Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲೂ...

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲೂ ‘ಆ್ಯಂಬುಲೆನ್ಸ್’ ಸೇವೆ: ಉಳ್ಳಾಲ ಮೀನುಗಾರರ ಹೊಸ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ4 Feb 2026 12:28 AM IST
share
ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲೂ ‘ಆ್ಯಂಬುಲೆನ್ಸ್’ ಸೇವೆ: ಉಳ್ಳಾಲ ಮೀನುಗಾರರ ಹೊಸ ಪ್ರಯತ್ನ

ಮಂಗಳೂರು, ಫೆ. 3: ರಸ್ತೆ ಅಪಘಾತಗಳು ಅಥವಾ ತುರ್ತು ಆರೋಗ್ಯ ಸಮಸ್ಯೆಗಳ ಸಂದರ್ಭ ಆ್ಯಂಬುಲೆನ್ಸ್‌ಗಳು ಸೈರನ್ ಮೊಳಗಿಸುತ್ತಾ ಧಾವಿಸಿ ಜೀವ ರಕ್ಷಣೆ ಮಾಡುವ ದೃಶ್ಯ ಸಾಮಾನ್ಯ. ಆದರೆ ಸಮುದ್ರ ಮಧ್ಯೆ ಅನಾಹುತ ಸಂಭವಿಸಿದಾಗ ಗಾಯಾಳುಗಳನ್ನು ತಕ್ಷಣ ದಡಕ್ಕೆ ತಲುಪಿಸುವ ವ್ಯವಸ್ಥೆಯ ಕೊರತೆಯಿಂದ ಅನೇಕ ಜೀವಹಾನಿ ಗಳು ಸಂಭವಿಸುತ್ತಿದ್ದವು. ಈ ಸಮಸ್ಯೆಗೆ ಪರಿಹಾರವಾಗಿ ಮಂಗಳೂರಿನ ಉಳ್ಳಾಲದ ಮೀನುಗಾರರು ರಾಜ್ಯದಲ್ಲೇ ಮೊದಲ ಬಾರಿಗೆ ‘ಬೋಟ್ ಆ್ಯಂಬುಲೆನ್ಸ್’ ಸೇವೆ ಆರಂಭಿಸಿ ಗಮನ ಸೆಳೆದಿದ್ದಾರೆ.

ಉಳ್ಳಾಲ ವಲಯ ನಾಡದೋಣಿ ಮತ್ತು ಗಿಲ್‌ ಟ್ ಮೀನುಗಾರರ ಸಂಘದ ವತಿಯಿಂದ ಈ ತುರ್ತು ಬೋಟ್ ಸೇವೆ ಆರಂಭಗೊಂಡಿದೆ. ಸಮುದ್ರದಲ್ಲಿ ದೋಣಿ ಮಗುಚುವುದು, ಬೆಂಕಿ ಅವಘಡಗಳು ಸಂಭವಿಸುವುದು ಅಥವಾ ಮೀನುಗಾರರಿಗೆ ಹಠಾತ್ ಅನಾರೋಗ್ಯ ಉಂಟಾಗುವ ಸಂದರ್ಭಗಳಲ್ಲಿ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿ ದಡಕ್ಕೆ ತಲುಪಿಸುವುದು ಇದರ ಉದ್ದೇಶ. ಕರಾವಳಿ ಭಾಗದಲ್ಲಿ ಸೀ ಆ್ಯಂಬುಲೆನ್ಸ್ ಅಗತ್ಯವಿದೆ ಎಂಬ ಬೇಡಿಕೆ ದಶಕಗಳಿಂದ ಕೇಳಿಬರುತ್ತಿದ್ದರೂ, ತಾಂತ್ರಿಕ ಹಾಗೂ ಆರ್ಥಿಕ ಕಾರಣಗಳಿಂದ ಸರ್ಕಾರದ ಯೋಜನೆ ಜಾರಿಯಾಗಿರಲಿಲ್ಲ. ಸರ್ಕಾರದ ನೆರವಿಗೆ ಕಾಯದೆ ಮೀನುಗಾರರೇ ಒಗ್ಗೂಡಿ ಈ ಸೇವೆಯನ್ನು ಆರಂಭಿಸಿರುವುದು ವಿಶೇಷವಾಗಿದೆ.

