Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೆಪ್ಪು: ಮಹಾಕಾಳಿ ಪಡ್ಪು ಮೊಯ್ಲಿ ಕೆರೆ...

ಜೆಪ್ಪು: ಮಹಾಕಾಳಿ ಪಡ್ಪು ಮೊಯ್ಲಿ ಕೆರೆ ನೀರಿನಿಂದ ಕೃತಕ ಕೆರೆ ಸೃಷ್ಟಿ; ಸ್ಥಳೀಯ ಮನೆ ಕಾಂಪೌಂಡ್ ಕುಸಿತ

ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಶಾಸಕರು ಗಮನ ಹರಿಸಲು ಸ್ಥಳೀಯರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 May 2025 10:45 AM IST
share
ಜೆಪ್ಪು: ಮಹಾಕಾಳಿ ಪಡ್ಪು ಮೊಯ್ಲಿ ಕೆರೆ ನೀರಿನಿಂದ ಕೃತಕ ಕೆರೆ ಸೃಷ್ಟಿ; ಸ್ಥಳೀಯ ಮನೆ ಕಾಂಪೌಂಡ್  ಕುಸಿತ

ಮಂಗಳೂರು: ಜೆಪ್ಪು ಮಹಾಕಾಳಿ ಪಡ್ಫು ಶೆಟ್ಟಿ ಬೆಟ್ಟು ಸಮೀಪ ರೈಲ್ವೆ ಅಂಡರ್​ಪಾಸ್​ ಕಾಮಗಾರಿ ಮತ್ತು ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದು, ಪ್ರಸ್ತುತ ಸುರಿಯುತ್ತಿರುವ ಅಲ್ಪ ಪ್ರಮಾಣದ ಮಳೆಗೆ ಸ್ಥಳೀಯ ಪರಿಸರದಲ್ಲಿ ನೀರು ನಿಂತು ವಿವಿಧ ರೀತಿಯ ಸಮಸ್ಯೆ ಉಂಟಾಗಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿರುವ ಈ ಪರಿಸರದಲ್ಲಿ ಈಗಾಗಲೇ ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲದಿರುವುದು, ಅಂಡರ್​ಪಾಸ್​​ಗಳ ನಿರ್ಮಾಣ ಸಂದರ್ಭ ಸರಾಗವಾಗಿ ಮಳೆ ನೀರು ಹರಿಯುವ ವ್ಯವಸ್ಥೆ ಮಾಡದೇ ಇರುವುದು, ಕಾಮಗಾರಿಗೆ ಗುಂಡಿ ತೋಡಿ ಅದನ್ನು ಮುಚ್ಚದಿರುವುದು ಇತ್ಯಾದಿ ಕಾರಣಗಳಿಂದ ​ಸ್ಥಳೀಯ ಪರಿಸರದಲ್ಲಿ ಕೃತಕ ಬಾವಿ ನಿರ್ಮಾಣವಾಗಿದೆ. ಸ್ಥಳೀಯ ಪುರಾತನ ಪ್ರಸಿದ್ಧ ಶೆಟ್ಟಿ ಬೆಟ್ಟು ಮೊಯ್ಲಿ ಕೆರೆಯೂ ಈ ಸಮಸ್ಯೆಯಿಂದ ತನ್ನ ಮೂಲ ಸ್ವರೂಪ ಕಳೆದುಕೊಂಡು ಮಲಿನಗೊಂಡಿದ್ದು, ಸ್ಮಾರ್ಟ್ ಸಿಟಿ ವತಿಯಿಂದ ಈ ಪರಿಸರದಲ್ಲಿ ಇನ್ನೊಂದು ಕೃತಕ ಕೆರೆ ನಿರ್ಮಾಣ ಆದಂತಿದೆ. ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಂಡಿರುವ ಈ ಕೆರೆಯು ನಿರ್ವಹಣೆ ಕೊರತೆಯಿಂದ ಈ ಮಳೆಯ ಪರಿಣಾಮ ಇನ್ನಷ್ಟು ತನ್ನ ಮೂಲ ಸ್ವರೂಪ ಕಳೆದುಕೊಂಡಿದೆ.

ಸ್ಥಳೀಯ ಪರಿಸರದ ಮನೆಯ ಸಮೀಪ ಕಾಮಗಾರಿಗಳಿಗೆ ತೋಡಿರುವ ಗುಂಡಿಗಳಿಂದ ನೀರು ನಿಂತು ಸ್ಥಳೀಯ ಮನೆಯ ತಳ ಫೌಂಡೇಶನ್ ಗೋಡೆಗೆ ಧಕ್ಕೆಯಾಗಿ ಮನೆ ಗೋಡೆ ಬೀಳುವ ಸ್ಥಿತಿ ಉಂಟಾಗಿದೆ. ಇನ್ನೆರಡು ದಿನಗಳಲ್ಲಿ ಸರಾಗ ಮಳೆ ಸುರಿದರೆ ಮನೆ ಕುಸಿದು ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಇದೇ ಪರಿಸರದ ಮನೆಯ ಕಾಂಪೌಂಡು ಕೂಡ ಬಿದ್ದು ಸಮಸ್ಯೆ ಸೃಷ್ಟಿಯಾಗಿದೆ. ಒಂದೆಡೆ ಕಾಮಗಾರಿ ಕುಂಟುತ್ತಾ ಸಾಗಿರುವುದು, ಸ್ಥಳೀಯರ ಸಲಹೆ ಸೂಚನೆಗಳನ್ನು ಕಡೆಗಣಿಸಿ ಮಳೆ ನೀರು ಹರಿಯಲು ವ್ಯವಸ್ಥೆ ಮಾಡದೇ ತಮ್ಮ ಮೂಗಿನ ನೇರಕ್ಕೆ ಕಾಮಗಾರಿ ನಡೆಸುತ್ತಿರುವ ಪರಿಣಾಮ ಈ ಪರಿಸರದಲ್ಲಿ ಸಮಸ್ಯೆ ಸೃಷ್ಟಿಯಾಗಿದೆ.

ಈ ಪರಿಸ್ಥಿತಿಗೆ ಇಲಾಖಾ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೇ ಕಾರಣ ಆಗಿದ್ದು, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಗಮನ ಹರಿಸಬೇಕು. ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ ಈ ಅವ್ಯವಸ್ಥೆಯ ಪರಿಣಾಮ ಆಗುವ ಕೃತಕ ಅವ್ಯವಸ್ಥೆಗಳು ಮತ್ತು ಮುಂದೆ ನೀರು ನಿಂತು ಎದುರಾಗುವ ಡೆಂಗ್ಯೂ ಇನ್ನಿತರ ಸಾಂಕ್ರಾಮಿಕ ರೋಗಗಳಿಂದ ಜನರಿಗೆ ಎದುರಾಗಲಿರುವ ಸಂಕಷ್ಟಕ್ಕೆ ಶೀಘ್ರ ಮುಕ್ತಿ ಕಾಣಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X