Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಪೊಲೀಸರಿಗೆ ಮತ್ತೆ 100 ಮನೆ :...

ಮಂಗಳೂರು ಪೊಲೀಸರಿಗೆ ಮತ್ತೆ 100 ಮನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ17 Feb 2026 3:26 PM IST
share
ಮಂಗಳೂರು ಪೊಲೀಸರಿಗೆ ಮತ್ತೆ 100 ಮನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
ಪೊಲೀಸ್ ಅಧಿಕಾರಿ, ಸಿಬ್ಬಂದಿ ನೂತನ ವಸತಿ ಕಟ್ಟಡ ಉದ್ಘಾಟನೆ-ಶಂಕುಸ್ಥಾಪನೆ

ಮಂಗಳೂರು : ಮುಂದಿನ ವರ್ಷದೊಳಗೆ ಮಂಗಳೂರು ನಗರಕ್ಕೆ ಸೀಮಿತವಾಗಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಮತ್ತೆ 100 ಮನೆಗಳನ್ನು ಒದಗಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಅತ್ತಾವರ ಪೊಲೀಸ್ ಲೇನ್‌ನಲ್ಲಿ ಮಂಗಳವಾರ ಅವರು, ಮೂಡಬಿದ್ರೆ ಪೊಲೀಸ್ ಠಾಣಾ ಸಿಬ್ಬಂದಿ ನೂತನ ವಸತಿ ಗೃಹಗಳ ಉದ್ಘಾಟನೆ ಹಾಗೂ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿ- ಸಿಬ್ಬಂದಿಯ ನೂತನ ವಸತಿ ಗೃಹಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ರಾಜ್ಯದಲ್ಲಿ 1.10 ಲಕ್ಷ ಪೊಲೀಸ್ ಅಧಿಕಾರಿ ಸಿಬ್ಬಂದಿ ಇದ್ದು, ಈವರೆಗೆ ಶೇ. 40ರಷ್ಟು ಮಂದಿಗೆ ನೂತನ ವಸತಿ ಗೃಹಗಳ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಪೊಲೀಸರಲ್ಲಿ ಆತ್ಮಸ್ಥೈರ್ಯ, ನಂಬಿಕೆ, ವಿಶ್ವಾಸ ತುಂಬಿಸುವ ಕೆಲಸವಾತ್ತ್ತಿದೆ. 2030ರೊಳಗೆ ಎಲ್ಲರಿಗೂ ವಸತಿಗೃಹಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು. ಪೊಲೀಸ್ ಇಲಾಖೆ ಸುವ್ಯವಸ್ಥಿತವಾಗಿದ್ದರೆ ಸಮಾಜ ಅಭಿವೃದ್ಧಿಯಾಗುತ್ತದೆ ಎನ್ನುವ ಮನೋಭಾವದಿಂದ 2015ರಲ್ಲಿ ಈ ವಸತಿ ಯೋಜನೆಯನ್ನು ಆರಂಭಿಸಲಾಗಿದ್ದು, ಆರಂಭದಲ್ಲಿ ಒಂದು ವಸತಿ ವೆಚ್ಚ 18 ಲಕ್ಷ ರೂ.ಗಳಿದ್ದು ಅದೀಗ 33 ಲಕ್ಷ ರೂ.ಗಳಿಗೆ ಏರಿಕೆಯಾಗಿದೆ ಎಂದರು.

