Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾl ಐ.ಜೆ. ಮ್ಯಾಗೇರಿ ಅವರ ʼಜೈಲ್‌ ಡೈರಿʼ...

ಡಾl ಐ.ಜೆ. ಮ್ಯಾಗೇರಿ ಅವರ ʼಜೈಲ್‌ ಡೈರಿʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ವಾರ್ತಾಭಾರತಿವಾರ್ತಾಭಾರತಿ14 Dec 2025 7:17 PM IST
share
ಡಾl ಐ.ಜೆ. ಮ್ಯಾಗೇರಿ ಅವರ ʼಜೈಲ್‌ ಡೈರಿʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ಮಂಗಳೂರು: ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೆಎಎಸ್‌ ಅಧಿಕಾರಿ, ಸಾಹಿತಿ ಡಾ. ಐ.ಜೆ. ಮ್ಯಾಗೇರಿ ಅವರ ʼಜೈಲ್‌ ಡೈರಿ (ಕೈದಿಗಳ ನೈಜ ಕಥನ)ʼ ಕೃತಿ ಆಯ್ಕೆಯಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದ ಇಮಾಮಸಾಬ್‌ ಜೀವನಸಾಬ್‌ ಮ್ಯಾಗೇರಿ ಧಾರವಾಡದ ಕರ್ನಾಟಕ ವಿವಿಯ ಕನ್ನಡ ಅಧ್ಯಯನ ಪೀಠದಿಂದ ಎಂ.ಎ. ಸ್ನಾತಕೋತ್ತರ ಪದವಿ ಪಡೆದು, ಹಂಪಿ ಕನ್ನಡ ವಿವಿಯಲ್ಲಿ ಎಂ.ಫಿಲ್. ಹಾಗೂ 'ವಸಾಹತುಶಾಹಿ ಅನುಭವ ಹಾಗೂ ಕನ್ನಡ ಕಾದಂಬರಿಗಳು' ವಿಷಯದ ಮೇಲೆ ಪಿಎಚ್‌ಡಿ ಮಾಡಿದ್ದಾರೆ.

2005ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಯಾಗಿ ಕರ್ನಾಟಕ ಕಾರಾಗೃಹಗಳ ಇಲಾಖೆಯ ಸೇವೆಗೆ ಸೇರಿರುವ ಇವರು ಕರ್ನಾಟಕದ ಅನೇಕ ಕಾರಾಗೃಹಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಬೆಂಗಳೂರು ಪ್ರಧಾನ ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆಯಲ್ಲಿದ್ದಾರೆ.

2014ರಲ್ಲಿ ಭಾರತ ಸರ್ಕಾರದಿಂದ ಇಂಗ್ಲೆಂಡ್ ಮತ್ತು ಸ್ಕಾಟ್ಲೆಂಡ್ ದೇಶಗಳಿಗೆ ಅಧ್ಯಯನ ಪ್ರವಾಸಕ್ಕೆ ಏಕೈಕ ಅಧಿಕಾರಿಯಾಗಿ ಆಯ್ಕೆಗೊಂಡು ಅಲ್ಲಿಯ ಕಾರಾಗೃಹಗಳ ಸುಧಾರಣೆ ಮತ್ತು ಅಪರಾಧಿಗಳ ಮನಃಪರಿವರ್ತನೆಯ ಕಾರ್ಯಕ್ರಮಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡು ಬಂಧಿಗಳ ಸುಧಾರಣೆಗಾಗಿ ಶ್ರಮಿಸುತ್ತಿದ್ದಾರೆ.

ಇವರ ಕರ್ತವ್ಯ ನಿಷ್ಠೆ ಮತ್ತು ಕಾರಾಗೃಹ ಆಡಳಿತದಲ್ಲಿ ಕೈಗೊಂಡ ಸುಧಾರಣಾ ಕ್ರಮಗಳಿಗಾಗಿ 2021ರಲ್ಲಿ ಕರ್ನಾಟಕ ಸರ್ಕಾರದಿಂದ ಮುಖ್ಯಮಂತ್ರಿಗಳ ಚಿನ್ನದ ಪದಕ ದೊರೆತಿದೆ. 'ಹಿಂಸಾಕಾರಣ', ಇವರ ಇನ್ನೊಂದು ಪ್ರಕಟಿತ ಕೃತಿ. ಇವರ ಬರಹಗಳು ಬೆಂಗಳೂರು ಮತ್ತು ತುಮಕೂರು ವಿವಿಗಳ ಪದವಿ ತರಗತಿಗೆ ಪಠ್ಯವಾಗಿದೆ.

ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ನೀಡಲಾಗುವ ʼಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿʼಯು ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ. ಪ್ರಶಸ್ತಿಗೆ 22 ಕೃತಿಗಳು ಬಂದಿದ್ದು, ಸಾಹಿತಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು, ಲೇಖಕಿ ಮತ್ತು ಪ್ರಾಧ್ಯಾಪಕಿ ಶಮೀಮಾ ಕುತ್ತಾರ್‌ ಹಾಗೂ ಪತ್ರಕರ್ತ, ಸಾಹಿತಿ ಹಂಝ ಮಲಾರ್ ತೀರ್ಪುಗಾರರಾಗಿ ಸಹಕರಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 27 ರಂದು ಗಜೇಂದ್ರಗಡದಲ್ಲಿ ನಡೆಯಲಿದೆ ಎಂದು ಮುಸ್ಲಿಮ್‌ ಲೇಖಕರ ಸಂಘದ ಅಧ್ಯಕ್ಷ ಉಮರ್‌ ಯು. ಎಚ್.‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X