ಕರಾವಳಿಯ ಅಭಿವೃದ್ಧಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ : ಸಿಎಂ ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್
ಮಂಗಳೂರು : ಕರಾವಳಿಯ ಸರ್ವತೋಮುಖ ಅಭಿವೃದ್ಧಿ ಹಾಗೂ ಸ್ಥಳೀಯ ಜನರ ಆಶೋತ್ತರಗಳನ್ನು ಈಡೇರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನೇರವಾಗಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, “ನಮಸ್ಕಾರ ಕುಡ್ಲ!” ಎಂದು ಕರಾವಳಿ ಜನತೆಗೆ ಶುಭಾಶಯ ಕೋರಿದ್ದಾರೆ.
ಕರಾವಳಿಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆ ಐತಿಹಾಸಿಕವಾಗಿದ್ದು, ಈ ಸಭೆ ಹೊಸ ಮುನ್ನುಡಿ ಬರೆಯಲಿದೆ ಎಂದು ಮುಖ್ಯಮಂತ್ರಿ ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
Next Story






