Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಣ ಪಡೆದು ಹಜ್ ಯಾತ್ರಿಕರಿಗೆ ಆಹಾರ ನೀಡದೆ...

ಹಣ ಪಡೆದು ಹಜ್ ಯಾತ್ರಿಕರಿಗೆ ಆಹಾರ ನೀಡದೆ ವಂಚನೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ31 May 2026 8:07 PM IST
share
ಹಣ ಪಡೆದು ಹಜ್ ಯಾತ್ರಿಕರಿಗೆ ಆಹಾರ ನೀಡದೆ ವಂಚನೆ: ಆರೋಪ
► ದ.ಕ. ಜಿಲ್ಲೆಯ ಹಲವಾರು ಮಂದಿ ಆಹಾರಕ್ಕಾಗಿ ಅಲೆದಾಟ ► ಇದಕ್ಕೂ ನಮಗೂ ಸಂಬಂಧವಿಲ್ಲ: ಮುಹಮ್ಮದ್ ಹನೀಫ್ ಹಾಜಿ

ಮಂಗಳೂರು, ಮೇ 31: ಹಜ್ ಕಮಿಟಿಯ ಮೂಲಕ ಪವಿತ್ರ ಹಜ್‌ಯಾತ್ರೆಗೆ ತೆರಳಿದ ದ.ಕ.ಜಿಲ್ಲೆಯ ಹಲವಾರು ಮಂದಿಗೆ ಹಜ್-ಉಮ್ರಾ ಟೂರ್ ಸಂಸ್ಥೆಯೊಂದು ಹಣ ಪಡೆದು ಸಕಾಲಕ್ಕೆ ಆಹಾರ ನೀಡದೆ ವಂಚಿಸಿರುವ ಗಂಭೀರ ಆರೋಪ ಕೇಳಿ ಬಂದಿದೆ.

ಹಲವು ಪ್ರಮುಖ ಸಂಘಟನೆಗಳಲ್ಲಿ ಸಕ್ರಿಯವಾಗಿರುವ ವ್ಯಕ್ತಿಯೊಬ್ಬರು ಈ ವಂಚನೆಯ ಹಿಂದೆ ಇದ್ದಾರೆ ಎಂದು ಹೇಳಲಾಗುತ್ತಿದ್ದು, ಹಜ್ಜಾಜ್‌ಗಳ ನೋವಿನಿಂದ ಕೂಡಿದ ಧ್ವನಿ ಸಂದೇಶಗಳು ಮತ್ತು ವೀಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಸದ್ರಿ ವ್ಯಕ್ತಿಯು ವಾಟ್ಸ್ ಆ್ಯಪ್ ಗ್ರೂಪೊಂದನ್ನು ರಚಿಸಿ ಹಜ್-ಉಮ್ರಾ ಟೂರ್ ಸಂಸ್ಥೆಯೊಂದರಿಂದ ಹಜ್ ಕಮಿಟಿ ಮೂಲಕ ಹೋಗುವ ಯಾತ್ರಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿ ಪ್ರತಿಯೊಬ್ಬರಿಂದಲೂ 22 ಸಾವಿರ ರೂ. ಮುಂಗಡವಾಗಿ ಪಡೆದುಕೊಂಡಿದ್ದರು ಎನ್ನಲಾಗಿದೆ. ಆದರೆ ಯಾತ್ರಿಕರಿಗೆ ಮಕ್ಕಾದಲ್ಲಿ ಸಕಾಲಕ್ಕೆ ಊಟದ ವ್ಯವಸ್ಥೆ ಮಾಡದೆ ಸದ್ರಿ ವ್ಯಕ್ತಿಯು ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಮ್ಮದು ಸೌದಿ ಸರಕಾರದಿಂದಲೇ ಲೈಸನ್ಸ್ ಹೊಂದಿರುವ ಕ್ಯಾಟರಿಂಗ್ ಆಗಿದೆ. ನಿಮಗೆ ಕ್ಲಪ್ತ ಸಮಯಕ್ಕೆ ಆಹಾರದ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸದ್ರಿ ವ್ಯಕ್ತಿ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ದ.ಕ.ಜಿಲ್ಲೆಯಿಂದ ಸುಮಾರು 1300ಕ್ಕೂ ಅಧಿಕ ಮಂದಿ ಹಜ್ ಕಮಿಟಿ ಮೂಲಕ ಹಜ್ ಯಾತ್ರೆ ಕೈಗೊಂಡಿದ್ದು, ಈ ವ್ಯಕ್ತಿಯ ಮಾತು ನಂಬಿ 22 ಸಾವಿರ ರೂ. ಪಾವತಿಸಿ ಬಂದ ನಮಗೆ ಈವರೆಗೆ ಸರಿಯಾದ ಆಹಾರ ಸಿಗಲೇ ಇಲ್ಲ. ಪ್ರಶ್ನಿಸಿದರೆ ಸರಿಯಾಗಿ ಸ್ಪಂದಿಸಲಿಲ್ಲ. ನಾವೀಗ ಉಪಾಯವಿಲ್ಲದೆ ಬೇರೆ ಕಡೆ ಹೋಗಿ ಆಹಾರಕ್ಕಾಗಿ ಸರದಿ ಸಾಲಿ ನಲ್ಲಿ ನಿಲ್ಲುವಂತಾಗಿದೆ ಎಂದು ಕೆಲವು ಹಜ್ಜಾಜಿಗಳು ಅದೇ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿ ದ್ದರು. ಹಜ್ ಯಾತ್ರಿಕರ ಸೇವೆಯ ಹೆಸರಿನಲ್ಲಿ ಹಣ ವಸೂಲಿ ಮಾಡಿ ನಮ್ಮನ್ನು ವಂಚಿಸಿದ್ದಾರೆ ಎಂದೂ ಹಜ್ಜಾಜ್‌ಗಳು ಆರೋಪಿಸಿದ್ದಾರೆ. ಇದರ ಧ್ವನಿ ಸಂದೇಶ ಮತ್ತು ವೀಡಿಯೋ ವೈರಲ್ ಆಗುತ್ತಲೇ ಇದೀಗ ವಾಟ್ಸ್‌ಆ್ಯಪ್ ಗ್ರೂಪನ್ನು ಆಡ್ಮಿನ್ ಓನ್ಲಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

