Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. SIR ಅಸಂವಿಧಾನಿಕವಾಗಿದ್ದರೆ ಕೇರಳಂ ಸಿಎಂ...

SIR ಅಸಂವಿಧಾನಿಕವಾಗಿದ್ದರೆ ಕೇರಳಂ ಸಿಎಂ ರಾಜೀನಾಮೆ ನೀಡಬೇಕಲ್ಲವೇ? : ಕಾಂಗ್ರೆಸ್‌ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಸವಾಲು

ವಾರ್ತಾಭಾರತಿವಾರ್ತಾಭಾರತಿ6 Nov 2026 3:36 PM IST
share
SIR ಅಸಂವಿಧಾನಿಕವಾಗಿದ್ದರೆ ಕೇರಳಂ ಸಿಎಂ ರಾಜೀನಾಮೆ ನೀಡಬೇಕಲ್ಲವೇ? : ಕಾಂಗ್ರೆಸ್‌ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಸವಾಲು

ಮಂಗಳೂರು : ಎಸ್‌ಐಆರ್ ಪ್ರಕ್ರಿಯೆಯನ್ನು ಅಸಂವಿಧಾನಿಕ ಎಂದು ವಿರೋಧಿಸುವುದಾದರೆ ಎಸ್‌ಐಆರ್ ಪ್ರಕ್ರಿಯೆ ಬಳಿಕ ಚುನಾವಣೆ ನಡೆದು ಕೇರಳದ ಮುಖ್ಯಮಂತ್ರಿ ಆಗಿರುವ ವಿ.ಡಿ.ಸತೀಶನ್ ರಾಜೀನಾಮೆ ನೀಡಬೇಕಲ್ಲವೇ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ, ಜೆರೆಮಿ ಕಾರ್ಬಿನ್ ಸೇರಿದಂತೆ ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸಿರುವವರು ಭಾರತದ ಅಭಿವೃದ್ಧಿ ಮತ್ತು ಸ್ಥಿರತೆಯನ್ನು ಸಹಿಸಿಕೊಳ್ಳದೆ ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಆರೋಪಿಸುತ್ತಿರುವಂತೆ ಅಸಂವಿಧಾನಿಕವಾದ ಎಸ್‌ಐಆರ್ ಪ್ರಕ್ರಿಯೆ ನಂತರ ವಿ.ಡಿ.ಸತೀಶನ್ ಅವರು ಅಧಿಕಾರಕ್ಕೆ ಬಂದಿರುವುದರಿಂದ ತಮಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ನೈತಿಕ ಅಧಿಕಾರವಿಲ್ಲ ಎಂದು ಹೇಳಿ ರಾಜೀನಾಮೆ ನೀಡಬೇಕಲ್ಲವೇ ಎಂದು ಅವರು ಪ್ರಶ್ನಿಸಿದರು.

ರಾಹುಲ್ ಗಾಂಧಿ ಹಾಗೂ ವಿಪಕ್ಷ ನಾಯಕರು ಸಂವಿಧಾನದ ಪುಸ್ತಕವನ್ನು ಜೇಬಿನಲ್ಲಿಟ್ಟುಕೊಂಡು ತಿರುಗುತ್ತಾರೆಯೇ ಹೊರತು, ಅದರ ಮೂಲ ಆಶಯವನ್ನು ಓದಿಲ್ಲ. ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಹಠಾವೋ’ಎನ್ನುವುದು ಬಿಜೆಪಿಯ ಧ್ಯೇಯವಾದರೆ, ‘ಅರಾಜಕತೆ ಹರಡಿ, ಪ್ರಜಾಪ್ರಭುತ್ವ ಮುಗಿಸಿ’ ಎನ್ನುವುದು ವಿಪಕ್ಷಗಳ ಅಜೆಂಡಾ ಎಂದು ಅವರು ಹೇಳಿದರು.

ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾದಲ್ಲಿ ನಡೆದಂತೆ ಭಾರತದಲ್ಲೂ ವ್ಯವಸ್ಥಿತವಾಗಿ ’ತಕ್ತಾಪಲಟ್’ (ಸರ್ಕಾರ ಬದಲಾವಣೆ) ಮಾಡಲು ವಿಪಕ್ಷಗಳು ಯತ್ನಿಸುತ್ತಿವೆ. ಜಾರ್ಖಂಡ್ ಸಚಿವ ಇರ್ಫಾನ್ ಅನ್ಸಾರಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಭಾಟಿಯಾ ಅವರು, ರಾಹುಲ್ ಗಾಂಧಿ ಹಾಗೂ ಅವರ ವಲಯದವರು ವಿದೇಶಿ ನಿಧಿ ಪಡೆಯುವ ಜಾರ್ಜ್ ಸೋರೋಸ್, ಜೆರೆಮಿ ಕಾರ್ಬಿನ್ ಹಾಗೂ ಶತ್ರು ರಾಷ್ಟ್ರ ಪಾಕಿಸ್ತಾನದೊಂದಿಗೆ ಕೈಜೋಡಿಸಿ ದೇಶದ ಅಭಿವೃದ್ಧಿಯನ್ನು ತಡೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸುವುದನ್ನು ಬಿಜೆಪಿ ವಿರೋಧಿಸುತ್ತದೆ. ಭಾರತೀಯರ ಡಿಎನ್‌ಎಯಲ್ಲಿಯೇ ಶಾಂತಿ ಮತ್ತು ಕಾನೂನನ್ನು ಗೌರವಿಸುವ ಮನೋಭಾವ ಅಡಕವಾಗಿದೆ. ಆದರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಆಡಳಿತ ಬದಲಾವಣೆಯ ಹೆಸರಿನಲ್ಲಿ ಅರಾಜಕತೆಗೆ ಪ್ರಚೋದಿಸುವ ಹೇಳಿಕೆ ನೀಡುತ್ತಿದ್ದಾರೆ. ‘ತೇರೆ ಬಾಪ್ ಕೋಭೀ ಭಗಾಯೇಂಗೇ’ ಎಂದು ಪ್ರಧಾನಿ, ಗೃಹ ಸಚಿವರು, ಚುನಾವಣಾ ಆಯೋಗ ಮಾತ್ರವಲ್ಲದೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ವಿರುದ್ಧವೂ ಮಾತನಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ರಾಜಕೀಯ ಸಂಸ್ಕೃತಿಯನ್ನು ತೋರಿಸುತ್ತದೆ ಎಂದವರು ಹೇಳಿದರು.

ದೇಶದಲ್ಲಿ ಈ ಹಿಂದೆ 12 ಬಾರಿ ಇಂತಹ ಪರಿಷ್ಕರಣೆ ನಡೆದಿದೆ. ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 21(3)ರ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಅಧಿಕಾರವಿದೆ. ಅನರ್ಹರು, ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡವರನ್ನು ಪಟ್ಟಿಯಿಂದ ಕೈಬಿಡುವುದು ಕಾನೂನುಬದ್ಧ ಪ್ರಕ್ರಿಯೆಯಾಗಿದೆ ಎಂದರು.

