ಜು.8ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್.ವಿ.

ಭಾರೀ ಮಳೆಯ ಮುನ್ಸೂಚನೆ
ಮಂಗಳೂರು, ಜು.7: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.8ರ ಬುಧವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story