► ಇದಕ್ಕೂ ನಮಗೂ ಸಂಬಂಧವಿಲ್ಲ: ಮುಹಮ್ಮದ್ ಹನೀಫ್ ಹಾಜಿ

ಈ ಬಾರಿ ದ.ಕ.ಜಿಲ್ಲೆಯಿಂದ 1300ಕ್ಕೂ ಅಧಿಕ ಮಂದಿ ಹಜ್ ಯಾತ್ರೆ ಕೈಗೊಂಡಿದ್ದಾರೆ. ಆ ಪೈಕಿ 800ಕ್ಕೂ ಅಧಿಕ ಮಂದಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ನೆರವು ನೀಡಿದೆ. ಹಜ್ ಯಾತ್ರಾರ್ಥಿಗಳಿಗೆ ತಮ್ಮ ಕೊಠಡಿಗಳಲ್ಲಿ ಆಹಾರ ತಯಾರಿಸುವ ಯಾವುದೇ ವ್ಯವಸ್ಥೆ ಇಲ್ಲದ ಕಾರಣ ಕೆಲವು ಉಮ್ರಾ ಟೂರ್ ಸಂಸ್ಥೆಯವರು ಊಟದ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿದ್ದರು. ಅದರಂತೆ ಕೆಲವು ಯಾತ್ರಿಕರು ಊಟಕ್ಕಾಗಿ ಆ ಸಂಸ್ಥೆಯವರಿಗೆ ಹಣವನ್ನು ಪಾವತಿಸಿ ದ್ದರು. ಆಹಾರ ನೀಡುವ ವ್ಯವಸ್ಥೆಯಲ್ಲಿ ಏನಾದರೂ ಹೆಚ್ಚು ಕಡಿಮೆಯಾದಲ್ಲಿ ಆ ಸಂಸ್ಥೆಯವರು ಹಾಗೂ ಹಾಜಿಗಳು ನೇರ ಹೊಣೆಯಾಗಿರುತ್ತಾರೆ ಎಂಬುದನ್ನು ನಾವು ಆರಂಭದಲ್ಲೇ ತಿಳಿಸಿದ್ದೆವು. ಆದರೆ ಯಾತ್ರಿಕರು ನಮ್ಮ ಸೂಚನೆ ಮೀರಿ ಖಾಸಗಿ ವ್ಯಕ್ತಿಗೆ ಹಣ ಪಾವತಿಸಿದ್ದಾರೆ. ಹಾಗೇ ಇದೀಗ ಊಟ ನೀಡದೆ ವಂಚಿಸಿರುವ ಬಗ್ಗೆ ನಮಗೂ ದೂರು ಬಂದಿದೆ. ಈ ಸಂಸ್ಥೆಯೊಂದಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಗೆ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ತಿಳಿಸಿದ್ದಾರೆ.



Tags

FraudmoneyprovidingfoodHajj pilgrims
share
ವಾರ್ತಾಭಾರತಿ
ವಾರ್ತಾಭಾರತಿ
Next Story
X