ಸುಪ್ರೀಂ ಕೋರ್ಟ್ ಕೂಡ ಬಿಹಾರದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಗೆ ತಡೆ ನೀಡಿಲ್ಲ. ಚುನಾವಣಾ ಆಯೋಗಕ್ಕೆ ಈ ಪ್ರಕ್ರಿಯೆ ನಡೆಸುವ ಅಧಿಕಾರವಿದೆ ಎಂಬುದನ್ನು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೀಗಿರುವಾಗ ಎಸ್‌ಐಆರ್ ಅಸಂವಿಧಾನಿಕ ಎಂದು ಹೇಳಲು ರಾಹುಲ್ ಗಾಂಧಿ ಯಾರು ಎಂದು ಪ್ರಶ್ನಿಸಿದ ಅವರು, ಸಂವಿಧಾನದ ಬಗ್ಗೆ ಮೊದಲು ಅರಿವು ಬೆಳೆಸಿಕೊಂಡು ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಎಸ್‌ಐಆರ್ ಮೂಲಕ ಸುಮಾರು 13 ಕೋಟಿ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾದ ಬಗ್ಗೆ ಮಾತನಾಡುತ್ತಾ, ಇದರಲ್ಲಿ 6.30 ಕೋಟಿ ಮಂದಿ ತಮ್ಮ ಶಾಶ್ವತ ವಿಳಾಸದಿಂದ ಬೇರೆಡೆಗೆ ಸ್ಥಳಾಂತರಗೊಂಡವರು, ಮೂರು ಕೋಟಿ ಮಂದಿ ಪರಿಶೀಲನೆ ಸಂದರ್ಭದಲ್ಲಿ ವಿಳಾಸದಲ್ಲಿ ಲಭ್ಯವಿಲ್ಲದವರು, 2.80 ಕೋಟಿ ಮಂದಿ ಮೃತಪಟ್ಟವರು ಹಾಗೂ ಒಂದು ಕೋಟಿ ಮಂದಿ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರು ಆಗಿದ್ದಾರೆ. ಇಂತಹ ಹೆಸರುಗಳನ್ನು ಪರಿಶೀಲಿಸಿ ಅನರ್ಹ ಮತದಾರರನ್ನು ಕೈಬಿಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಭಾರತದ ಸಂವಿಧಾನವು ದೇಶದ ನಾಗರಿಕರಿಗೆ ಮಾತ್ರ ಮತದಾನದ ಹಕ್ಕು ನೀಡಿದೆ. ವಿದೇಶಿ ಅಕ್ರಮ ವಲಸಿಗರಿಗೆ ಭಾರತೀಯ ನಾಗರಿಕರಂತೆ ಮತದಾನದ ಹಕ್ಕು ನೀಡಲು ಸಾಧ್ಯವಿಲ್ಲ. ಮತದಾನದ ಹಕ್ಕು ಅತ್ಯಂತ ಅಮೂಲ್ಯವಾದದ್ದು. ಅದನ್ನು ಕೇವಲ ಭಾರತೀಯ ನಾಗರಿಕರು ಮಾತ್ರ ಚಲಾಯಿಸಬೇಕು. ಅಕ್ರಮ ವಲಸಿಗರು ಮತದಾರರ ಪಟ್ಟಿಯಲ್ಲಿ ಸೇರಿಕೊಂಡಿದ್ದರೆ ಅವರನ್ನು ಗುರುತಿಸಿ ಕೈಬಿಡುವುದು ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವದ ದೃಷ್ಟಿಯಿಂದಲೂ ಅಗತ್ಯವಾಗಿದೆ ಎಂದರು.

ಸದ್ಯ ನಡೆಯುತ್ತಿರುವ ಎಸ್‌ಐಆರ್ ಆರಂಭಕ್ಕೆ ಮೊದಲು 2014ರಿಂದ 2025ರವರೆಗೆ ಕಾಂಗ್ರೆಸ್ 56 ವಿಧಾನಸಭಾ ಚುನಾವಣೆಗಳಲ್ಲಿ ಸೋಲು ಕಂಡಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಕಾಂಗ್ರೆಸ್ ಯಾವುದೇ ರಾಜ್ಯದಲ್ಲಿ ಸತತ ಎರಡು ಬಾರಿ ಅಧಿಕಾರಕ್ಕೆ ಬಂದಿಲ್ಲ. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ರಾಜಕೀಯ ಪ್ರಾಬಲ್ಯ ಕಳೆದುಕೊಂಡಿದೆ. ಈ ಸೋಲುಗಳಿಗೆ ಇವಿಎಂ ಅಥವಾ ಚುನಾವಣಾ ಆಯೋಗವನ್ನು ಹೊಣೆ ಮಾಡದೆ ಪಕ್ಷದ ನಾಯಕತ್ವ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಚುನಾವಣಾ ಆಯೋಗದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಕಾಂಗ್ರೆಸ್ ಪ್ರಜಾಪ್ರಭುತ್ವದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಜನರ ವಿಶ್ವಾಸ ಕುಂದಿಸುವ ಪ್ರಯತ್ನ ಮಾಡುತ್ತಿದೆ. ಸಂವಿಧಾನ ಮತ್ತು ಚುನಾವಣಾ ವ್ಯವಸ್ಥೆಯ ರಕ್ಷಣೆಗಾಗಿ ಬಿಜೆಪಿ ಜನರ ಮುಂದೆ ವಾಸ್ತವಾಂಶಗಳನ್ನು ಇಡಲಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನದ ಭಾಗವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸಲಾಗುತ್ತಿದೆ ಎಂದು ಗೌರವ್ ಭಾಟಿಯಾ ತಿಳಿಸಿದರು.

ಗೋಷ್ಟಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮುಖಂಡರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಭಾರತೀಶ್, ವಸಂಜ ಪೂಜಾರಿ, ಪ್ರಸನ್ನ ದರ್ಭೆ ಉಪಸ್ಥಿತರಿದ್ದರು.

Tags

CongressGaurav BhatiaBJPkeralaSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X