Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯದಲ್ಲಿ ಬರ ಪರಿಸ್ಥಿತಿ;...

ರಾಜ್ಯದಲ್ಲಿ ಬರ ಪರಿಸ್ಥಿತಿ; ಮೈಸೂರಿನಲ್ಲಿ ಕಂಬಳ ಆಯೋಜನೆ ಬೇಡ : ಎ.ಟಿ.ರಾಮಸ್ವಾಮಿ ಮನವಿ

ವಾರ್ತಾಭಾರತಿವಾರ್ತಾಭಾರತಿ12 Oct 2026 1:18 PM IST
share
ರಾಜ್ಯದಲ್ಲಿ ಬರ ಪರಿಸ್ಥಿತಿ; ಮೈಸೂರಿನಲ್ಲಿ ಕಂಬಳ ಆಯೋಜನೆ ಬೇಡ : ಎ.ಟಿ.ರಾಮಸ್ವಾಮಿ ಮನವಿ

ಮಂಗಳೂರು : ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಮೈಸೂರಿನಲ್ಲಿ ಕಂಬಳ ಕ್ರೀಡೆ ಆಯೋಜಿಸುವುದು ಬೇಡ ಎಂದು ಕರಾವಳಿಯ ಜನತೆಯಲ್ಲಿ ಮನವಿ ಮಾಡುವುದಾಗಿ ‘ಪರಿಸರಕ್ಕಾಗಿ ನಾವು’ ಸಂಘಟನೆಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ಸಾಂಸ್ಕೃತಿಕ ಹಾಗೂ ಗ್ರಾಮೀಣ ಕ್ರೀಡೆಯಾದ ಕಂಬಳದ ಬಗ್ಗೆ ನಮಗೆಲ್ಲ ಅಪಾರ ಗೌರವ ಮತ್ತು ಅಭಿಮಾನವಿದೆ. ಆದರೆ, ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮೈಸೂರಿನಲ್ಲಿ ಕಂಬಳ ಆಯೋಜಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ತೀವ್ರ ಬರಗಾಲಕ್ಕೆ ತುತ್ತಾಗಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. ನೂರಾರು ಹಳ್ಳಿಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ದನಕರು, ಆಡು-ಕುರಿಗಳಿಗೆ ನೀರು ಮತ್ತು ಮೇವಿನ ಅಭಾವ ಎದುರಾಗಿದೆ. ಅಕ್ಟೋಬರ್ ತಿಂಗಳಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸಂಕಷ್ಟಗಳನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಸೂಪರ್ ಎಲ್ ನಿನೋ ಪರಿಣಾಮ ಭಯಾನಕವಾಗಿರಲಿದೆ ಎಂಬ ವರದಿಗಳಿವೆ. ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರಿಗೆ ಸರ್ಕಾರ ಕೇವಲ 2,500 ರೂ. ಬರ ಪರಿಹಾರ ಘೋಷಿಸಿರುವುದು ಅವಮಾನಕರ ಎಂದು ರೈತರು ಆಕ್ರೋಶಗೊಂಡಿದ್ದಾರೆ. ಪರಿಹಾರದ ಹಣ ಬಂದ ಕೂಡಲೇ ಅದಕ್ಕೆ ಒಂದು ರೂಪಾಯಿ ಸೇರಿಸಿ, ಒಟ್ಟು 2,501 ರೂ. ಗಳನ್ನು ಮುಖ್ಯಮಂತ್ರಿಗಳ ನಿಧಿಗೆ ನೀಡಲು ರಾಜ್ಯದ ರೈತರು ತೀರ್ಮಾನಿಸಿದ್ದಾರೆ ಎಂದು ಅವರು ತಿಳಿಸಿದರು.

ಮೈಸೂರು ಜಿಲ್ಲೆಯೂ ತೀವ್ರ ಬರಗಾಲಕ್ಕೆ ತುತ್ತಾಗಿದೆ. ಜಿಲ್ಲೆಯ ಹತ್ತಾರು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜಿಲ್ಲೆಯ 2,991 ಕೆರೆಗಳ ಪೈಕಿ 2,928 ಕೆರೆಗಳಲ್ಲಿ ನೀರಿಲ್ಲ. ಕೇವಲ 63 ಕೆರೆಗಳು ಮಾತ್ರ ತುಂಬಿವೆ. ಮೈಸೂರು ನಗರದ 10 ಕಿ.ಮೀ. ವ್ಯಾಪ್ತಿಯಲ್ಲಿರುವ ಕೊಳವೆಬಾವಿಗಳು ಬತ್ತಿಹೋಗಿವೆ. ನಗರದ ಹಲವಾರು ಬಡಾವಣೆಗಳಲ್ಲಿ ಈಗಾಗಲೇ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ. ಕಾವೇರಿ, ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು, ಇವುಗಳ ಒಟ್ಟು ನೀರಿನ ಸಂಗ್ರಹ ಕಳೆದ ವರ್ಷದ ಸಂಗ್ರಹದ ಅರ್ಧಕ್ಕಿಂತಲೂ ಕಡಿಮೆಯಾಗಿದೆ ಎಂದರು.