ವಿಶೇಷ ವಿನ್ಯಾಸದಲ್ಲಿ ಸಿದ್ಧಪಡಿಸಿದ ಬೋಟ್‌ ನಲ್ಲಿ ಸೈರನ್, ಕೆಂಪು ಎಚ್ಚರಿಕೆ ದೀಪಗಳು, ಸ್ಟ್ರೆಚರ್, ಆಮ್ಲಜನಕ ಸಿಲಿಂಡರ್, ಪ್ರಥಮ ಚಿಕಿತ್ಸಾ ಕಿಟ್ ಹಾಗೂ ಲೈಫ್ ಜಾಕೆಟ್‌ ಗಳನ್ನು ಅಳವಡಿಸಲಾಗಿದೆ. ಸೈರನ್ ಶಬ್ದ ಕೇಳುತ್ತಿದ್ದಂತೆಯೇ ಇತರೆ ದೋಣಿಗಳು ದಾರಿ ಬಿಡುವಂತೆ ವ್ಯವಸ್ಥೆ ಮಾಡಲಾಗಿದೆ. ಮೈಕ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆಯೂ ಇದ್ದು, ತೀರ ಪ್ರದೇಶದವರೊಂದಿಗೆ ಸಂಪರ್ಕ ಸಾಧಿಸಲು ಇದು ಸಹಕಾರಿಯಾಗಿದೆ.

ಸೇವೆಯ ನಿರ್ವಹಣೆಗೆ ಮೂವರು ತರಬೇತಿ ಪಡೆದ ಸಿಬ್ಬಂದಿಯನ್ನು ನೇಮಿಸಲಾಗಿದೆ. ಇವರು ಸಮುದ್ರದ ಕಠಿಣ ಪರಿಸ್ಥಿತಿಗಳಲ್ಲೂ ಈಜಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ದೋಣಿಗಳು ಮಗುಚಿದ ಸಂದರ್ಭಗಳಲ್ಲಿ ಉಸಿರಾಟದ ತೊಂದರೆಯಿಂದ ಸಂಭವಿಸುವ ಸಾವುಗಳನ್ನು ತಪ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಬೋಟ್‌ ನಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಶೀಘ್ರವಾಗಿ ದಡಕ್ಕೆ ತಲುಪಿಸಲು ಸಾಧ್ಯವಾಗುತ್ತಿದೆ.

ಪ್ರಸ್ತುತ ಒಂದು ಬೋಟ್ ಆ್ಯಂಬುಲೆನ್ಸ್ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದ ಆರ್ಥಿಕ ನೆರವು ದೊರೆತಲ್ಲಿ ಇನ್ನಷ್ಟು ಆಧುನಿಕ ಉಪಕರಣಗಳನ್ನು ಅಳವಡಿಸಿ ಜಿಲ್ಲೆಯಾದ್ಯಂತ ಸೇವೆಯನ್ನು ವಿಸ್ತರಿಸುವ ಗುರಿಯನ್ನು ಮೀನುಗಾರರ ಸಂಘ ಹೊಂದಿದೆ. ಕರಾವಳಿ ಭಾಗದ ಜೀವ ರಕ್ಷಣೆಯಲ್ಲಿ ಈ ಪ್ರಯತ್ನ ಮಾದರಿಯಾಗಿದೆ.

Tags

ambulanceserviceseaeffortUllalfishermen
share
ವಾರ್ತಾಭಾರತಿ
ವಾರ್ತಾಭಾರತಿ
Next Story
X