Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಲಿತ ಕಾಲನಿಗಳಲ್ಲಿ ಸಿಸಿ ಕ್ಯಾಮರಾ...

ದಲಿತ ಕಾಲನಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ: ಪರಿಶಿಷ್ಟ ಜಾತಿ- ಪಂಗಡದ ಕುಂದುಕೊರತೆ ಸಭೆಯಲ್ಲಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ24 Nov 2024 2:42 PM IST
share
ದಲಿತ ಕಾಲನಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ: ಪರಿಶಿಷ್ಟ ಜಾತಿ- ಪಂಗಡದ ಕುಂದುಕೊರತೆ ಸಭೆಯಲ್ಲಿ ಒತ್ತಾಯ

ಮಂಗಳೂರು, ನ. 24: ದಲಿತ ಕಾಲನಿಗಳಲ್ಲಿ ಹದಿಹರೆಯದ ಮಕ್ಕಳು ತಪ್ಪು ದಾರಿ ಹಿಡಿಯದಂತೆ, ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕೆಂಬ ಬೇಡಿಕೆಯನ್ನು ಹಲವು ಸಮಯದಿಂದ ಮಾಡಲಾಗಿದೆ. ಆದರೆ ಕಾರ್ಯಗತವಾಗಿಲ್ಲ.ಈ ಬಗ್ಗೆ ಪೊಲೀಸ್ ಇಲಾಖೆ ಸಂಬಂಧಪಟ್ಟವರಿಗೆ ಸಲಹೆ ನೀಡಬೇಕು ಎಂದು ಅನಿಲ್ ಕಂಕನಾಡಿಯವರು ಮನವಿ ಮಾಡಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ರವಿವಾರ ಡಿಸಿಪಿಗಳಾದ ದಿನೇಶ್ ಕುಮಾರ್ ಮತ್ತು ಸಿದ್ದಾರ್ಥ್ ಗೋಯಲ್ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಾಸಿಕ ಕುಂದುಕೊರತೆ ಆಲಿಕೆ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು.

ನಗರ ಪಾಲಿಕೆಯಿಂದ ಈಗಾಗಲೇ ಈ ಬಗ್ಗೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಆದರೆ ಈ ಕಾರ್ಯ ಮಂಗಳೂರಿನ ಗ್ರಾಮಾಂತರ ಪ್ರದೇಶದಿಂದ ಆರಂಭಿಸಲಾಗುತ್ತಿದೆ. ಆದರೆ ಕ್ಯಾಮರಾ ಅಳವಡಿಕೆ ಕಾರ್ಯ ಮಂಗಳೂರಿನ ನಗರ ಪ್ರದೇಶಗಳು ಮೊದಲು ಆಗಬೇಕು ಎಂದರು.

ಈ ಬಗ್ಗೆ ಪಾಲಿಕೆಗೆ ಮಾಹಿತಿ ನೀಡುವುದಾಗಿ ಡಿಸಿಪಿ ದಿನೇಶ್ ಕುಮಾರ್‌ತಿಳಿಸಿದರು.

ಉರ್ವಾಸ್ಟೋರ್ ಬಸ್ಸು ನಿಲ್ದಾಣದ ಬಳಿ ಸಾವಿರಾರು ಸಂಖ್ಯೆಯಲ್ಲಿ ಬೆಳಗ್ಗಿನ ಹೊತ್ತು ಕಾರ್ಮಿಕರು ಸೇರುತ್ತಾರೆ. ಇದರಿಂದಾಗಿ ಆ ಪ್ರದೇಶದಲ್ಲಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವುದು ಮಾತ್ರವಲ್ಲದೆ, ಅಲ್ಲಿ ಸೇರುವ ಕಾರ್ಮಿಕರು ಆ ಪ್ರದೇಶವನ್ನು ಅಸ್ವಚ್ಛಗೊಳಿಸುತ್ತಾರೆ. ಅಲ್ಲೇ ಕೆಲವೊಂದು ಕಟ್ಟಡ ನಿರ್ಮಾಣದ ಯಂತ್ರಗಳನ್ನು ನಿಲ್ಲಿಸಲಾಗುತ್ತದೆ. ಈ ಬಗ್ಗೆ ಕ್ರಮ ಆಗಬೇಕು ಎಂದು ಸದಾಶಿವ ಉರ್ವಾಸ್ಟೋರ್ ಆಗ್ರಹಿಸಿದರು.

