ದ.ಕ ಜಿಲ್ಲೆಯಲ್ಲಿ ಭಾರೀ ಮಳೆ; ಭೂಕುಸಿತದ ಸ್ಥಳಗಳಿಗೆ ತೆರಳುವಂತೆ ಉಸ್ತುವಾರಿ ಸಚಿವ, ಜಿಲ್ಲಾಧಿಕಾರಿಗೆ ಸಿಎಂ ಸೂಚನೆ

ಬೆಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತವುಂಟಾದ ಸ್ಥಳಗಳಿಗೆ ತಕ್ಷಣವೇ ತೆರಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ರಾತ್ರಿ ಬಿದ್ದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿಗಳು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ದ.ಕ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.
Next Story