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 2ನೆ ಸ್ಥಾನದಲ್ಲಿದೆ. ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ. ದ.ಕ. ಜಿಲ್ಲೆಯೂ ಬೆಂಗಳೂರಿನ ಬಳಿಕ 2ನೆ ಪ್ರಮುಖ ನಗರವಾಗಿ ಬೆಳೆಯುವ ಎಲ್ಲಾ ಸಾಮರ್ಥ್ಯ, ಅವಕಾಶಗಳನ್ನು ಹೊಂದಿದೆ. ಆದರೆ ಕೆಲ ಸಮಯದ ಹಿಂದೆ ಇಲ್ಲಿನ ಸೌಹಾರ್ದ ವಾತಾವರಣಕ್ಕೆ ಧಕ್ಕೆ ಉಂಟಾಗಿತ್ತು. ಇದೀಗ ಅವೆಲ್ಲವೂ ಬದಲಾಗಿ ಗತಕಾಲದ ವೈಭವ ವಾಪಾಸು ಬರುವ ಸನ್ನಿವೇಶ ನೋಡುತ್ತಿದ್ದೇವೆ. ಸರಕಾರವೂ ಅಭಿವೃದ್ಧಿ ಯೋಜನೆಗಳ ಸಂದರ್ಭ ಮಂಗಳೂರನ್ನು ಗಣನೆಗೆ ತೆಗೆದುಕೊಳ್ಳುತ್ತಿದೆ. ಜನ ಸಮುದಾಯದಲ್ಲೂ ಈ ಬಗ್ಗೆ ಅರಿವು ಮೂಡಿರುವಂತೆ ಕಾಣುತ್ತಿದೆ ಎಂದವರು ಹೇಳಿದರು.

ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವ ದಿಸೆಯಲ್ಲಿ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಗಳೂರಿನಲ್ಲಿಯೂ ಈ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳು ನಡೆಯುತ್ತಿದ್ದು, ಪೊಲೀಸ್ ಅಧಿಕಾರಿಗಳ ಜತೆ ನಡೆಸಲಾದ ಪರಿಶೀಲನೆಯ ಸಂದರ್ಭ ಡ್ರಗ್ಸ್ ಪ್ರಕರಣ, ಪೂರೈಕೆ ಪ್ರಮಾಣ ಸಾಕಷ್ಟು ಕಡಿಮೆಯಾಗಿರುವುದು ಕಂಡುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳು ಕಾಲೇಜು ಆಡಳಿತ ಮಂಡಳಿಗಳ ಸಹಕಾರದ ಜತೆಗೆ ಡ್ರಗ್ಸ್ ಸೇವನೆ ಬಗ್ಗೆ ವಿದ್ಯಾರ್ಥಿಗಳ ತಪಾಸಣೆ ಕಾರ್ಯದ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಡ್ರಗ್ಸ್ ನಿಯಂತ್ರಣದಲ್ಲಿ ಪೋಷಕರು ಕೂಡಾ ಮನಸ್ಸು ಮಾಡಿದರೆ ಮಕ್ಕಳನ್ನು ನಿಯಂತ್ರಣದಲ್ಲಿರಿಸಿಕೊಂಡು ಈ ಪಿಡುಗಿನಿಂದ ಸಮಾಜವನ್ನು ಮುಕ್ತಗೊಳಿಸಲು ಸಾಧ್ಯವಾಗಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಮಂಗಳೂರಿನಲ್ಲಿ ಎರಡು ಹೊಸ ಪೊಲೀಸ್ ಠಾಣೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಹೊಸ ಠಾಣೆ ಮಂಜೂರಾತಿಗೆ ಕೇಂದ್ರ ಸರಕಾರ ಕೆಲವೊಂದು ನಿಯಮಗಳನ್ನು ಅನಸುರಿಸಿ ಹೊಸ ಠಾಣೆಗಳಿಗೆ ಮಂಜೂರಾತಿ ದೊರೆಯಬೇಕಿದೆ. ಹಳೆ ಕಟ್ಟಡಗಳ ಬದಲಿಗೆ ಹೊಸ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು. ಕರಾವಳಿ ಭದ್ರತಾ ಪಡೆಯ 15 ಬೋಟ್‌ಗಳಲ್ಲಿ ಮೂರ್ನಾಲ್ಕು ಮಾತ್ರವೇ ಕಾರ್ಯ ನಿರ್ವಹಿಸುತ್ತಿದ್ದು, ಈ ಬಗ್ಗೆಯೂ ಮುಖ್ಯಮಂತಿ ಗಮನಕ್ಕೆ ತರಲಾಗಿದೆ. ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನಗರದ ಎರಡು ಪೊಲೀಸ್ ಠಾಣೆಗಳು ಬಾಡಿಗೆ ಕಟ್ಟಡದಲ್ಲಿವೆ. ಬಂದರು ಪೊಲೀಸ್ ಠಾಣೆ ಸ್ವಾತಂತ್ರ ಪೂರ್ವದಲ್ಲಿ ನಿರ್ಮಾಣವಾಗಿದ್ದು, ಅದನ್ನು ಹೊಸತಾಗಿ ನಿರ್ಮಾಣ ಮಾಡಬೇಕಾಗಿದೆ. ನಗರ ಭಾಗದ ಜೈಲನ್ನು ಶೀಘ್ರ ಸ್ಥಳಾಂತರಿಸುವ ಮೂಲಕ ಸಮಸ್ಯೆಯನ್ನು ನಿವಾರಿಸಬೇಕು. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂಬ ಬೇಡಿಕೆ ಸಲ್ಲಿಸಿದರಲ್ಲದೆ, ಕರಾವಳಿ ಕಾವಲು ಪಡೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ತಾನು ವರದಿಯೊಂದನ್ನು ತಯಾರಿಸಿದ್ದು, ಅದನ್ನು ಶೀಘ್ರವೇ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾದ ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಸ್ಟ್ಯಾನಿ ಅಲ್ವಾರಿಸ್, ಎಂ.ಎ. ಗಫೂರ್, ಶಾಹೀದ್ ತೆಕ್ಕಿಲ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ವಿಶೇಷ ಕಾರ್ಯಪಡೆಯ ಐಜಿಪಿ ಪ್ರಕಾಶ್ ಗೌಡ, ಗೃಹ ಇಲಾಖೆಯ ಇಂಜಿನಿಯರ್ ವೀರಭದ್ರಪ್ಪ, ಡಿಸಿಪಿ ರವಿಶಂಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸ್ವಾಗತಿಸಿದರು. ಡಿಸಿಪಿ ಮಿಥುನ್ ವಂದಿಸಿದರು.

