ಜ.9: ಬಂಟರ ಮಾತೃ ಸಂಘದಿಂದ ವಿನಯ ಹೆಗ್ಡೆಯವರಿಗೆ ಶ್ರದ್ದಾಂಜಲಿ ಸಭೆ

ಮಂಗಳೂರು, ಜ.7: ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಇತ್ತೀಚೆಗೆ ನಿಧನರಾದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಹೆಗ್ಡೆಯವರಿಗೆ ಶ್ರದ್ದಾಂಜಲಿ ಸಭೆ ಮತ್ತು ಪ್ರಾರ್ಥನಾ ಸಭೆ ಜ.9ರಂದು ಸಂಜೆ ಐದಕ್ಕೆ ಬಂಟ್ಸ್ ಹಾಸ್ಟೆಲ್ ಶ್ರೀರಾಮಕೃಷ್ಣ ಕಾಲೇಜು ಬಳಿಯಿರುವ ಶ್ರೀಮತಿ ಗೀತಾ ಎಸ್.ಎಂ. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.
ಡಾ.ವಿನಯ ಹೆಗ್ಡೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞರು. ನಿಟ್ಟೆ ಯುನಿವರ್ಸಿಟಿ ರೂವಾರಿಯಾಗಿದ್ದ ಅವರು ದಕ್ಷ ಆಡಳಿತಗಾರರಾಗಿದ್ದರು. ಅವರಿಗೆ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.
Next Story