ಮೈಸೂರಿನಲ್ಲಿ ಕಂಬಳ ಆಯೋಜಿಸಲು ಆಯ್ಕೆ ಮಾಡಿರುವ ಜಾಗವನ್ನು ಉದ್ಯಾನವನಕ್ಕಾಗಿ ಮೀಸಲಿಡಲಾಗಿತ್ತು. ಈ ಪ್ರದೇಶದಲ್ಲಿ ನೂರಾರು ಮರಗಳು, ಸಣ್ಣಪುಟ್ಟ ಗಿಡಗಂಟಿಗಳು, ಪೊದೆಗಳು, ಬತ್ತಿಹೋದ ಕೆರೆ ಹಾಗೂ ಮೊಲ, ಅಳಿಲು ಸೇರಿದಂತೆ ಸಣ್ಣ ಪ್ರಾಣಿಗಳು ಮತ್ತು ಪಕ್ಷಿಗಳ ಜೀವವೈವಿಧ್ಯವಿತ್ತು. ಆದರೆ, 50ಕ್ಕೂ ಹೆಚ್ಚು ಮರಗಳು ಹಾಗೂ ನೂರಾರು ಗಿಡಗಂಟಿಗಳನ್ನು ತೆರವುಗೊಳಿಸಿ, ಅವುಗಳನ್ನು ಆಶ್ರಯಿಸಿದ್ದ ಜೀವಪರಿಸರ ವ್ಯವಸ್ಥೆಯನ್ನು ನಾಶಪಡಿಸಲಾಗಿದೆ. ಕೆರೆಯ ಅಂಗಳವನ್ನು ಮುಚ್ಚಿ ಕೋಣಗಳ ಓಟಕ್ಕೆ ಕಣ ಸಿದ್ಧಪಡಿಸಲಾಗಿದೆ. ಮರಗಳನ್ನು ಕಡಿದಿರುವುದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯೂ ಎಫ್‌ಐಆರ್ ದಾಖಲಿಸಿದೆ ಎಂದು ರಾಮಸ್ವಾಮಿ ಆರೋಪಿಸಿದರು.

ಮೈಸೂರು ದಸರಾ ಸಂದರ್ಭದಲ್ಲಿ ವಿಶ್ವವಿಖ್ಯಾತ ಅಂಬಾರಿ ಮೆರವಣಿಗೆಯ ಜೊತೆಗೆ ಮಹಿಳಾ ದಸರಾ, ಮಕ್ಕಳ ದಸರಾ, ರೈತ ದಸರಾ, ಯುವ ದಸರಾ, ಯುವ ಸಂಭ್ರಮ, ಆಹಾರ ಮೇಳ, ಲೇಸರ್ ಶೋ ಹಾಗೂ ಕ್ರೀಡಾಕೂಟ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆದರೆ, ಈ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಮತ್ತು ಅಚ್ಚುಕಟ್ಟಾಗಿ ನಡೆಸುತ್ತಿಲ್ಲ ಎಂಬುದು ಮೈಸೂರು ನಾಗರಿಕರ ಅಳಲಾಗಿದೆ ಎಂದು ಅವರು ತಿಳಿಸಿದರು.

ಈ ಎಲ್ಲ ಕಾರಣಗಳಿಂದಾಗಿ ಮೈಸೂರಿನಲ್ಲಿ ಕಂಬಳ ಆಯೋಜನೆ ವಿರೋಧಿಸಿ ಕಳೆದ ಮೂರು ತಿಂಗಳಿಂದ ಹೋರಾಟ ಮತ್ತು ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರು ಜಿಲ್ಲೆ ಹಾಗೂ ನಾಡಿನ ಹಲವಾರು ಸಾಹಿತಿಗಳು ಮತ್ತು ಕಲಾವಿದರು ಕೂಡ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲ ಹೋರಾಟ ಮತ್ತು ಪ್ರತಿಭಟನೆ ನಡೆಸಿದರೂ ಸರ್ಕಾರ ತನ್ನ ನಿರ್ಧಾರಕ್ಕೆ ಬದ್ಧವಾಗಿದೆ. ಕಂಬಳ ಆಯೋಜಕರೂ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಆದ್ದರಿಂದ ಕೊನೆಯ ಪ್ರಯತ್ನವಾಗಿ ಕರಾವಳಿಯ ಜನರು ಹಾಗೂ ಕಂಬಳದ ಕೋಣಗಳ ಮಾಲೀಕರಿಗೆ ಮನವಿ ಮಾಡಲು ಮಂಗಳೂರಿಗೆ ಬಂದಿದ್ದೇವೆ. ಕಂಬಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಸಿರುವ ಕೋಣಗಳ ಮಾಲೀಕರು ನಮ್ಮ ಮನವಿಗೆ ಸ್ಪಂದಿಸಿ, ನೋಂದಣಿ ರದ್ದುಗೊಳಿಸಿ ಕಂಬಳದಿಂದ ಹಿಂದೆ ಸರಿಯಬೇಕು ಎಂದು ಅತ್ಯಂತ ವಿನಯಪೂರ್ವಕವಾಗಿ ವಿನಂತಿಸುತ್ತೇವೆ. ಕರಾವಳಿಯ ಪ್ರಜ್ಞಾವಂತ ಜನರು ಕೋಣಗಳ ಮಾಲೀಕರ ಮನವೊಲಿಸಿ, ಕಂಬಳದಿಂದ ಹಿಂದೆ ಸರಿಯುವಂತೆ ಮಾಡಬೇಕು ಎಂದು ಎ.ಟಿ. ರಾಮಸ್ವಾಮಿ ಕಳಕಳಿಯಿಂದ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ‘ಪರಿಸರಕ್ಕಾಗಿ ನಾವು’ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ, ಪರಿಸರ ಹೋರಾಟಗಾರ್ತಿ ಲೀಲಾ ಶಿವಕುಮಾರ್, ಲೇಖಕಿ ಹಾಗೂ ಅಂಕಣಗಾರ್ತಿ ಕುಸುಮ ಆಯರಹಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

mysuruKambalastatedrought
share
ವಾರ್ತಾಭಾರತಿ
ವಾರ್ತಾಭಾರತಿ
Next Story
X