Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ದ.ಕ....

ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಲ್ಲಿ 9,064 ಮತದಾರರು ಹೊರಕ್ಕೆ

ಜಿಲ್ಲೆಯಲ್ಲಿ ಒಟ್ಟು 16,78,448 ಮತದಾರರು: ದರ್ಶನ್ ಎಚ್.ವಿ.

ವಾರ್ತಾಭಾರತಿವಾರ್ತಾಭಾರತಿ27 Oct 2026 1:39 PM IST
share
ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಲ್ಲಿ 9,064 ಮತದಾರರು ಹೊರಕ್ಕೆ

ಮಂಗಳೂರು, ಅ.27: ರಾಜ್ಯದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಪ್ರಕ್ರಿಯೆ ಪೂರ್ಣಗೊಂಡಿದೆ. ಇದರನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ 9,064 ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲೆಯಲ್ಲಿ ಪ್ರಕಟಗೊಂಡಿರುವ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 16,78,448 ಮತದಾರರಿದ್ದಾರೆ. ಈ ಪೈಕಿ 8,23,198 ಪುರುಷರು ಹಾಗೂ 8,55,232 ಮಹಿಳಾ ಮತದಾರರಾಗಿದ್ದಾರೆ. 18 ತೃತೀಯ ಲಿಂಗಿ ಮತದಾರರಿದ್ದಾರೆ ಎಂದು ಹೇಳಿದರು.

ಆಗಸ್ಟ್ 24ರಂದು ಪ್ರಕಟಿಸಲಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 16,46,387 ಮತದಾರರಿದ್ದರು. ಅಂತಿಮ ಪಟ್ಟಿಯಲ್ಲಿ ನೋಟಿಸ್ ನೀಡಿದ ಬಳಿಕ 32,061 ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದವರು ವಿವರಿಸಿದರು.

ಮರಣ ಹಾಗೂ ಖಾಯಂ ಆಗಿ ಸ್ಥಳಾಂತರಗೊಂಡವರು ಸೇರಿ ಒಟ್ಟು 9,064 ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ತಿದ್ದುಪಡಿಗೆ ಸಂಬಂಧಿಸಿ 53,806 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಧಾನಸಭಾ ಕ್ಷೇತ್ರವಾರು ಅಂತಿಮ ಮತದಾರರ ಸಂಖ್ಯೆ:

• ಬೆಳ್ತಂಗಡಿ: 2,22,254

• ಮೂಡುಬಿದಿರೆ: 1,97,712

• ಮಂಗಳೂರು ನಗರ ಉತ್ತರ: 2,27,530

• ಮಂಗಳೂರು ನಗರ ದಕ್ಷಿಣ: 2,12,512

• ಮಂಗಳೂರು: 1,98,956

• ಬಂಟ್ವಾಳ: 2,15,710

• ಪುತ್ತೂರು: 2,04,181

• ಸುಳ್ಯ: 1,99,593

ಸೇರ್ಪಡೆ ಮತ್ತು ರದ್ದತಿ ವಿವರ:

ಕರಡು ಪಟ್ಟಿ ಪ್ರಕಟಗೊಂಡ ನಂತರ ಬಂದ ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ:

ಹೊಸ ಸೇರ್ಪಡೆ: 41,125 ಮತದಾರರು (ನಮೂನೆ-6ರಲ್ಲಿ 32,986, ನಮೂನೆ-6Aರಲ್ಲಿ 357 ಹಾಗೂ ನಮೂನೆ-8ರಲ್ಲಿ 7,782).

ಯುವ ಹಾಗೂ ವಿಶೇಷ ವರ್ಗದ ಮತದಾರರು:

• ಯುವ ಮತದಾರರು (18-19 ವರ್ಷ): ಜಿಲ್ಲೆಯಲ್ಲಿ ಒಟ್ಟು 25,326 ಯುವ ಮತದಾರರಿದ್ದಾರೆ (ಕರಡು ಪಟ್ಟಿಯಲ್ಲಿದ್ದ 12,418 ರ ಜೊತೆಗೆ ಹೊಸದಾಗಿ 12,908 ಯುವ ಮತದಾರರು ಸೇರ್ಪಡೆಯಾಗಿದ್ದಾರೆ).

• ಅಂಗವಿಕಲ ಮತದಾರರು: ಒಟ್ಟು 13,420 (7,607 ಪುರುಷರು, 5,813 ಮಹಿಳೆಯರು).

• 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು: ಒಟ್ಟು 14,086 ಮತದಾರರು.

• ಅನಿವಾಸಿ ಭಾರತೀಯ (NRI) ಮತದಾರರು: ಒಟ್ಟು 366 (210 ಪುರುಷರು, 156 ಮಹಿಳೆಯರು).

• ಸೇವಾ ಮತದಾರರು (Service Electors): ಒಟ್ಟು 449 ಮತದಾರರು.

ಆಕ್ಷೇಪಣೆ ಹಾಗೂ ವಿಚಾರಣೆ ವಿಲೇವಾರಿ:

ಪರಿಷ್ಕರಣಾ ಅವಧಿಯಲ್ಲಿ ಸ್ವೀಕೃತಗೊಂಡ ಒಟ್ಟು 1,50,131 ನೋಟೀಸ್ ಮತ್ತು ವಿಚಾರಣೆಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲಾಗಿದ್ದು, ಯಾವುದೇ ಪ್ರಕರಣ ಬಾಕಿ ಉಳಿದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಮಾಹಿತಿ ಹಾಗೂ ಪರಿಶೀಲನೆಗೆ ಅವಕಾಶ:

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿತವಾಗಿರುವ ಬಗ್ಗೆ ಪರಿಶೀಲಿಸಲು ಈ ಕೆಳಗಿನ ಮಾರ್ಗಗಳನ್ನು ಬಳಸಬಹುದು:

• ಮತದಾರರ ನೋಂದಣಾಧಿಕಾರಿ (ERO) / ಸಹಾಯಕ ಮತದಾರರ ನೋಂದಣಾಧಿಕಾರಿ (AERO) ಕಚೇರಿ.

• ಆಯಾ ವ್ಯಾಪ್ತಿಯ ಮತಗಟ್ಟೆ ಮಟ್ಟದ ಅಧಿಕಾರಿ (BLO).

• ವೆಬ್ಸೈಟ್ಗಳು: www.ceokarnataka.kar.nic.in, https://voters.eci.gov.in ಮತ್ತು www.dk.nic.in.

• ಸಹಾಯವಾಣಿ: 1950 ಉಚಿತ ಕರೆ ಸಂಖ್ಯೆಗೆ ಸಂಪರ್ಕಿಸಬಹುದು.

ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇನ್ನು ಮುಂದೆ ಕೂಡ ಅರ್ಹ ನಾಗರಿಕರು ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಉಪಸ್ಥಿತರಿದ್ದರು.

Tags

Final Voter ListSIRVoters ExcludedDakshina Kannada District
share
ವಾರ್ತಾಭಾರತಿ
ವಾರ್ತಾಭಾರತಿ
Next Story
X