ಗುರುಪುರ | ‘ಸಂಘಟನ್ ಸೃಜನ್ ಅಭಿಯಾನ–2’ ಸಭೆ; ಪಕ್ಷದ ಸಂಘಟನೆ ಬಲವರ್ಧನೆಗೆ ಇನಾಯತ್ ಅಲಿ ಕರೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಗುರುಪುರ ಬ್ಲಾಕ್‌ನಲ್ಲಿ ಆಯೋಜಿಸಲಾಗಿದ್ದ ‘ಸಂಘಟನ್ ಸೃಜನ್ ಅಭಿಯಾನ–2’ರ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮರಾಜ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು, ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಸಕ್ರಿಯವಾಗಿ ಸಂಘಟಿಸುವುದು ಹಾಗೂ ಮುಂಬರುವ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜನರ ಬಳಿಗೆ ಕೊಂಡೊಯ್ಯುವ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
“ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಅದರ ಕಾರ್ಯಕರ್ತರು. ಬೂತ್ ಮಟ್ಟದಿಂದಲೇ ಪಕ್ಷವನ್ನು ಬಲಿಷ್ಠಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಕಾರ್ಯಕರ್ತರ ಪರಿಶ್ರಮ, ಬದ್ಧತೆ ಮತ್ತು ಒಗ್ಗಟ್ಟಿನ ಮೂಲಕ ಮಾತ್ರ ಪಕ್ಷದ ಸಂಘಟನೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯ. ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷದ ಸಿದ್ಧಾಂತ ಹಾಗೂ ಜನಪರ ಆಶಯಗಳನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಮುನ್ನಡೆಯುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸೋಣ,” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ವೀಕ್ಷಕರಾದ ಡಾ. ಅಂಶುಮ್ನಾಥ್, ಎಚ್.ಎಂ. ಸತೀಶ್, ಸದಾಶಿವ್, ಗುರುಪುರ ಬ್ಲಾಕ್ ಅಧ್ಯಕ್ಷ ಬಿ ಎಲ್ ಪಿ ಪದ್ಮನಾಭ ಕೋಟ್ಯಾನ್ ಸೇರಿದಂತೆ ಪಕ್ಷದ ಮುಖಂಡರು, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದು, ಪಕ್ಷದ ಸಂಘಟನೆಯನ್ನು ಬಲಪಡಿಸುವ ಕುರಿತು ಚರ್ಚಿಸಿದರು.
ಕಾರ್ಯಕರ್ತರ ಒಗ್ಗಟ್ಟು, ಸಂಘಟಿತ ಪ್ರಯತ್ನ ಮತ್ತು ಜನರೊಂದಿಗಿನ ನಿರಂತರ ಸಂಪರ್ಕವೇ ಕಾಂಗ್ರೆಸ್ ಪಕ್ಷದ ಮುನ್ನಡೆಗೆ ಪ್ರಮುಖ ಶಕ್ತಿಯಾಗಲಿದೆ ಎಂಬ ಆಶಯದೊಂದಿಗೆ ಸಭೆ ನಡೆಯಿತು.






