ಮನಪಾ ಮಾಜಿ ಮೇಯರ್ ರಜನಿ ದುಗ್ಗಣ್ಣ ನಿಧನ

ಮಂಗಳೂರು, ಜು.9: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ರಜನಿ ದುಗ್ಗಣ್ಣ(68) ರವಿವಾರ ನಿಧನರಾಗಿದ್ದಾರೆ. ಕೆಲ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಿಜೆಪಿ ನಾಯಕಿಯಾಗಿದ್ದ ರಜನಿ ದುಗ್ಗಣ್ಣ ಮಂಗಳೂರು ಮಹಾನಗರ ಪಾಲಿಕೆಯ 8ನೇ (ಹೊಸಬೆಟ್ಟು ) ವಾರ್ಡ್ ಹಾಗೂ ಮುಂಚೂರಿನ 2ನೇ ವಾರ್ಡ್ನ ಮನಪಾ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು.
2012ರಲ್ಲಿ ಮಂಗಳೂರು ಪಾಲಿಕೆಯ ಮೇಯರ್ ಆಗಿ ಮಂಗಳೂರು ನಗರದ ಅಭಿವೃದ್ಧಿಗೆ ಶ್ರಮಿಸಿದ್ದರು.
ಮೃತರು ಓರ್ವ ಪುತ್ರ, ಮೂವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಇಂದು ಸಂಜೆ 5 ಗಂಟೆಗೆ ಮುಂಚೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
Next Story