ಈ ಬಗ್ಗೆ ಟ್ರಾಫಿಕ್ ಪೊಲೀಸರಿಂದ ಸಾಕಷ್ಟು ಬಾರಿ ಸೂಚನೆ ನೀಡಲಾಗಿದ್ದರೂ ಮತ್ತೆ ಸಮಸ್ಯೆ ಪುನರಾವರ್ತನೆಯಾಗುತ್ತಿದೆ. ನಿರ್ಮಾಣ ಕಾಮಗಾರಿಗಾಗಿ ಕಾರ್ಮಿಕರನ್ನು ಸಾಗಿಸುವ ವಾಹನಗಳವರು ಅಥವಾ ಗುತ್ತಿಗೆದಾರರನ್ನು ಕರೆಸಿ ಅವರಿಗೆ ಸಮೀಪದ ಮೈದಾನ ಅಥವಾ ಪ್ರತ್ಯೇಕ ಸ್ಥಳದ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಾಗುವುದು ಎಂದು ಡಿಸಿಪಿ ದಿನೇಶ್ ಕುಮಾರ್ ಹೇಳಿದರು.

ನಗರದ ಖಾಸಗಿ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ರೋಹಿತ್ ಕುಮಾರ್ ಎಂಬವರಿಗೆ ಭತ್ತೆ, ಬೋನಸ್ ಹಣ ಮೊದಲಾದ ಸೌಲಭ್ಯ ನೀಡದೆ ತೊಂದರೆ ಕೊಟ್ಟಿರುವುದಲ್ಲದೆ, ಅವರು ಆ ಉದ್ಯೋಗ ಬಿಟ್ಟು ಬೇರ ಸಂಸ್ಥೆಗೆ ಸೇರಿದ್ದರೂ, ಅವರು ಹಿಂದೆ ನೀಡಿದ್ದ ತಮ್ಮ ಶೈಕ್ಷಣಿಕ ಮೂಲ ದಾಖಲೆಗಳನ್ನು ಹಿಂತಿರುಗಿಸದೆ ಕಿರುಕುಳ ನೀಡಲಾಗುತ್ತಿದೆ ಎಂದು ಆನಂದ್ ಎಸ್.ಪಿ.ಯವರು ಸಭೆಯಲ್ಲಿ ದೂರಿದರು.

ಈ ಬಗ್ಗೆ ಸಂಬಂಧಪಟ್ಟವರನ್ನು ವಿಚಾರಿಸಲು ಡಿಸಿಪಿಯವರು ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ಶಾಲಾ ಗೇಟ್‌ಗಳೆದುರು ಬಗೆಹರಿಯದ ಟ್ರಾಫಿಕ್ ಸಮಸ್ಯೆ

ನಗರದ ಜೆರೋಸಾ ಶಾಲೆಯ ಗೇಟ್‌ನ ಎದುರು ಮಕ್ಕಳನ್ನು ಕರೆತರುವ ವಾಹನಗಳನ್ನು ನಿಲ್ಲಿಸುವುದರಿಂದ ಬೆಳಗ್ಗೆ ಹಾಗೂ ಸಂಜೆ ಶಾಲೆ ಬಿಡುವ ಸಮಯದಲ್ಲಿ ಭಾರೀ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಶಾಲೆಯ ಒಳಗೆ ಜಾಗವಿದ್ದು, ವಾಹನಗಳಿಗೆ ಅಲ್ಲಿ ಪ್ರವೇಶ ನೀಡಿ ಮಕ್ಕಳನ್ನು ಬಿಟ್ಟು ಹೋಗಲು ಅವಕಾಶ ಕಲ್ಪಿಸಬೇಕು ಎಂದು ಆನಂದ್ ಎಸ್.ಪಿ.ಯವರು ಸಭೆಯಲ್ಲಿ ಪ್ರಸ್ತಾವಿಸಿದರು.

ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಈ ಸಮಸ್ಯೆಗಳಿವೆ. ಶಿಕ್ಷಣ ಸಂಸ್ಥೆಗಳ ಜತೆ ಈ ಬಗ್ಗೆ ನಿರಂತರ ಸಭೆಗಳಾಗುತ್ತಿವೆ. ಆದರೆ ಶಾಲೆಯ ಆವರಣದಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ವಾಹನಗಳಿಗೆ ಪ್ರವೇಶಿಸಲು ನಿರ್ಬಂಧಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ನಗರದ ಬೆಥನಿ ಶಾಲೆಯೊಂದರಲ್ಲಿ ಹಿಂದೆ ಇದೇ ರೀತಿ ಸಮಸ್ಯೆ ಇದ್ದು, ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಅವರಾ ಶಾಲಾ ಆರಂಭ ಹಾಗೂ ಮುಕ್ತಾಯದ ಸಮಯವನ್ನೇ ಬದಲಾಯಿಸಿ ಸುಗಮ ಟ್ರಾಫಿಕ್ ವ್ಯವಸ್ಥೆಗೆ ಅನುವು ಮಾಡಿದ್ದಾರೆ. ಅಂತಹ ವ್ಯವಸ್ಥೆ ಇತರ ಕಡೆಗೂ ಅನ್ವಯಿಸಿದರೆ ಉತ್ತಮ ಎಂದು ಸದಾಶಿವ ಉರ್ವಾಸ್ಟೋರ್ ತಿಳಿಸಿದಾಗ, ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸುವ ಪ್ರಯತ್ನ ನಡೆಸುವುದಾಗಿ ಡಿಸಿಪಿ ದಿನೇಶ್ ಕುಮಾರ್ ತಿಳಿಸಿದರು.

ಸಭೆಯಲ್ಲಿ ಎಸಿಪಿಗಳಾದ ನಜ್ಮಾ ಫಾರೂಕಿ, ಶ್ರೀಕಾಂತ್, ರವೀಶ್ ನಾಯ್ಕ್ ಉಪಸ್ಥಿತರಿದ್ದರು. ಎಸಿಪಿ ಧನ್ಯಾ ಸಭೆಯನ್ನು ನಿರ್ವಹಿಸಿ, ವಂದಿಸಿದರು.

ಮಂಗಳೂರಿನ ಪುರಭವದಲ್ಲಿ ನಡೆದಿದ್ದ ತುಳು ಜಾನಪದ ಕಾರ್ಯಕ್ರಮದಲ್ಲಿ ನಿಷೇಧಿತ ಪದ ಬಳಕೆ ಆರೋಪಕ್ಕೆ ಸಂಬಂಧಿಸಿ ಕ್ರಮ ಆಗಿಲ್ಲ. ದಲಿತರನ್ನು ಇನ್ನೂ ಅಸ್ಪಶ್ಯರನ್ನಾಗಿ ಸೂಚಿಸುವ ಇಂತಹ ಪದಗಳನ್ನು ಬಳಸಿ ಕಾರ್ಯಕ್ರಮ ಮಾಡುವ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ದಲಿತ ಮುಖಂಡ ಎಸ್.ಪಿ. ಆನಂದ್‌ರವರು ಹೇಳಿದರು.

ಈ ಬಗ್ಗೆ ಕಾನೂನುತಜ್ಞರ ಅಭಿಪ್ರಾಯ ಕೇಳಲಾಗಿದೆ. ಕಾರ್ಯಕ್ರಮದ ವೀಡಿಯೋ ನೋಡಿ ಅಭಿಪ್ರಾಯ ತಿಳಿಸುವುದಾಗಿ ಅವರು ಹೇಳಿದ್ದಾರೆ. ಈ ನಡುವೆ ಕಾರ್ಯಕ್ರಮ ಆಯೋಜಕರು ಹಾಗೂ ಕಾರ್ಯಕ್ರಮ ನಡೆಸಿದವರನ್ನು ಕರೆಸಿ ವಿವರ ಕೇಳಲಾಗಿದೆ. ಕಾರ್ಯಕ್ರಮ ಮಾಡಿರುವವರು ತಪ್ಪಿನಿಂದ ಆಗಿರುವುದಾಗಿ ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದಾಗ, ಇಂತಹ ಪ್ರಕರಣ ನಡೆಯಬಾರದು. ವೀಡಿಯೋ ಪರಿಶೀಲಿಸಿ ಕ್ರಮ ವಹಿಸಿ ಎಂದು ಡಿಸಿಪಿ ದಿನೇಶ್ ಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X