Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. "ರಾಜಕಾರಣದಲ್ಲಿ ದ್ವೇಷ ಸರಿಯಲ್ಲ":...

"ರಾಜಕಾರಣದಲ್ಲಿ ದ್ವೇಷ ಸರಿಯಲ್ಲ": ಬಳ್ಳಾರಿ ಘಟನೆ ಬಗ್ಗೆ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ3 Jan 2026 2:56 PM IST
share
ರಾಜಕಾರಣದಲ್ಲಿ ದ್ವೇಷ ಸರಿಯಲ್ಲ: ಬಳ್ಳಾರಿ ಘಟನೆ ಬಗ್ಗೆ ಯು.ಟಿ.ಖಾದರ್
"ಶಾಸಕರಾಗಿದ್ದುಕೊಂಡು ಒಬ್ಬರಿಗೊಬ್ಬರು ಪರಸ್ಪರ ಬೆದರಿಕೆ ಹಾಕುವುದು ತಪ್ಪು ನಡವಳಿಕೆ"

ಮಂಗಳೂರು, ಜ.3: ರಾಜಕಾರಣದಲ್ಲಿ ಸಿನಿಮೀಯ ಶೈಲಿಯ ಕಚ್ಚಾಟ, ದ್ವೇಷ ರಾಜಕಾರಣ ಸರಿಯಲ್ಲ. ಇಂತಹ ಕೃತ್ಯಗಳಿಂದಾಗಿಯೇ ಜನರಿಗೆ ಜನಪ್ರತಿನಿಧಿಗಳ ಮೇಲಿನ ಗೌರವ ಕಡಿಮೆಯಾಗಿದೆ. ಶಾಸಕರಾಗಿದ್ದುಕೊಂಡು ಒಬ್ಬರಿಗೊಬ್ಬರು ಪರಸ್ಪರ ಬೆದರಿಕೆ ಹಾಕುವುದು ತಪ್ಪು ನಡವಳಿಕೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಪ್ರತಿಕ್ರಿಯಿಸಿದ್ದಾರೆ.

ಸರ್ಕ್ಯೂಟ್ ಹೌಸ್ನಲ್ಲಿ ಶನಿವಾರ ಸುದ್ದಿಗೋಷ್ಠಿಯ ವೇಳೆ ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿ ಹುದ್ದೆಗಾಗಿನ ಆಕಾಂಕ್ಷಿಗಳ ಪಟ್ಟಿಯಲ್ಲಿ ನೀವು ಇದ್ದೀರಾ ಎಂಬ ಪ್ರಶ್ನೆಗೆ, ಅಷ್ಟು ಅರ್ಜೆಂಟ್ ನನಗಿಲ್ಲ. ಇನ್ನೂ 20 ವರ್ಷ ಕಳೆಯಲಿ. ನನ್ನ ಕ್ಷೇತ್ರದಲ್ಲಿ ಮತ್ತೆ ನಾಲ್ಕು ಬಾರಿ ಗೆಲ್ಲಿಸಿ ಕಳುಹಿಸಲಿ ಎಂದು ಅವರು ಹೇಳಿದರು.

ತುಳುನಾಡಿನಲ್ಲಿ ಜಾತ್ರೆಗಳಲ್ಲಿ ಕೋಳಿ ಅಂಕಕ್ಕೆ ಅವಕಾಶ ನೀಡಬೇಕೆಂಬ ಆಗ್ರಹದ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಈ ಬಗ್ಗೆ ದೀರ್ಘವಾದ ಚರ್ಚೆ ಆಗಿದೆ. ಜಾತ್ರೆಗಳಲ್ಲಿ ಕೋಳಿ ಅಂಕ ಇಲ್ಲಿನ ಸಂಪ್ರದಾಯ. ಬೆಟ್ಟಿಂಗ್, ಗ್ಯಾಂಬ್ಲಿಂಗ್ ನಡೆಯುತ್ತಿದ್ದರೆ ಅದರ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸಂಘಟಕರೇ ಹೇಳುತ್ತಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ನಿಯಮತವಿತವಾಗಿ ವ್ಯವಸ್ಥಿತ ನಿಯಮಗಳನ್ನು ರೂಪಿಸುವ ಅಗತ್ಯವಿದೆ. ಈ ಬಗ್ಗೆ ಕಾನೂನು ಸಚಿವರು, ಸಲಹಾ ಮಂಡಳಿ ಜತೆ ಮಾತನಾಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗಿದೆ ಎಂದರು.

ಯಾರು ದ್ವೇಷ ಭಾಷಣ ಮಾಡುತ್ತಾರೆಯೋ ಅವರ ಮೇಲೆ ಕ್ರಮ ಆಗಬೇಕು. ದೇಶ ಬಲಿಷ್ಠವಾಗಬೇಕಾದರೆ ಪ್ರತಿಯೊಬ್ಬರು ತಾವು ಆಡುವ ಮಾತು, ಮಾಡುವ ಕೆಲಸದ ಬಗ್ಗೆ ನಿಗಾ ಇರಿಸಬೇಕು. ಕಾನೂನಿನಲ್ಲಿ ಲೋಪ ದೋಷ ಇದ್ದಲಿ ಅದರ ಬಗ್ಗೆ ಲಿಖಿತವಾಗಿ ನೀಡಿದರೆ ಅದನ್ನು ಸರಿಪಡಿಸಬಹುದು. ಅದು ಬಿಟ್ಟು ವಿನಾ ಕಾರಣ ವಿರೋಧಿಸುವುದು ಸರಿಯಲ್ಲ ಎಂದು ದ್ವೇಷ ಭಾಷಣ ತಡೆ ಕಾನೂನಿನ ಕುರಿತು ಬಿಜೆಪಿ ವಿರೋಧದ ಪ್ರಶ್ನೆಗೆ ಅವರು ಉತ್ತರಿಸಿದರು.

ಕೋಗಿಲು ಬಡಾವಣೆ ಪ್ರಕರಣ ಸರಕಾರಕ್ಕೆ ಸಂಬಂಧಿಸಿದ್ದು. ಸರಕಾರ ಈ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಸ್ಪೀಕರ್ ಆಗಿ ನಾನು ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

Tags

UT Khadar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X