ಮಂಗಳೂರು ನಗರ ಮಧ್ಯ ಭಾಗದಲ್ಲಿರುವ ಜೈಲಿನಿಂದ ಸಾಕಷ್ಟು ಸಮಸ್ಯೆ ಆಗುತ್ತಿರುವ ಬಗ್ಗೆ ಗಮನದಲ್ಲಿದೆ. ಬಜೆಟ್ ಚರ್ಚೆ ವೇಳೆ ಮುಖ್ಯಮಂತ್ರಿಗೆ ನನ್ನ ಪ್ರಥಮ ಬೇಡಿಕೆಯೇ ಮಂಗಳೂರು ಜೈಲು ಸ್ಥಳಾಂತರದ ಬಗ್ಗೆ ಆಗಿತ್ತು. ಮುಡಿಪುವಿನ ನಿರ್ಮಾಣ ಹಂತದಲ್ಲಿರುವ ಜೈಲು ಆವರಣದಲ್ಲಿ ಬ್ಯಾರಕ್‌ಗಳ ನಿರ್ಮಾಣವಾಗಿದ್ದು, ಸುತ್ತಲೂ ಸುಭದ್ರ ಆವರಣ ಗೋಡೆ, ಗೇಟ್ ಹಾಗೂ ಇತರ ಭದ್ರತಾ ವ್ಯವಸ್ಥೆಗಳಿಗೆ ಸುಮಾರು 120 ಕೋಟಿ ರೂ.ಗಳ ಅಗತ್ಯವಿದೆ. ತುರ್ತು ಕಾಮಗಾರಿಗಳನ್ನು ಕೈಗೊಂಡು ನಗರದಿಂದ ಹೊರವಲಯಕ್ಕೆ ಜೈಲು ಸ್ಥಳಾಂತಕ್ಕೆ ಆದ್ಯತೆ ನೀಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಲಾಗಿದ್ದು, ಹಣ ಒದಗಿಸುವ ವಿಶ್ವಾಸ ಇದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ತಿಳಿಸಿದರು.

Tags

G.Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X