Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. Mangaluru : ಗ್ಲ್ಯಾನಿಶ್ ಮಾರ್ಟಿಸ್‌ಗೆ...

Mangaluru : ಗ್ಲ್ಯಾನಿಶ್ ಮಾರ್ಟಿಸ್‌ಗೆ 2026 ನೇ ಸಾಲಿನ ಕಿಟಾಳ್ ಯುವ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ24 Sept 2026 12:57 PM IST
share
Mangaluru : ಗ್ಲ್ಯಾನಿಶ್ ಮಾರ್ಟಿಸ್‌ಗೆ 2026 ನೇ ಸಾಲಿನ ಕಿಟಾಳ್ ಯುವ ಪುರಸ್ಕಾರ

ಮಂಗಳೂರು: 2026 ನೇ ಲಿಯೋ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರಕ್ಕೆ ಯುವ ಕವಿ ಮತ್ತು ಕಥೆಗಾರ ಗ್ಲ್ಯಾನಿಶ್ ಜ್ಯೂಡ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ.

2011 ರಿಂದ, ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕೊಂಕಣಿ ಸಾಹಿತಿ ಮತ್ತು ವಿಮರ್ಶಕ ಎಚ್. ಎಮ್. ಪೆರ್ನಾಲ್ ಅವರು ಸಂಪಾದಿಸಿ ಪ್ರಕಟಿಸುತ್ತಿರುವ ಕಿಟಾಳ್ (www.kittall.com) ಅಂತರ್ಜಾಲ ಸಾಹಿತ್ಯ ಪತ್ರಿಕೆಯು, ಯುವ ಬರಹಗಾರನ್ನು ಗುರುತಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2012 ನೇ ವರ್ಷದಿಂದ ಲಿಯೊ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರವನ್ನು ನೀಡುತ್ತಾ ಬರುತ್ತಿದೆ.

ಈ ಪ್ರಶಸ್ತಿಯನ್ನು ಅಬುದಾಬಿಯ ಅನಿವಾಸಿ ಉದ್ಯಮಿ ಮತ್ತು ಕೊಂಕಣಿ ಸಮರ್ಥಕ ಲಿಯೋ ರೊಡ್ರಿಗಸ್ ಕುಟುಂಬ ಪ್ರಾಯೋಜಿಸುತ್ತಿದ್ದು, ಪ್ರಶಸ್ತಿಯು 25,000 ನಗದು ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

ಪ್ರಶಸ್ತಿ ಪ್ರಧಾನ ಸಮಾರಂಭವು ಶನಿವಾರ ಅಕ್ಟೋಬರ್ 3 ರಂದು, ಹಂಪನಕಟ್ಟೆ ಎಂಸಿಸಿ ಬ್ಯಾಂಕಿನ ಸಭಾಗೃಹದಲ್ಲಿ ಸಂಜೆ 6.30 ಕ್ಕೆ ನಡೆಯಲಿದ್ದು, ಲಿಯೋ ರೊಡ್ರಿಗಸ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕೊಂಕಣಿ ಭಾಷೆಯ ಬರಹಗಾರರಾದ ವಿಲ್ಸನ್ ಕಟೀಲ್, ವಿಲ್ಮ ಬಂಟ್ವಾಳ್, ಸ್ಟ್ಯಾನಿ ಬೇಳಾ, ರೋಶು ಬಜ್ಪೆ, ಜೊ.ಸಿ.ಸಿದ್ದಕಟ್ಟೆ, ಕಿರಣ್ ನಿರ್ಕಾಣ್ ಮುಂತಾದವರು ಈ ಹಿಂದೆ ಕಿಟಾಳ್ ಯುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮೂಡಬಿದ್ರೆ ಅಲಂಗಾರಿನ ಲವೀನಾ ಮತ್ತು ಗಿಲ್ಬರ್ಟ್ ಮಾರ್ಟಿಸ್ ದಂಪತಿಯ ಮಗನಾದ ಗ್ಲಾನಿಶ್ ಅವರು ಆಳ್ವಾಸ್ ಕಾಲೇಜಿನ ಹಳೆವಿದ್ಯಾರ್ಥಿ. ಕಳೆದ ಒಂದು ದಶಕದಿಂದ ಕೊಂಕಣಿಯಲ್ಲಿ ಸತತವಾಗಿ ಬರೆಯುತ್ತಿರುವ ಇವರು ಕೊಂಕಣಿಯಲ್ಲಿ ಭರವಸೆಯ ಯುವ ಲೇಖಕ ಮತ್ತು ಸಂಶೋಧಕರಾಗಿ ಗುರುತಿಸಿಕೊಂಡಿದ್ದಾರೆ. 2024 ರಲ್ಲಿ ಅವರ ಚೊಚ್ಚಲ ಕಥಾಸಂಕಲನ ’ಹೆರಿಡಿಟಿ’ ಪ್ರಕಟವಾಗಿದ್ದು, ಈ ವರೆಗೆ ಕೊಂಕಣಿಯಲ್ಲಿ ಸುಮಾರು 25 ಸಣ್ಣಕಥೆಗಳು, 60 ಕವನಗಳು ಮತ್ತು 20 ಲೇಖನಗಳನ್ನು ಬರೆದಿರುತ್ತಾರೆ. 2025 ರಲ್ಲಿ ಅವರ ಗೀತ ಸಾಹಿತ್ಯಕ್ಕೆ 'ECW ಬೆಸ್ಟ್ ಮಲ್ಟಿಲಿಂಗ್ವಲ್ ಲಿರಿಸಿಸ್ಟ್ ಪ್ರಶಸ್ತಿ' ಬಂದಿದೆ.

ಕೊಂಕಣಿಯ ಜೊತೆಗೆ ಇಂಗ್ಲಿಷ್, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲೂ ಬರೆಯುವ ಗ್ಲಾನಿಶ್, ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಡಾ| ಸಂತೋಷ್ ಎಲ್. ಗಾಂವ್ಕರ್ ಇವರ ಮಾರ್ಗದರ್ಶನದಲ್ಲಿ ಪ್ರಸ್ತುತ ಪಿಎಚ್‌ಡಿ ಅಧ್ಯಯನ ಮಾಡುತ್ತಿದ್ದಾರೆ. ಆರ್ಗ್ಯಾನಿಕ್ ಮತ್ತು ಮೆಡಿಸಿನಲ್ ಕೆಮಿಸ್ಟ್ರಿ ಕ್ಷೇತ್ರಕ್ಕೆ ಸಂಬಂಧಿಸಿ ಅಧ್ಯಯನ ಮಾಡುತ್ತಿರುವ ಗ್ಲಾನಿಶ್ ಅವರು, 2024 ರಿಂದ 25 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಕಟಣೆಗಳನ್ನು ಬರೆದಿರುತ್ತಾರೆ. ರಾಸಾಯನಿಕ ವಿಜ್ಞಾನಗಳ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಗಾಗಿ ಲಂಡನ್‌ನ ರಾಯಲ್ ಸೊಸೈಟಿ ಆಫ್ ಕೆಮಿಸ್ಟ್ರಿ (AMRSC) ಅಸೋಸಿಯೇಟ್ ಸದಸ್ಯರಾಗಿ ಅವರು ಇತ್ತೀಚೆಗೆ ಸೇರ್ಪಡೆಯಾಗಿದ್ದಾರೆ.

Tags

ManagluruGlanish MartisKittall Yuva Award
share
ವಾರ್ತಾಭಾರತಿ
ವಾರ್ತಾಭಾರತಿ
Next Story
X