ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ಪೆರ್ಲಾಪು ಆಯ್ಕೆ

ಬಂಟ್ವಾಳ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಂಟ್ವಾಳ ತಾಲೂಕಿನ ಹನೀಫ್ ಪೆರ್ಲಾಪು ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಹಾಗೂ ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ ಬಿ.ರಮಾನಾಥ ರೈ ಅವರ ಶಿಫಾರಸ್ಸಿನಂತೆ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಅಧ್ಯಕ್ಷ ಅವರು ಹನೀಫ್ ಪೆರ್ಲಾಪು ಅವರನ್ನು ರಾಜ್ಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದ್ದಾರೆ.
ನೇಮಕಾತಿ ಆದೇಶ ಪತ್ರವನ್ನು ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹನೀಫ್ ಪೆರ್ಲಾಪು ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷೆ ಹರಿಣಿ ಗೌಡ, ಸರಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ ಸಾದಿಕ್ ಬರೆಪಾಡಿ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಉನೈಸ್ ಉಪಸ್ಥಿತರಿದ್ದರು.
Next Story







