆ ಮನೆಗೆ ಪೊಲೀಸ್' ಎಂಬ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸುತ್ತಿದೆ. ಪ್ರತಿಯೊಂದು ಮನೆಗೂ ಪೊಲೀಸರು ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸಲಿದ್ದಾರೆ. ಈ ಯೋಜನೆಯಿಂದ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಕೂಡ ಸಹಾಯವಾಗಲಿದೆ. ಅಲ್ಲದೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮತ್ತು ಪತ್ತೆ ಹಚ್ಚಲು ನೆರವಾಗಲಿದೆ ಎಂದು ಹೇಳಲಾಗುತ್ತದೆ.

ಬೆಂಗಳೂರಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಪೊಲೀಸ್ ಇಲಾಖೆ ಮುಂದಾದಾಗ ಕೆಲವು ಕಡೆಗಳಲ್ಲಿ ಅಪಸ್ವರ ಕೇಳಿ ಬಂದಿತ್ತು. ದ.ಕ. ಜಿಲ್ಲೆಯ ಬಹುತೇಕ ಮಂದಿಗೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯೇ ಇಲ್ಲ. ಪ್ರಚಾರದ ಕೊರತೆಯೂ ಇದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನವೂ ಆಗಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.

ನಗರ ಹೊರವಲಯದ ಹಲವು ಕಡೆ ಶನಿವಾರ ಪೊಲೀಸರು ಮನೆ ಮನೆಗೆ ತೆರಳಿ ಮಾಹಿತಿ ಕೇಳಲು ಆರಂಭಿಸಿದಾಗ ಕೆಲವರು ಸ್ಪಂದಿಸಿದ್ದರೆ, ಇನ್ನು ಕೆಲವರು ಆತಂಕಿತರಾದ ಬಗ್ಗೆ ವರದಿಯಾಗಿದೆ. ಮತ್ತೆ ಕೆಲವರು ಪರಿಚಯದ ಸಾಮಾಜಿಕ ಕಾರ್ಯಕರ್ತರು, ಮುಖಂಡರಿಗೆ ಕರೆ ಮಾಡಿ ಪೊಲೀಸರು ಮನೆಗೆ ಬಂದು ಮಾಹಿತಿ ಕೇಳುತ್ತಿದ್ದಾರೆ. ಮನೆಯ ಫೋಟೊ ತೆಗೆಯುತ್ತಿದ್ದಾರೆ. ಏನು ಮಾಡುವುದು? ಎಂದು ಕೇಳಿದ ಪ್ರಸಂಗವೂ ನಡೆದಿದೆ.

ನಿಮಗೆ ಏನಾದರು ಸಮಸ್ಯೆ ಇದೆಯೇ? ಯಾರಿಂದಲಾದರು ನಿಮಗೆ ಕಿರುಕುಳ ಇದೆಯಾ? ಮಾದಕ ವಸ್ತು ಮಾರಾಟದ ಬಗ್ಗೆ ಅನುಮಾನವಿದೆಯೇ? ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆಯೇ? ಸೈಬರ್ ವಂಚನೆಯಾಗಿದೆಯೇ? ಡಿಜಿಟಲ್ ಅರೆಸ್ಟ್ ನ ಬೆದರಿಕೆ ಕರೆ ಬಂದಿದೆಯೇ? ಇತ್ಯಾದಿಯಾಗಿ ಪೊಲೀಸರು ಪ್ರಶ್ನಿಸುತ್ತಾರೆ. ನೀವು ಯಾವ ಸಮಸ್ಯೆಯನ್ನೂ ಬಚ್ಚಿಡ ಬೇಡಿ. ನಮ್ಮೊಂದಿಗೆ ಮುಕ್ತವಾಗಿ ಹಂಚಿ ಕೊಳ್ಳಿ. ನಮ್ಮಿಂದಾದಷ್ಟು ನೆರವು, ಸಹಕಾರ ನೀಡಲು ನಾವು ಬದ್ದ ಎಂದು ಪೊಲೀಸರು ಭರವಸೆ ನೀಡಿದರೂ ಕೂಡ ಸೂಕ್ತ ಮಾಹಿತಿ ಮತ್ತು ಈ ಯೋಜನೆಯ ಬಗ್ಗೆ ಸಕಾಲಕ್ಕೆ ಜಾಗೃತಿ ಮೂಡಿಸದ ಕಾರಣ ಗೊಂದಲ ಸೃಷ್ಟಿಯಾಗಿದೆ.

ಇದು ಪೊಲೀಸ್ ಇಲಾಖೆಯ ಉತ್ತಮ ಯೋಜನೆಯಾಗಿದೆ. ಆದರೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದೆ ದಿಢೀರ್ ಮನೆಗೆ ತೆರಳಿ ಸಾರ್ವಜನಿಕರಲ್ಲಿ ವಿಶ್ವಾಸ ತುಂಬುವ, ರಕ್ಷಣೆಯ ಭರವಸೆ ನೀಡುವಂತಹ ಪ್ರಶ್ನೆಗಳನ್ನು ಕೇಳಿದರೂ ತಕ್ಷಣಕ್ಕೆ ಉತ್ತರಿಸಲು ಸಾಧ್ಯವಾಗದು. ಹಾಗಾಗಿ ಪೊಲೀಸ್ ಇಲಾಖೆಯು ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X